ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಅಂಬೇಡ್ಕರ್‌ ಕಾರಣ: ಹರೀಶ್‌ ಪೂಂಜ

KannadaprabhaNewsNetwork |  
Published : Apr 17, 2025, 12:06 AM IST
ಅಂಬೇಡ್ಕರ್ | Kannada Prabha

ಸಾರಾಂಶ

ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ನೆರವೇರಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಪ್ರೇರಣಾದಾಯಕವಾದದ್ದು. ದೇಶದಲ್ಲಿ ಪ್ರಜಾಪ್ರಭುತ್ವ ವಿರುವುದು ಅಂಬೇಡ್ಕರ್ ಅವರಿಂದ ಎಂದು ಶಾಸಕ ಹರೀಶ್ ಪೂಂಜಾ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತು ಮೆಚ್ಚುವ ಸಂವಿಧಾನ ನೀಡಿದ ಅಂಬೇಡ್ಕರ್ ಧರ್ಮಾಧಾರಿತ ಮೀಸಲಾತಿಗೆ ವಿರೋಧ ಪಡಿಸಿದ್ದರು. ತಾಲೂಕು ಕ್ರೀಡಾಂಗಣದಲ್ಲಿ ಮೂರು ಎಕರೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಉದ್ದೇಶಿಸಿ ಹಿಂದಿನ ಸರ್ಕಾರ ಸುಮಾರು ಎಂಟು ಕೋಟಿ ರು. ಅನುದಾನ ಮಂಜೂರಾತಿ ಮಾಡಿದ್ದು ಅದನ್ನು ಈಗಿನ ಸರ್ಕಾರ ತಡೆ ಹಿಡಿದಿದೆ. ಅನೇಕ ಬಾರಿ ಈ ಬಗ್ಗೆ ಸಂಬಂಧ ಪಟ್ಟ ಸಚಿವರಲ್ಲಿ ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಲಾಗಿದ್ದು ಮುಂದಿನ ಮೂರು ವರ್ಷದೊಳಗಿನ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು.

ವಸತಿನಿಲಯದಲ್ಲಿದ್ದು ದ್ವಿತಿಯ ಪಿ.ಯು.ಸಿ.ಯಲ್ಲಿ 88.83 ಶೇ. ಅಂಕ ಗಳಿಸಿರುವ ವಿಶೇಷ ಚೇತನ ವಿದ್ಯಾರ್ಥಿನಿ ಹಸೀನಾ ಅವರ ಮುಂದಿನ ವಿದ್ಯಾಭ್ಯಾಸಕ್ಕೆಗೆ ನೆರವು ನೀಡುವುದಾಗಿ ಶಾಸಕರು ತಿಳಿಸಿದರು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಸಾಹಿತಿ ಅರವಿಂದ ಚೊಕ್ಕಾಡಿ ಪ್ರದಾನ ಭಾಷಣ ಮಾಡಿದರು. ತಹಸೀಲ್ದಾರ್‌ ಪೃಥ್ವಿ ಸಾನಿಕಂ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ತಾ.ಪಂ. ಮುಖ್ಯ ಕಾರ್ಯ ನಿರ್ವಾಹಣಾದಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಧನಂಜಯ ಇದ್ದರು. ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಇದ್ದುಕೊಂಡು 2025 ರ ದ್ವಿತೀಯ ಪಿ.ಯು.ಸಿ.ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಮುರಲೀಧರ ಸ್ವಾಗತಿಸಿದರು. ತಾ.ಪಂ. ಸಂಯೋಜಕ ಜಯಾನಂದ್ ವಂದಿಸಿದರು. ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ, ಆಶಾಪೂರ್ಣಿಮ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ