ಕನ್ನಡಪ್ರಭ ವಾರ್ತೆ ವಿಜಯಪುರ
ವಿವಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ದೇಶದ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಆಳವಾದ ಕಾನೂನು ಪಾಂಡಿತ್ಯ, ಸಮಾಜದ ನಾನಾ ವರ್ಗಗಳ ಸಮಸ್ಯೆಗಳ ಕುರಿತು ಹೋಂದಿದ್ದ ಸೂಕ್ಷ್ಮ ಅರಿವು ಹಾಗೂ ಸಮಾನತೆಯ ಬದ್ಧತೆಯು ಭಾರತದ ಸಂವಿಧಾನವನ್ನು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಲು ಕಾರಣವಾಗಿದೆ ಎಂದರು.
ಡೀಮ್ಡ್ ವಿವಿ ಕುಲಪತಿ ಡಾ.ಅರುಣ ಇನಾಮದಾರ ಮಾತನಾಡಿ, ಶೈಕ್ಷಣಿಕ ಸಾಧನೆಗಳು ಮತ್ತು ಭಾರತೀಯ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ.ಆರ್.ವಿ.ಕುಲಕರ್ಣಿ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ.ಎಸ್.ಎಸ್.ದೇವರಮನಿ, ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ತೇಜಸ್ವಿನಿ ವಲ್ಲಭ, ಹಿರಿಯ ಉಪಪ್ರಾಂಶುಪಾಲ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಂಶುಪಾಲ ಡಾ.ಆನಂದ ಅಂಬಲಿ, ಅಲೈಡ ಹೆಲ್ತ್ ಸಾಯಿನ್ಸ ಡೀನ್ ಡಾ.ಎಸ್.ವಿ.ಪಾಟೀಲ, ಆರ್ ಆ್ಯಂಡ್ ಡಿ ನಿರ್ದೇಶಕ, ಡಾ.ಎಂ.ಎಂ.ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ.ಎಸ್.ಎನ್.ಬೆಂಟೂರ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಘುವೀರ ಕುಲಕರ್ಣಿ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ ಡಾ.ಶ್ರೀಧರ ಬಗಲಿ, ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.