ಅಂಬೇಡ್ಕರ್‌ ಆದರ್ಶ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ: ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜು

KannadaprabhaNewsNetwork |  
Published : Apr 23, 2025, 12:35 AM IST
ಪೋಟೋ – 22 ಹೆಚ್‌ಎಸ್‌ಕೆ 2ಹೊಸಕೋಟೆ ತಾಲೂಕಿನ ನಡವತ್ತಿ ಗ್ರಾಮದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಗ್ರಾಪಂ ಅಧ್ಯಕ್ಷ ನಡವತ್ತಿ ಕಾಂತರಾಜು ನೀಡಿ ಗೌರವಿಸಿದರು. | Kannada Prabha

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್. ಅಪಮಾನ, ಅಡ್ಡಿ ಆತಂಕಗಳನ್ನೆಲ್ಲ ಸಮರ್ಥವಾಗಿ ಎದುರಿಸಿ ಶೋಷಿತ ವರ್ಗ ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತೆ ಮಾಡಿದ ಅಂಬೇಡ್ಕರ್ ಅವರ ಜೀವನ ಇಡೀ ಜಗತ್ತಿಗೆ ಎಲ್ಲ ಕಾಲಕ್ಕೂ ಮಾದರಿ.

ಕನ್ನಡಪ್ರಭ ವಾರ್ತೆ ಹೊಸಕೋಟೆ

ಬಾಬಾ ಸಾಹೇಬ ಅಂಬೇಡ್ಕರ್‌ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಅಂಬೇಡ್ಕರ್‌ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿವೆ ಎಂದು ಸಮೇತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಂತರಾಜು ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ನಡವತ್ತಿ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ೧೩೪ನೇ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

ಇಂದಿನ ಯುವಕರಿಗೆ ಅಂಬೇಡ್ಕರ್ ಅವರ ಜೀವನ ಚರಿತ್ರೆ ಮಾದರಿಯಾಗಿದೆ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ ವ್ಯವಸ್ಥೆಯ ಕಾರಣದಿಂದ ಅಸ್ಪ್ರಶ್ಯತೆ, ಅಸಮಾನತೆಯಿಂದಾಗಿ ರೋಗಗ್ರಸ್ತವಾಗಿದ್ದ ಸಮಾಜಕ್ಕೆ ಸಂವಿಧಾನದ ಮೂಲಕ ಔಷಧೋಪಚಾರ ಮಾಡಿದ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಅಪಮಾನ, ಅಡ್ಡಿ ಆತಂಕಗಳನ್ನೆಲ್ಲ ಸಮರ್ಥವಾಗಿ ಎದುರಿಸಿ ಶೋಷಿತ ವರ್ಗ ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತೆ ಮಾಡಿದ ಅಂಬೇಡ್ಕರ್ ಅವರ ಜೀವನ ಇಡೀ ಜಗತ್ತಿಗೆ ಎಲ್ಲ ಕಾಲಕ್ಕೂ ಮಾದರಿ ಎಂದರು.

ಆರೋಗ್ಯ ಉಚಿತ ತಪಾಸಣಾ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಶಂಕರ ಗೌಡ, ಅಣ್ಣಾ ಸಾಹೇಬ್ ಪಾಟೀಲ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ, ಎಂಕಾಂ, ಎಲ್ ಎಲ್ ಬಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು

ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್ , ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶಂಕರ್, ಮುಖಂಡರಾದ ನಾಗೇಶ್ , ನಾಗರಾಜ್ , ಸುಬ್ರಮಣಿ ,ಅವಿನಾಶ್ ಗೌಡ ,ವಿಜಯಕುಮಾರ್, ಶ್ರೀನಿವಾಸ್, ಜ್ಯೋತೇಶ್ ಹಾಗೂ ಅಂಬೇಡ್ಕರ್ ಯುವಕರ ಸೇವಾ ಸಮಿತಿ ನಡವತ್ತಿ ಮತ್ತು ಬಹುಜನ ವಿದ್ಯಾರ್ಥಿ ಸಂಘ ಪದಾಧಿಕಾರಿಗಳು ಹಾಜರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ