ಅಂಬೇಡ್ಕರ್‌ಗೆ ಸಾವಿನ ನಂತರವೂ ಕಾಂಗ್ರೆಸ್‌ನಿಂದ ಅವಮಾನ: ರಾಮಚಂದ್ರ

KannadaprabhaNewsNetwork |  
Published : Apr 15, 2024, 01:16 AM IST
 ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೩ನೇ ಜಯಂತಿ ಕಾರ್ಯಕ್ರಮದಲ್ಲಿ | Kannada Prabha

ಸಾರಾಂಶ

ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ಗೆ ಬದುಕಿದ್ದಾಗಲೂ, ಸಾವಿನ ನಂತರವೂ ಕಾಂಗ್ರೆಸ್ ಅವಮಾನಿಸುತ್ತಿದೆ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‌ಗೆ ಬದುಕಿದ್ದಾಗಲೂ, ಸಾವಿನ ನಂತರವೂ ಕಾಂಗ್ರೆಸ್ ಅವಮಾನಿಸುತ್ತಿದೆ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ ಆರೋಪಿಸಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ 133ನೇ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಅಂಬೇಡ್ಕರ್‌ ಸಂವಿಧಾನದಡಿಯಲ್ಲಿ ಸರ್ವರಿಗೂ ಸಮಾನತೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಅವರನ್ನು ಚುನಾವಣೆಯಲ್ಲಿ ಸೋಲಿಸಿತು. ಮರಣದ ನಂತರವೂ ಅಂತ್ಯಸಂಸ್ಕಾರಕ್ಕೆ ಜಾಗ ನೀಡದೆ ಅವಮಾನಿಸಿದೆ ಎಂದರು.ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಷಾರ್ಚನೆ ಮಾಡಿ, ಪ್ರಧಾನಮಂತ್ರಿ ಮೋದಿಯವರು ಸಂವಿಧಾನದಡಿಯಲ್ಲಿ ಆಡಳಿತ ನಡೆಸುವ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಅಲ್ಲದೆ ಅಂಬೇಡ್ಕರ್‌ ಗೌರವಾರ್ಥವಾಗಿ 5 ಸ್ಥಳಗಳನ್ನು ಪಂಚತೀರ್ಥವಾಗಿ ಸ್ಥಾಪಿಸುವ ಮೂಲಕ ದೊಡ್ಡಗೌರವ ನೀಡಿದೆ ಎಂದರು.ಅಂಬೇಡ್ಕರ್‌ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಸುಳ್ಳು ಹೇಳುತ್ತಿದ್ದಾರೆ ಇದಕ್ಕೆ ಯಾರು ಕಿವಿಗೊಡದಿರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್‌ಸಿ ಮೋರ್ಚಾದ ಅಧ್ಯಕ್ಷ ಮೂಡಹಳ್ಳಿ ಎಚ್. ಮೂರ್ತಿ ಮಾತನಾಡಿ, ಬಾಬಾ ಸಾಹೇಬ್ ಡಾ.ಬಿ.ಅರ್. ಅಂಬೇಡ್ಕರ್ ತತ್ವ, ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಪಕ್ಷದ ಸಂಘಟನೆಗಾಗಿ ಶ್ರಮಿಸೋಣ ಎಂದರು. ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವುವಿರಾಟ್, ಟಗರಪುರ ರೇವಣ್ಣ, ಕಾರ್ಯದರ್ಶಿ ನಟರಾಜು ಗ್ರಾಮಾಂತರ ಮಂಡಲ ಅಧ್ಯಕ್ಷ ಮಹೇಶ್, ಟೌನ್ ಅಧ್ಕಕ್ಷ ಶಿವರಾಜ್, ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರುಶೇಖರ್, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ನಗರಸಭಾ ಸದಸ್ಯ ಕುಮುದ ಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ ಮುತ್ತಿಗೆ ಮೂರ್ತಿ, ಖಜಾಂಚಿ ಅರಕಲವಾಡಿ ಮಹದೇವಯ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಮುಕುಂದಮೂರ್ತಿ, ಟೌನ್ ಅಧ್ಯಕ್ಷ ಪರಶಿವಯ್ಯ, ಕಚೇರಿ ಕಾರ್ಯದರ್ಶಿ ರಾಜು, ಮಾಧ್ಯಮ ಸಹಪ್ರಮುಖ್ ಅಶ್ವಿನ್, ನಗರಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್, ಆರ್.ಎಂ.ಶಿವಣ್ಣ, ಲಿಂಗರಾಜು, ಶಿವಕುಮಾರ್, ರಾಜಪ್ಪ, ವೇಣುಗೋಪಾಲ್, ಭಾನುಪ್ರಕಾಶ್, ಸಿದ್ದರಾಜು ಹಾಜರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ