ಎಲ್ಲರೂ ಸಮಾನತೆಯಿಂದ ಬದುಕುವುದು ಅಂಬೇಡ್ಕರ್‌ ಆಶಯ

KannadaprabhaNewsNetwork |  
Published : Apr 15, 2025, 12:53 AM IST
ಭದ್ರಾವತಿಯಲ್ಲಿ ಸೋಮವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗು ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘಟನೆಗಳ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೪ನೇ ಹಾಗು ಡಾ. ಬಾಬು ಜಗಜೀವನ್‌ರಾಮ್‌ರವರ ೧೧೮ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಪುಷ್ಪ ನಮನದೊಂದಿಗೆ ಇಬ್ಬರು ಮಹಾನ್ ಆದರ್ಶ ವ್ಯಕ್ತಿಗಳಿಗೆ ಗೌರವ ಸಲ್ಲಿಸಿದರು. | Kannada Prabha

ಸಾರಾಂಶ

ಭದ್ರಾವತಿ: ಅಂಬೇಡ್ಕರ್‌ರವರು ಜಾತಿ ಬೇಧಭಾವವಿಲ್ಲದ, ಸಮಾನತೆಯಿಂದ ಕೂಡಿರುವ, ಸತ್ಯ, ನ್ಯಾಯ ಹಾಗೂ ಪ್ರಜ್ಞಾವಂತಿಕೆಯಿಂದ ಉತ್ತಮ ಬದುಕು ನಿರ್ಮಾಣಮಾಡಿಗೊಳ್ಳುವ ಆಶಯದೊಂದಿಗೆ ಸದೃಢ ಸಮಾಜಕ್ಕೆ ಅಗತ್ಯವಿರುವ ಸಂವಿಧಾನ ನೀಡಿದ್ದಾರೆ. ನಾವುಗಳು ಇದನ್ನು ಅರ್ಥಮಾಡಿಕೊಂಡಾಗ ಅಂಬೇಡ್ಕರ್ ಜಯಂತಿ ಆಚರಣೆ ಸಾರ್ಥವಾಗುತ್ತದೆ ಎಂದು ಬೆಂಗಳೂರಿನ ಬೌದ್ಧ ಭಿಕ್ಕು ನ್ಯಾನಲೋಕ ಬಂತೇಜಿ ಹೇಳಿದರು.

ಭದ್ರಾವತಿ: ಅಂಬೇಡ್ಕರ್‌ರವರು ಜಾತಿ ಬೇಧಭಾವವಿಲ್ಲದ, ಸಮಾನತೆಯಿಂದ ಕೂಡಿರುವ, ಸತ್ಯ, ನ್ಯಾಯ ಹಾಗೂ ಪ್ರಜ್ಞಾವಂತಿಕೆಯಿಂದ ಉತ್ತಮ ಬದುಕು ನಿರ್ಮಾಣಮಾಡಿಗೊಳ್ಳುವ ಆಶಯದೊಂದಿಗೆ ಸದೃಢ ಸಮಾಜಕ್ಕೆ ಅಗತ್ಯವಿರುವ ಸಂವಿಧಾನ ನೀಡಿದ್ದಾರೆ. ನಾವುಗಳು ಇದನ್ನು ಅರ್ಥಮಾಡಿಕೊಂಡಾಗ ಅಂಬೇಡ್ಕರ್ ಜಯಂತಿ ಆಚರಣೆ ಸಾರ್ಥವಾಗುತ್ತದೆ ಎಂದು ಬೆಂಗಳೂರಿನ ಬೌದ್ಧ ಭಿಕ್ಕು ನ್ಯಾನಲೋಕ ಬಂತೇಜಿ ಹೇಳಿದರು.

ಸೋಮವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘಟನೆಗಳ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ೧೩೪ನೇ ಹಾಗೂ ಡಾ.ಬಾಬು ಜಗಜೀವನ್‌ರಾಂ ಅವರ ೧೧೮ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೌದ್ಧ ಧರ್ಮ ಹಾಗೂ ಅಂಬೇಡ್ಕರ್ ಚಿಂತನೆಗಳು ಎರಡು ಒಂದೇ. ಮೌಢ್ಯಕ್ಕೆ ಒಳಗಾಗದೆ, ಶೋಷಣೆಗೆ ಒಳಗಾಗದೆ, ಸರ್ವ ಸಮಾನತೆಯಿಂದ ಜ್ಞಾನದೊಂದಿಗೆ, ವಿದ್ಯೆಯೊಂದಿಗೆ ಬದುಕುವುದು ಅಂಬೇಡ್ಕರ್‌ರವರ ಆಶಯವಾಗಿದೆ ಎಂದರು. ತಾಲೂಕಿನ ದೇವರ ನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಡಿ.ಎಚ್.ನಾಗರಾಜ್ ಮಾತನಾಡಿ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್‌ರಾಮ್‌ರವರು ಒಬ್ಬ ಸಮರ್ಥ ಆಡಳಿತಗಾರನಾಗಿ ಹಲವು ಸುಧಾರಣೆಗಳನ್ನು ಜಾರಿಗೆ ತಂದರು. ಇಂತಹ ಮಹಾನ್ ವ್ಯಕ್ತಿ ಜಯಂತಿ ಆಚರಣೆ ಕೇವಲ ಆಚರಣೆಯಾಗಿ ಉಳಿಯಬಾರದು ಎಂದರು.

ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಈ ಬಾರಿ ಇಬ್ಬರು ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆ ಯಶಸ್ವಿಯಾಗಿ ನಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆ ಅವಮಾನಗೊಳಿಸುವ ರೀತಿಯಲ್ಲಿ ಆಚರಿಸಬಾರದು. ಜಯಂತಿ ಆಚರಣೆ ಮಹಾನ್ ವ್ಯಕ್ತಿಗಳಿಗೆ ಗೌರವ ತಂದುಕೊಡುವ ನಿಟ್ಟಿನಲ್ಲಿ ಹಾಗೂ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಸಾರ್ಥಕಗೊಳ್ಳುವಂತೆ ಆಚರಿಸಬೇಕು ಎಂದು ಹೇಳಿದರು.

ಇದೇ ವೇಳೆ ಅತಿಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ದಲಿತರ ಏಳಿಗೆಗಾಗಿ ಶ್ರಮಿಸುತ್ತಿರುವ ವಿವಿಧ ದಲಿತ ಸಂಘಟನೆಗಳ ಪ್ರಮುಖರನ್ನು ಸನ್ಮಾನಿಸಲಾಯಿತು.ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್.ಮಣಿಶೇಖರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್.ಗೋಪಾಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಪಂ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ಪೊಲೀಸ್ ಉಪ ಅಧೀಕ್ಷಕ ಕೆ.ಆರ್.ನಾಗರಾಜು, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಸಿದ್ಧಾರ್ಥ ಅಂಧರ ಕೇಂದ್ರದ ಕಲಾವಿದರು ಪ್ರಾರ್ಥಿಸಿದರು. ಕಾರ್ಯಕ್ರಮಕ್ಕೂ ಮೊದಲು ಬಿ.ಎಚ್.ರಸ್ತೆ, ಅಂಡರ್‌ಬ್ರಿಡ್ಜ್ ಬಳಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್‌ರಾಮ್‌ರವರ ಭಾವಚಿತ್ರದೊಂದಿಗೆ ಕಲಾತಂಡಗಳೊಂದಿಗೆ ಕನಕಮಂಟಪ ಮೈದಾನದವರೆಗೂ ಮೆರವಣಿಗೆ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''