ನವಭಾರತ ನಿರ್ಮಾಣಕ್ಕೆ ಅಂಬೇಡ್ಕರ್‌ ಕೊಡುಗೆ ಅಪಾರ: ಜನಾರ್ದನ್‌

KannadaprabhaNewsNetwork |  
Published : Apr 16, 2025, 12:30 AM IST
 ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಕುರಿತು ಭಿತ್ತಿ ಪತ್ರ ಹಂಚಲಾಯಿತು. | Kannada Prabha

ಸಾರಾಂಶ

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸಮಾಜ ಮತ್ತು ದೇಶದ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಕೊಡುವ ಶ್ರೇಷ್ಠ ಸಂವಿಧಾನವನ್ನು ರಚಿಸಿದ್ದಾರೆ. ಸರ್ವ ಶ್ರೇಷ್ಠ ಸಂವಿಧಾನ ನಮ್ಮದು. ಅವರ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತದೆ. ನವ ಭಾರತ ನಿರ್ಮಾಣಕ್ಕೆ ಅವರ ನೀಡಿದ ಕೊಡುಗೆ ಅತ್ಯಮೂಲ್ಯ. ಸಮಾನತೆಯನ್ನು ಸಾರಿದ ಅಂಬೇಡ್ಕರ್‌.

ಕನ್ನಡಪ್ರಭ ವಾರ್ತೆ ಚೇಳೂರು

ಡಾ. ಬಿ.ಆರ್. ಅಂಬೇಡ್ಕರ್ ರವರು ಸುಮಾರು ೬೦ ದೇಶಗಳ ಸಂವಿಧಾನ ಅಧ್ಯಯನ ಮಾಡುವ ಮೂಲಕ ಭಾರತೀಯ ಸಂವಿಧಾನವನ್ನು ರಚನೆ ಮಾಡಿದ್ದಾರೆ ಎಂದು ಇನ್ಸ್‌ಪೆಕ್ಟರ್ ಜನಾರ್ದನ್ ಹೇಳಿದರು.

ಪಟ್ಟಣದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆ ಗಳ ಸಂಯುಕ್ತ ಆಶ್ರಯದಲ್ಲಿ ಕೆಪಿಎಸ್ಸಿ ಶಾಲೆಯ ಆವರಣದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

ಸಂವಿಧಾನ ಪೀಠಿಕೆ ಬೋಧನೆ

ಆಚರಣೆ ವೇಳೆ ತಹಸೀಲ್ದಾರ್ ಶ್ರೀನಿವಾಸಲು ನಾಯ್ಡು, ವಿವಿಧ ದಲಿತ ಮುಖಂಡರು ಜ್ಯೋತಿ ಬೆಳಗಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂವಿಧಾನ ಪೀಠಿಕೆ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು

ಸಮಾಜ ಮತ್ತು ದೇಶದ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಕೊಡುವ ಶ್ರೇಷ್ಠ ಸಂವಿಧಾನವನ್ನು ಅವರು ರಚಿಸಿದ್ದಾರೆ. ಸರ್ವ ಶ್ರೇಷ್ಠ ಸಂವಿಧಾನ ನಮ್ಮದು. ಅವರ ಸಾಧನೆಯನ್ನು ವಿಶ್ವವೇ ಕೊಂಡಾಡುತ್ತದೆ. ನವ ಭಾರತ ನಿರ್ಮಾಣಕ್ಕೆ ಅವರ ಕೊಡುಗೆ ಅತ್ಯಮೂಲ್ಯ ಎಂದು ಅವರು ತಿಳಿಸಿದರು.

ಪ್ಲಾಸ್ಟಿಕ್ ವಿರುದ್ಧ ಜನಜಾಗೃತಿ

ಇದೆ ವೇಳೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಹಾಗೂ ಪಿಎಸ್ಐ ಹರೀಶ್ ಪಿಡಿಒ ಕೆ ವೆಂಕಟಾಚಲಪತಿ ರವರು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಹೆಚ್ಚು ಅಂಕಗಳು ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ,ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧ ಜಾಗೃತಿ ಕಾರ್ಯಕ್ರಮ ಕುರಿತು ಕರ ಪತ್ರಗಳನ್ನು ಬಿಡುಗಡೆ ಮಾಡಿ ಹಂಚಲಾಯಿತು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಕಡ್ಡಿಲು ವೆಂಕಟರವಣಪ್ಪ, ಪಿಡಿಒ ಕೆ ವೆಂಕಟಾಚಲಪತಿ,ಗೋಪಿ ನಾಯಕ್, ದಲಿತ ಮುಖಂಡರಾದ ರಾಮೋಜಿಪಲ್ಲಿ ಶ್ರೀನಿವಾಸ್, ಜಿ ನರಸಿಂಹಪ್ಪ,ಡಿವಿ ವೆಂಕಟೇಶ್, ಗಿನ್ನಿ ಶ್ರೀನಿವಾಸ್ ಇತರರು ಹಾಜರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ