ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ಡಾ.ರಾಜ್ ರಂಗಮಂದಿರದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿ ಬಾಬೂ ಜಗಜೀವನರಾಂ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೋರಾಟಗಳ ಮೂಲಕ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ ಮಹಾನ್ ಚೇತನ ಅಂಬೇಡ್ಕರ್ ಆಗಿದ್ದಾರೆ. ಸಂವಿಧಾನ ರಚಿಸುವ ಮೂಲಕ ಸಮತಾ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಕೊಡುಗೆ ಅನನ್ಯ. ದಲಿತರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಆರ್ಥಿಕವಾಗಿ, ರಾಜಕೀಯವಾಗಿ ಪ್ರಾಬಲ್ಯತೆ ಹೊಂದಲು ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ಇಡೀ ವಿಶ್ವವೇ ಗೌರವಿಸಲ್ಪಡುವ ಮಹಾ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಆಗಿದ್ದಾರೆ ಎಂದರು.ಭಾರಂಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವರಾಜ್ ಮಾತನಾಡಿ, ಶತಮಾನಗಳಿಂದಲೂ ಶೋಷಣೆಗೆ ಒಳಗಾಗಿ ಉತ್ತಮ ಬದುಕು ಕಟ್ಟಿಕೊಳ್ಳಲು ಬೆಳಕಿನ ನಿರೀಕ್ಷೆಯಲ್ಲಿದ್ದ ತಳ ಸಮುದಾಯಕ್ಕೆ ನಕ್ಷತ್ರವಾಗಿ ಪ್ರಜ್ವಲಿಸಿ ದಾರಿ ದೀಪವಾಗಿದ್ದ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಮಹಾನ್ ಮಾನವಾತವಾದಿ ಎಂದು ಅಭಿಪ್ರಾಯಪಟ್ಟರು.
ತಹಸೀಲ್ದಾರ್ ಪುರಂದರ ಸಂವಿಧಾನ ಪ್ರಸ್ತಾವನೆ ಬಗ್ಗೆ ಪ್ರಮಾಣ ವಚನ ಬೋಧಿಸಿದರು. ಸಮಾಜ ಕಲ್ಯಾಣಾಧಿಕಾರಿ ಇಕ್ಬಾಲ್ ಜಾತಿಗೇರ್ ಸ್ವಾಗತಿಸಿ, ಶೀಲಾ ಶಶಿಕಾಂತ್ ನಿರೂಪಿಸಿದರು. ಇದಕ್ಕೂ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬೂ ಜಗಜೀವನ ರಾಂ ಅವರ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಪಟ್ಟಣದ ರಂಗನಾಥ ದೇವಸ್ಥಾನದಿಂದ ಮುಖ್ಯ ಬೀದಿಯಲ್ಲಿ ವಿವಿಧ ಜನಪದ ಕಲಾತಂಡಗಳೊಂದಿಗೆ ರಂಗ ಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು.