ಅಸ್ಪೃಶ್ಯತೆ, ಅಸಮಾನತೆ, ಸಾಮಾಜಿಕ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಶ್ರೇಷ್ಠ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯ ರವಿಶಂಕರ್ ತಿಳಿಸಿದರು.
ಆನಂದಪುರ: ಅಸ್ಪೃಶ್ಯತೆ, ಅಸಮಾನತೆ, ಸಾಮಾಜಿಕ ತಾರತಮ್ಯದ ವಿರುದ್ಧ ಹೋರಾಡಿದ ಮಹಾನ್ ಶ್ರೇಷ್ಠ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯ ರವಿಶಂಕರ್ ತಿಳಿಸಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ 135ನೆಯ ಜನ್ಮದಿನಾಚರಣೆಯಲ್ಲಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಲ್ಲಿ ಜಾತಿ ವ್ಯವಸ್ಥೆಯ ನಿರ್ಮೂಲನೆಗೆ ಶ್ರಮಿಸಿದಂತಹ ಶ್ರೇಷ್ಠರಾಗಿದ್ದರು. ಭಾರತ ಸಂವಿಧಾನದ ಪಿತಾಮಹ ರಾದ ಇವರು ಭಾರತೀಯ ಸಮಾಜದ ಅಂಚಿನಲ್ಲಿರು ಸಮುದಾಯಗಳ ಹಕ್ಕಿಗಾಗಿ ಹೋರಾಡಿದವರು. ಅಲ್ಲದೆ ಭಾರತೀಯ ಸಂವಿಧಾನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಯಸ್ಸಿದಂತಹ ಶ್ರೇಷ್ಠ ವ್ಯಕ್ತಿ . ಮಹಿಳಾ ಸಬಲೀಕರಣ, ಕಾರ್ಮಿಕರ ಕಲ್ಯಾಣ ದಲಿತರ ಹಕ್ಕುಗಳಿಗೆ ಹೋರಾಟ ನಡೆಸಿದಂತಹ ವ್ಯಕ್ತಿಯಾಗಿದ್ದರು ಎಂದು ಹೇಳಿದರು.
ಭಾರತದ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಅಡಿಪಾಯವನ್ನು ಬಲಪಡಿಸುವಲ್ಲಿ ಇವರ ಪಾತ್ರ ಅಮೂಲ್ಯ ವಾಗಿತ್ತು. ಅಂಬೇಡ್ಕರ್ ಅವರು ಶಿಕ್ಷಿತರಾಗಿ, ಸಂಘಟಿತರಾಗಿ, ಹೋರಾಟ ಎಂಬ ಸಂದೇಶವು ಇಂದಿಗೂ ಪ್ರಸ್ತುತವಾಗಿದ್ದು ಉತ್ತಮ ಸಮ ಸಮಾಜದ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಪ್ರೇರಣೆಯಾಗಿದ್ದರು ಎಂದರು.
ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್ಲಾ ಶಿಕ್ಷಕರು, ಉಪನ್ಯಾಸಕರು ಹಾಜರಿದ್ದರು. ಹಾಗೆ ಆನಂದಪುರ ಸ್ಥಳೀಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.