ಕನ್ನಡಪ್ರಭ ವಾರ್ತೆ ಕಲಬುರಗಿ
ಗುಲಬರ್ಗಾ ವಿವಿ ಮತ್ತು ಬೆಂಗಳೂರಿನ ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಅಂಬೇಡ್ಕರ್ ತರಬೇತಿ, ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರ ಇವರ ಸಹಯೋಗದಲ್ಲಿ ವಿವಿ.ಯ. ಕಾರ್ಯಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ 76ನೇ ಸಂವಿಧಾನ ದಿನಾಚರಣೆ ನಿಮಿತ್ತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತದಂತಹ ದೇಶವನ್ನು ಜಾತಿ, ಧರ್ಮ ರಹಿತ ರಾಷ್ಟ್ರ ನಿರ್ಮಾಣಕ್ಕೆ ವಿವಿಧ ದೇಶಗಳ ಸಂವಿದಾನ ಅಧ್ಯಯನ ಮಾಡಿ ಅದರಲ್ಲಿ ಪ್ರಮುಖ ಅಂಶಗಳನ್ನು ತೆಗೆದುಕೊಂಡು ದೇಶಕ್ಕೆ ಬೃಹತ್ ಸಂವಿಧಾನ ನೀಡಿದ ಶ್ರೇಯಸ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಸಂವಿಧಾನ ಕರಡು ಸಮಿತಿಯಲಿ ಏಳು ಜನ ಸದಸ್ಯರಿದ್ದರೂ ಕಾಲಾಂತರದಲ್ಲಿ ಬಹುತೇಕರು ರಚನಾ ಕಾರ್ಯದಲ್ಲಿ ಅಲಭ್ಯರಾದ ಪರಿಣಾಮ ಅಂಬೇಡ್ಕರ್ ಅವರು ಮುಂಚೂಣಿಯಲಿ ನಿಂತು ಇದನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.ವಿದ್ಯಾರ್ಥಿ ಸಮುದಾಯ ಅಂಬೇಡ್ಕರ ಅವರ ವಿಚಾರಧಾರೆಗಳನ್ನು ಅರಿತುಕೊಳ್ಳಬೇಕು ಮತ್ತು ಹೆಚ್ಚು ಪಸರಿಸಬೇಕು ಎಂದು ಅವರು ಕರೆ ನೀಡಿದರು.
ಗುಲಬರ್ಗಾ ವಿವಿ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ರಾಜನಾಳ್ಕರ್ ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ವಿಶ್ರಾಂತ ಪ್ರಾಂಶುಪಾಲ ಡಾ.ಐ.ಎಸ್. ವಿದ್ಯಾಸಾಗರ ಸಂವಿಧಾನದ ರಚನೆಯಲ್ಲಿ ಅಂಬೇಡ್ಕರ್ ಪಾತ್ರ, “ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಕಲ್ಪನೆಯಲ್ಲಿ ಸಾಮಾಜಿಕ ಮತ್ತು ರಾಜಕೀಯ ಪ್ರೇರಣೆಯಾಗಿ ಭಾರತದ ಸಂವಿಧಾನ” ಕುರಿತು ಸಹಾಯಕ ಪ್ರಾಧ್ಯಾಪಕ ಡಾ. ಶಿವರಾಜ ಮಾತನಾಡಿದರು.
ಗುವಿವಿ ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಮ್.ಭೈರಪ್ಪ, ಪ್ರೊ. ಎಸ್.ಎನ್. ಗಾಯಕ್‍ವಾಡ್, ಪ್ರೊ. ರಮೇಶ ಲಂಡನಕರ್, ಡಾ. ನಿಂಗಣ್ಣ ಕಣ್ಣೂರ, ಹಣಕಾಸು ಅಧಿಕಾರಿ ಜಯಾಂಬಿಕಾ ಇದ್ದರು.