ದೊಡ್ಡಬಳ್ಳಾಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಶೋಷಿತ ಸಮುದಾಯದ ನಾಯಕರಲ್ಲ, ವಿಶ್ವದ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಶೋಷಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಸಮಾನ ಅವಕಾಶಗಳನ್ನು ಕಲ್ಪಿಸುವ ದೃಢಸಂಕಲ್ಪ ಅಂಬೇಡ್ಕರ್ ಅವರದ್ದಾಗಿತ್ತು. ಸಾಮಾಜಿಕ ನ್ಯಾಯ, ಸಮಾನತೆ, ಶಿಕ್ಷಣ ವಿಸ್ತರಣೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಅವರು ತಿಳಿಸಿದರು.
ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಯುವ ಮುಖಂಡ ಉದಯ ಆರಾಧ್ಯ ಮಾತನಾಡಿದರು.ಪ್ರಬುದ್ಧ ಕರ್ನಾಟಕ ಭೀಮಸೇನೆ ರಾಜ್ಯಾಧ್ಯಕ್ಷ ಮುನಿರಾಜು, ಗೌರವಾಧ್ಯಕ್ಷ ತೂಬಗೆರೆ ನಾಗರಾಜು, ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜು, ತಾಲೂಕು ಸೊಸೈಟಿ ನಿರ್ದೇಶಕ ಪುರುಷೋತ್ತಮ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಮತ್ತಿತರರು ಭಾಗವಹಿಸಿದ್ದರು.