ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ

KannadaprabhaNewsNetwork |  
Published : Jun 14, 2025, 12:18 AM IST
ಚಿತ್ರ: ೧೦ಎಸ್.ಎನ್.ಡಿ.೦೧- ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ಮುನಿರಾಜು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. | Kannada Prabha

ಸಾರಾಂಶ

ಸಂಡೂರು ತಾಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಜ್ಞಾನ ಸರೋವರದ ಆವರಣದಲ್ಲಿ ಇತ್ತೀಚೆಗೆ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಲಾಯಿತು.

ಸಂಡೂರು: ತಾಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಜ್ಞಾನ ಸರೋವರದ ಆವರಣದಲ್ಲಿ ಇತ್ತೀಚೆಗೆ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಲಾಯಿತು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಪುತ್ಥಳಿ ಅನಾವರಣಗೊಳಿಸಿ ಮಾತನಾಡಿ, ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರವು ೫೦ ವರ್ಷ ಪೂರೈಸಿ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ೨೪೨ ಎಕರೆ ವಿಸ್ತೀರ್ಣ ಹೊಂದಿರುವ ಕೇಂದ್ರದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ಅನಾವರಣಗೊಳಿಸುವ ಆಲೋಚನೆ ಮೂಡಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸುತ್ತಿರುವ ಕಾರ್ಯ ನನಗೆ ತುಂಬಾ ಸಂತಸವನ್ನುಂಟು ಮಾಡಿದೆ. ಸ್ನಾತಕೋತ್ತರ ಕೇಂದ್ರದಲ್ಲಿ ಹೊಸದಾಗಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ ಆರಂಭಿಸಲಾಗುವುದು ಎಂದರು.

ವಿಧಾನಷರಿಷತ್ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ಬರೆಯದೇ ಹೋಗಿದ್ದರೆ, ನಾನು ಈ ವೇದಿಕೆಯಲ್ಲಿ ಇರಲು ಆಗುತ್ತಿರಲಿಲ್ಲ. ಸಂವಿಧಾನ ಸಮಾನತೆ ಕಲ್ಪಿಸಿದೆ ಎಂದರು.

ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವ ಎಸ್.ಎನ್. ರುದ್ರೇಶ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ಎನ್.ಎಂ. ಸಾಲಿ ಹಾಗೂ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ರವಿ ಬಿ. ಉಪಸ್ಥಿತರಿದ್ದರು.

ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕ ಡಾ. ಮಲ್ಲಯ್ಯ ಸಂಡೂರು ಕಾರ್ಯಕ್ರಮ ನಿರೂಪಿಸಿದರು. ಖನಿಜ ಸಂಸ್ಕರಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಎಸ್. ಶಶಿಧರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ