ಯುವ ಸಮೂಹಕ್ಕೆ ಅಂಬೇಡ್ಕರರ ಚಿಂತನೆ ಮುಖ್ಯ ಹೊಗಳಿಕೆಯಲ್ಲ

KannadaprabhaNewsNetwork |  
Published : Apr 15, 2026, 02:45 AM IST
ಸಸಸ | Kannada Prabha

ಸಾರಾಂಶ

ದಿನದ ಎಲ್ಲ ತಾಸುಗಳನ್ನು ಗ್ರಂಥಾಲಯದಲ್ಲಿ ಕಳೆಯುತ್ತಿದ್ದ ಅಂಬೇಡ್ಕರ್ ತನ್ನ ಜೀವನದ ಬಗ್ಗೆ ಎಂದಿಗೂ ಚಿಂತಿಸಿರಲಿಲ್ಲ

ಕನಕಗಿರಿ: ಯುವ ಸಮೂಹ ಅಂಬೇಡ್ಕರರ ಚಿಂತನೆಗಳಿಗಿಂತ ಅವರ ಪೂಜೆ, ಹೊಗಳುವಿಕೆಯಲ್ಲಿ ತೊಡಗಿ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಆರಕ್ಷಕ ನಿರೀಕ್ಷಕ ವಿ.ನಾರಾಯಣ ಕಳವಳ ವ್ಯಕ್ತಪಡಿಸಿದರು.

ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಪಂದಿಂದ ಪಟ್ಟಣದ ಶ್ರೀಕನಕಾಚಲಪತಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರರ ೧೩೫ನೇ ಜಯಂತಿಯಲ್ಲಿ ಮಂಗಳವಾರ ಮಾತನಾಡಿದರು.

ದಿನದ ಎಲ್ಲ ತಾಸುಗಳನ್ನು ಗ್ರಂಥಾಲಯದಲ್ಲಿ ಕಳೆಯುತ್ತಿದ್ದ ಅಂಬೇಡ್ಕರ್ ತನ್ನ ಜೀವನದ ಬಗ್ಗೆ ಎಂದಿಗೂ ಚಿಂತಿಸಿರಲಿಲ್ಲ. ಸಮಾಜದ ಒಳತಿಗಾಗಿ ೬೮ ದೇಶಗಳಿಗೆ ಸಂಚರಿಸುವ ಮೂಲಕ ವಿಶ್ವಕ್ಕೆ ಮಾದರಿಯಾಗುವಂತಹ ಸಂವಿಧಾನ ರಚಿಸಿ ದೇಶಕ್ಕೆ ಅರ್ಪಣೆ ಮಾಡಿದ್ದಾರೆ.ಮೇಧಾವಿ ಅಂಬೇಡ್ಕರರ ವಿಚಾರಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ಹಾಕಿಕೊಟ್ಟ ಹಾದಿಯಲ್ಲಿ ನಡೆದು ದೇಶಕ್ಕೆ ಮತ್ತಷ್ಟು ಶಕ್ತಿ ನೀಡುವ ಮೂಲಕ ಭಾರತಮಾತೆ ಪರಮ ವೈಭದೆಡೆಗೆ ಮುಂದಾಗಬೇಕೆಂದು ತಿಳಿಸಿದರು.

ನಂತರ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಕುರಿತಾಗಿ ಗಂಗಾವತಿಯ ಎಸ್.ಕೆ.ಎನ್.ಜಿ ಕಾಲೇಜಿನ ಉಪನ್ಯಾಸಕ ಮಣಿಕಂಠ ಅಂಗಲ ಮಾತನಾಡಿ, ಅಂದಿನ ದಿನಗಳಲ್ಲಿ ಜ್ಞಾನದ ಹಸಿವು ಹೆಚ್ಚಿತ್ತು. ಇಂದು ಆ ಹಸಿವು ಸಮಾಜದಲ್ಲಿ ಕಾಣುತ್ತಿಲ್ಲ. ಕೆಕೆ, ಶಿಳ್ಳೆ, ಡಿಜೆ ಹಾಕಿ ಕುಣಿಯುವುದಕ್ಕಿಂತ ಅಂಬೇಡ್ಕರರ ಚಿಂತನೆ ಮುಖ್ಯವಾಗಿವೆ. ಅಂಬೇಡ್ಕರರನ್ನು ದಲಿತ ನಾಯಕ, ಕೆಳವರ್ಗದ ಪರವಾಗಿ ಹೋರಾಟ ಮಾಡಿದವರು ಎನ್ನುವುದಕ್ಕಿಂತ ಅವರೊಬ್ಬ ರಾಷ್ಟ್ರೀಯವಾದಿ ಉತ್ತಮ ಕೆಲಸ ಮಾಡಿದ್ದಾರೆ. ಇನ್ನೂ ರಾಜ್ಯದ ಐದು ಗ್ಯಾರಂಟಿಗಳಿಗೆ ಎಸ್‌ಸಿ ಹಾಗೂ ಎಸ್‌ಟಿ ಅನುದಾನ ಬಳಸಿಕೊಂಡಿರುವುದು ಸಂವಿಧಾನ ವಿರೋಧಿಯಾಗಿದೆ. ಎಸ್ಸಿ, ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವ ಕುರಿತು ಕಾಂಗ್ರೆಸ್ಸಿನ ಶಾಸಕ, ಸಂಸದರು ಧ್ವನಿ ಎತ್ತದೆ ಸಮುದಾಯಗಳ ವಿರೋಧಿ ನಡೆ ಕಾರಣವಾಗಿದ್ದಾರೆ ಎಂದು ಟೀಕಿಸಿದರು.

ಪಪಂ ಅಧ್ಯಕ್ಷೆ ತನುಶ್ರೀ ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಹಸೀಲ್ದಾರವಿಶ್ವನಾಥ ಮುರುಡಿ ಅಧ್ಯಕ್ಷಹಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಪಡೆದು ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇನ್ನೂ ಪಪಂ ಪೌರ ಕಾರ್ಮಿಕರನ್ನು ಗೌರವಿಸಲಾಯಿತು.

ಇದಕ್ಕೂ ಮೊದಲು ಅಂಬೇಡ್ಕರ ವೃತ್ತಕ್ಕೆ ಪೂಜೆ ಸಲ್ಲಿಸುವ ಮೂಲಕ ಆರಂಭಗೊಂಡ ಭಾವಚಿತ್ರದ ಮೆರವಣಿಗೆ ಇಂದಿರಾ ನಗರ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಕನಕಾಚಲಪತಿ ದೇವಸ್ಥಾನದವರೆಗೆ ನಡೆಯಿತು.

ಈ ವೇಳೆ ತಾಪಂ ಇಒ ರಾಜಶೇಖರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ ಸಂಗಪ್ಪ ಜೈನಾಪೂರ, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್ಣ ಕಟ್ಟಿಮನಿ, ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ಸದಸ್ಯರಾದ ಅನಿಲಕುಮಾರ ಬಿಜ್ಜಳ, ಶೇಷಪ್ಪ ಪೂಜಾರ, ಹನುಮಂತ ಬಸರಿಗಿಡ, ನಾಮ ನಿರ್ದೇಶಿತ ಸದಸ್ಯ ಶಾಂತಪ್ಪ ಬಸರಿಗಿಡ, ಆಶ್ರಯ ಸಮಿತಿ ಸದಸ್ಯ ಕನಕಪ್ಪ ಮ್ಯಾಗಡೆ, ಸದಸ್ಯ ನಾಗೇಶ ಬಡಿಗೇರ ಸೇರಿದಂತೆ ಇತರರು ಇದ್ದರು.

ಮುಖ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ: ಮೆರವಣಿಗೆ ಸಾಗುವ ರಸ್ತೆಯಲ್ಲಿ ಸ್ವಚ್ಛಗೊಳಿಸದೇ ಇರುವುದು ಹಾಗೂ ನೀರು ಹಾಯಿಸದೆ ಇರುವುದಕ್ಕೆ ಪಪಂ ಮುಖ್ಯಾಧಿಕಾರಿ ವಿರುದ್ಧ ಸದಸ್ಯ ಶೇಷಪ್ಪ ಪೂಜಾರ, ಹನುಮಂತ ಬಸರಿಗಿಡದ ಆಕ್ರೋಶ ವ್ಯಕ್ತಪಡಿಸಿದರು. ಬೇಜವಾಬ್ದಾರಿ ತೋರಿದ ಮುಖ್ಯಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು. ಇದಕ್ಕೆ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ ತಹಸೀಲ್ದಾರರು ನೋಟಿಸ್ ನೀಡಲಾಗುವುದು ಎಂದು ಸಮಜಾಯಿಷಿ ನೀಡುತ್ತಿದ್ದಂತೆ ಕಾರ್ಯಕ್ರಮ ಆರಂಭಗೊಂಡಿತು.

ಪಟ್ಟಣದ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ದಲಿತ ನಾಯಕ ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರರ ಜಯಂತಿಯಲ್ಲಿ ಉದ್ದೇಶಪೂರ್ವಕವಾಗಿ ಹಾಜರಾಗದೇ ಉದ್ದಟತನ ತೋರುತ್ತಿದ್ದಾರೆ. ಸಂವಿಧಾನದ ಆಶಯದಂತೆ ಚುನಾಯಿತರಾಗಿ ಇಂತಹ ಧೀಮಂತರ ಜಯಂತಿಗಳಲ್ಲಿ ಭಾಗಿಯಾಗದೆ ಅಂಬೇಡ್ಕರರಿಗೆ ಅಪಮಾನ ಮಾಡಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಾತಂಗ ಮಹಾಸಭಾದ ತಾಲೂಕಾಧ್ಯಕ್ಷ ಲಿಂಗಪ್ಪ ಪೂಜಾರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬೇಡ್ಕರ್‌ ವ್ಯಕ್ತಿಯಲ್ಲ ಜಗತ್ತಿನ ಶಕ್ತಿ
ನಾಯಿ, ಬೆಕ್ಕುಗಳಿಗಿಲ್ಲದ ಮೈಲಿಗೆ ಮನುಷ್ಯರಿಗೆ ಏಕೆ?