ಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ, ಕೊಪ್ಪಳ ತಹಸೀಲ್ದಾರ ವಿಠಲ್ ಚೌಗಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ಪುತ್ಥಳಿಗೆ ಮಾಲಾರ್ಪಣೆ:
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಹೊಸಪೇಟೆ ರಸ್ತೆಯಲ್ಲಿರುವ ಕಿಶೋರಿ ಪೆಟ್ರೋಲ್ ಬಂಕ್ ಹಿಂಭಾಗದ ನಗರಸಭೆಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮಹನೀಯರ ಪುತ್ಥಳಿಗೆ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಮಹನೀಯರಿಗೆ ಗೌರವ ಸಲ್ಲಿಸಿದರು.ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಪ್ಪಳ ವಿಶ್ವವಿದ್ಯಾಲಯ:ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಆಚರಿಸಲಾಯಿತು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಕೆ.ವಿ. ಪ್ರಸಾದ್, ನಿರ್ದೇಶಕ ಪ್ರೊ. ಚನ್ನಬಸವಪ್ಪ ಚಲವಾದಿ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸೂರ್ಯಕಾಂತ ಸಾದು, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಸವರಾಜ ಈಳಿಗನೂರ ಸೇರಿದಂತೆ ಇತರೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.