ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಇದೇ ತಿಂಗಳ ೯ರಂದು ಪಟ್ಟಣದ ಲಯನ್ಸ್ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಅವರ ೬೮ನೆಯ ಪರಿನಿಬ್ಬಾಣ ದಿನದ ಅಂಗವಾಗಿ ಸಂವಿಧಾನ ಸಮ್ಮಾನ್ ಎಂಬ ವಿಶೇಷ ಕಾರ್ಯಕ್ರಮವನ್ನು ತಾಲೂಕು ಬಿಜೆಪಿಯ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಏರ್ಪಡಿಸಲಾಗಿದೆ. ಡಿಸೆಂಬರ್ ೯ರ ಬೆಳಗ್ಗೆ ೧೦:೩೦ಕ್ಕೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮವನ್ನು ಮಾಜಿ ಶಿಕ್ಷಣ ಸಚಿವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಆಯುಷ್ಮಾನ್ ಎನ್ ಮಹೇಶ್ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಅಧ್ಯಕ್ಷರಾದ ಸಿಮೆಂಟ್ ಮಂಜು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಜಿ.ಗೌಡರವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ಧೇಶ್ ನಾಗೇಂದ್ರ, ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್ ಹಾಗೂ ಸ್ಥಳೀಯ ಎಸ್ಸಿ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋರ್ಚಾದ ಅಧ್ಯಕ್ಷರಾದ ಸ್ಟೀವನ್ ಪ್ರಕಾಶ್‌ರವರು ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪಕ್ಷದ ಮತದಾರರು, ಸಕ್ರಿಯ ಕಾರ್ಯಕರ್ತರು, ಸ್ಥಳೀಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಮುಖಂಡರುಗಳಾದ ಬಸವರಾಜ್ ಬ್ಯಾಕರವಳ್ಳಿ, ಮಧು ನಾಗನಹಳ್ಳಿ, ವೆಂಕಟೇಶ್ ಉಚ್ಚಂಗಿ ಉಪಸ್ಥಿತರಿದ್ದರು.