ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ತಾಲೂಕು ಕಚೇರಿ ಬಳಿಯ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ನಂತರ ಪೂಜೆ ಸಲ್ಲಿಸಿ ಮೊಂಬತ್ತಿ ಬೆಳಗಿಸಿ ಗೌರವ ಸಲ್ಲಿಸುವ ಮೂಲಕ 134ನೇ ಅಂಬೇಡ್ಕರ್ ಜನ್ಮದಿನವನ್ನು ಆಚರಿಸಿದರು.
ನಂತರ ಮಾತನಾಡಿದ ಮಾಜಿ ಶಾಸಕರು, ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರಿಗೂ ಸಮ ಬಾಳು ಸಮಪಾಲು ನೀಡಿದ ಮಹಾನ್ ಮಾನವತಾವಾದಿ. ಅವರ ದೂರ ದೃಷ್ಟಿಯಿಂದದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅಂಬೇಡ್ಕರ್ ಬರೆದ ಸಂವಿಧಾನ ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವ ಹಂತಕ್ಕೆ ತೆಗೆದುಕೊಂಡು ಹೋದಂತ ದೀಮಂತ ನಾಯಕ ಎಂದು ಬಣ್ಣಿಸಿದರು.ಈ ವೇಳೆ ಸಂಘಟನೆ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಶ್ರೀರಂಗಪಟ್ಟಣ:
ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಅಂಬೇಡ್ಕರ್ ರಚಿತ ಸಂವಿಧಾನ ಎಲ್ಲಾ ಜಾತಿ, ಧರ್ಮ ಹಾಗೂ ವರ್ಗಗಳಿಗೂ ಸಮಾನತೆ ದೊರಕಿಸಿಕೊಟ್ಟಿದೆ ಎಂದರು.
ಈ ವೇಳೆ ಸಂಘಟನೆ ಮುಖಂಡರು ಸೇರಿದಂತೆ ತಾಲೂಕು ಆಡಳಿತದ ಅಧಿಕಾರಿಗಳು ಇತರರು ಹಾಜರಿದ್ದರು.