ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಅಶೋಕ್‌ನಗರ ಮಾದಿಗರ ಸಂಘಟನೆಗಳ ಒಕ್ಕೂಟದಿಂದ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್‌ರಾಂ ಜಯಂತಿ ಅಂಗವಾಗಿ ಮಹನೀಯರ ಭಾವಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮಾಜಿ ಉಪಪ್ರಧಾನಿ ಹಾಗೂ ಶೋಷಿತ ವರ್ಗಗಳ ಧ್ವನಿಯಾಗುವ ಜೊತೆಗೆ ಕೃಷಿ ಸಚಿವರಾಗಿದ್ದ ಕಾಲದಲ್ಲಿ ಭಾರತವು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿ ಯಶಸ್ವಿಯಾಗಿ ದೀನದಲಿತರ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾಪುರುಷರಾಗಿದ್ದಾರೆಂದು ಸ್ಮರಿಸಿದರು.ಡಾ.ಬಿ.ಆರ್.ಅಂಬೇಡ್ಕರ್ ವಿಶ್ವದಲ್ಲಿಯೇ ಜ್ಞಾನದ ಸಂಕೇತ. ಸಂವಿಧಾನ ಶಿಲ್ಪಿಯಷ್ಟೇ ಅಲ್ಲದೇ, ಪ್ರಖ್ಯಾತ ಅರ್ಥಶಾಸ್ತ್ರಜ್ಞ, ನ್ಯಾಯಶಾಸ್ತ್ರಜ್ಞ ಮತ್ತು ಸಮಾಜ ಸುಧಾರಕರಾಗಿದ್ದರು ಎನ್ನುವುದನ್ನು ಅರಿಯಬೇಕಿದೆ. ಮಹಾನ್ ನಾಯಕರು ನಮ್ಮ ಜೊತೆಗೆ ದೈಹಿಕವಾಗಿ ಇಲ್ಲದಿದ್ದರೂ ಅವರ ಸಾಧನೆಗಳೊಂದಿಗೆ ಮಾನಸಿಕವಾಗಿ ಸದಾ ನಮ್ಮಜೊತೆ ಇರುತ್ತಾರೆಂದರು.
ಕಾರ್ಯಕ್ರಮದಲ್ಲಿ ಸಂಗೀತ ಸೌಂಡ್ ವೆಂಕಟೇಶ್, ನರಸಿಂಹಮೂರ್ತಿ, ಕುಮಾರ್, ಚಾಮರಾಜು, ಶಿವನಂಜು, ಶಿವಣ್ಣ, ರಮೇಶ್, ಶಿವನಂದ್, ಸತೀಶ್, ಕರಿಯಪ್ಪ, ಸರೋಜಮ್ಮ, ಪ್ರಮೀಳ ಸೇರಿದಂತೆ ಇತರರು ಇದ್ದರು.