ವಿಜಯಪುರ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಪ್ರಜಾಪ್ರಭುತ್ವ ಇರಬೇಕು ಎಂಬ ಮಹೋನ್ನತ ಉದ್ದೇಶದಿಂದ ಸಂವಿಧಾನವನ್ನು ಬರೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿಯೇ ಇಂದಿನ ಯುವ ಜನತೆ ನಡೆಯಬೇಕೆಂದು ತಿಡಗುಂದಿಯ ಕೆಜಿಎಸ್ಎಸ್ ಸಂಸ್ಥೆಯ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಆಡಳಿತಾಧಿಕಾರಿ ಕುಮಾರಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಪ್ರಜಾಪ್ರಭುತ್ವ ಇರಬೇಕು ಎಂಬ ಮಹೋನ್ನತ ಉದ್ದೇಶದಿಂದ ಸಂವಿಧಾನವನ್ನು ಬರೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿಯೇ ಇಂದಿನ ಯುವ ಜನತೆ ನಡೆಯಬೇಕೆಂದು ತಿಡಗುಂದಿಯ ಕೆಜಿಎಸ್ಎಸ್ ಸಂಸ್ಥೆಯ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಆಡಳಿತಾಧಿಕಾರಿ ಕುಮಾರಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ಶಿಕ್ಷಣದಲ್ಲಿ ದೇಶಕ್ಕೆ ಮಾದರಿಯಾಗಬೇಕೆಂಬ ಛಲವನ್ನು ಚಿಕ್ಕ ವಯಸ್ಸಿನಲ್ಲಿಯೇ ಅಳಿವಡಿಸಿಕೊಂಡಿದ್ದರು. ಅದೇ ರೀತಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ. ತಂದೆ-ತಾಯಿಗಳ ಮಾರ್ಗದರ್ಶನದಲ್ಲಿ ಬೆಳೆದು ದೇಶಕ್ಕೆ ಕೀರ್ತಿ ತರಲು ಶ್ರಮಿಸುವಂತೆ ಕಿವಿಮಾತು ಹೇಳಿದರು.ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯ ಪಿ.ಎ.ಕೋಟ್ಯಾಳ ಸ್ವಾಗತಿಸಿದರು. ಶಿಕ್ಷಕ ಎಚ್.ಆರ್.ಬಿರಾದಾರ ವಂದಿಸಿದರು. ಸಂಸ್ಥೆಯ ಅಧ್ಯಕ್ಷ ಬಸನಗೌಡ ಹರನಾಳ, ಕೋ-ಆರ್ಡಿನೇಟರ್ ಬಿ. ರಾಜಶೇಖರ ರೆಡ್ಡಿ, ಮುಖ್ಯೋಪಾಧ್ಯಾಯ ಎಸ್.ಎಸ್.ವಾಲಿಕಾರ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.
ವಿಜಯಪುರ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಪ್ರಜಾಪ್ರಭುತ್ವ ಇರಬೇಕು ಎಂಬ ಮಹೋನ್ನತ ಉದ್ದೇಶದಿಂದ ಸಂವಿಧಾನವನ್ನು ಬರೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿಯೇ ಇಂದಿನ ಯುವ ಜನತೆ ನಡೆಯಬೇಕೆಂದು ತಿಡಗುಂದಿಯ ಕೆಜಿಎಸ್ಎಸ್ ಸಂಸ್ಥೆಯ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಆಡಳಿತಾಧಿಕಾರಿ ಕುಮಾರಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.