ಅಂಬೇಡ್ಕರ್ ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್-ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : May 06, 2024, 12:41 AM ISTUpdated : May 06, 2024, 12:47 PM IST
೫ಎಚ್‌ವಿಆರ್೨ | Kannada Prabha

ಸಾರಾಂಶ

ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತ ಬಂದಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರುಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಹಾವೇರಿ: ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತ ಬಂದಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಮಹಾತ್ಮಾ ಗಾಂಧೀಜಿ ಪಕ್ಕ ಅಂಬೇಡ್ಕರ್ ಇರಬಾರದು ಎಂದು ಅವರ ಅಂತ್ಯ ಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ಅವಮಾನ ಮಾಡಿದವರು ಕಾಂಗ್ರೆಸ್ಸಿನವರು ಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ನಗರದಲ್ಲಿ ನಡೆದ ಛಲವಾದಿ ಸಮುದಾಯದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ದಲಿತರ ಪಾತ್ರ ಬಹಳ ದೊಡ್ಡದಿದೆ. ಯಾವಾಗ ದಲಿತರು, ಹಿಂದುಳಿದವರು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರೋ ಬ್ರಿಟಿಷರು ತಮಗೆ ಉಳಿಗಾಲವಿಲ್ಲ ಎಂದು ತೀರ್ಮಾನಿಸಿದರು. 

ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ 90 ರ ದಶಕದವರೆಗೂ ಭಾರತ ರತ್ನ ಕೊಟ್ಟಿರಲಿಲ್ಲ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರಿಗೆ ಭಾರತ ರತ್ನ ಕೊಟ್ಟಿದ್ದರು. ಆದರೆ, ಅಂಬೇಡ್ಕರ್ ಅವರಿಗೆ ಕೊಟ್ಟಿರಲಿಲ್ಲ. ವಿ.ಪಿ. ಸಿಂಗ್ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿತು. ಅಂಬೇಡ್ಕರ್ ಅವರ ಚುನಾವಣೆಗೆ ಬೆಂಬಲ ಕೊಟ್ಟಿದ್ದು ಅಂದಿನ ಜನಸಂಘ, ಇವರು ಈಗ ಮೀಸಲಾತಿ ರದ್ದಾಗುತ್ತದೆ ಎಂದು ಹೇಳುತ್ತಾರೆ.

 ಐವತ್ತು ವರ್ಷ ದಲಿತರ ಅಭಿವೃದ್ಧಿ ಮಾಡಬಹುದಿತ್ತು. ಈಗ ಮತಗಳು ಕೈ ತಪ್ಪುತ್ತವೆ ಎನ್ನುವ ಕಾರಣಕ್ಕೆ ಮೀಸಲಾತಿ ರದ್ದಾಗುತ್ತದೆ ಎಂಬ ಆರೋಪ ಮಾಡುತ್ತಾರೆ ಎಂದರು.ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಮೂವತ್ತು ವರ್ಷಗಳಿಂದ ಬೇಡಿಕೆ ಇತ್ತು. ಯಾರೂ ಮಾಡಿರಲಿಲ್ಲ. ನಾನು ಎಸ್ಸಿಗೆ ಶೇ. 15 ರಿಂದ17, ಎಸ್ಟಿ ಸಮುದಾಯಕ್ಕೆ ಶೇ. 3 ರಿಂದ ಶೇ 7ಕ್ಕೆ ಹೆಚ್ಚಳ ಮಾಡಿದೆ. ಇದರಿಂದ ಆ ಸಮುದಾಯದ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳು ಸಿಗುತ್ತಿವೆ ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ, ಬಿಜೆಪಿ ಮುಖಂಡ ಕ್ರಾಂತಿ ಕಿರಣ್, ವೆಂಕಟೇಶ ನಾರಾಯಣಿ ಇತರರು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ