ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್

KannadaprabhaNewsNetwork |  
Published : Nov 28, 2024, 12:30 AM IST
ಕೆ ಕೆ ಪಿ ಸುದ್ದಿ 01:ನಗರದತಾಲೂಕುಕಚೇರಿಸಭಾಂಗಣದಲ್ಲಿನಡೆದಸಂವಿಧಾನ ಸಮರ್ಪಣಾ ದಿನಆಚರಣೆಕಾರ್ಯಕ್ರಮದಲ್ಲಿಅಧಿಕಾರಿಗಳುಸಂಘ ಸಂಸ್ಥೆ ಮುಖಂಡರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. | Kannada Prabha

ಸಾರಾಂಶ

ಕನಕಪುರ: ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತಕ್ಕೆ ಸಂವಿಧಾನ ರಚಿಸುವುದು ಸವಾಲಿನ ಕೆಲಸ. ಸರ್ವಧರ್ಮೀಯರಲ್ಲೂ ಏಕತೆ ತರುವ ಸರ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಸಮರ್ಪಿಸಿದ್ದಾರೆ ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.

ಕನಕಪುರ: ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತಕ್ಕೆ ಸಂವಿಧಾನ ರಚಿಸುವುದು ಸವಾಲಿನ ಕೆಲಸ. ಸರ್ವಧರ್ಮೀಯರಲ್ಲೂ ಏಕತೆ ತರುವ ಸರ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಸಮರ್ಪಿಸಿದ್ದಾರೆ ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.

ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯಾರ ಭಾವನೆ, ಸಂಸ್ಕೃತಿ, ಆಚರಣೆ, ವ್ಯಕ್ತಿತ್ವಕ್ಕೆ ಧಕ್ಕೆ ಆಗದ ರೀತಿ ಸಂವಿಧಾನ ರಚಿಸುವುದು ಅಷ್ಟು ಸುಲಭವಲ್ಲ. ಆದರೆ, ಅಂತಹ ಮಹತ್ತರ ಕೆಲಸವನ್ನು ಡಾ. ಅಂಬೇಡ್ಕರ್ ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಹೇಳಿದರು.

ಬಹುಜನ ಜಾಗೃತಿ ವೇದಿಕೆ ನೀಲಿ ರಮೇಶ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಈ ನೆಲದ ಶೋಷಿತರು, ದಮನಿತರು, ಬಡವರ ಪರವಾಗಿ ಅವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು ಸಂವಿಧಾನ ರಚನೆ ಮಾಡಿದ್ದಾರೆ ಎಂದರು.

ಅಂಬೇಡ್ಕರ್ ಹೆಜ್ಜೆ ಹೆಜ್ಜೆಗೂ ಹೋರಾಟಗಳನ್ನು ಮಾಡಿ ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರ ಹೋಗಲಾಡಿಸಿ ಸಮ ಸಮಾಜ ನಿರ್ಮಾಣಕ್ಕೆ ಹಲವಾರು ದೇಶಗಳ ಸಂವಿಧಾನ ಅಧ್ಯಯನ ಮಾಡಿ ದೇಶಕ್ಕೆ ಅತ್ಯುತ್ತಮ ಸಂವಿಧಾನ ರಚಿಸಿಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಂಜುನಾಥ್ ಸಂವಿಧಾನ ಪೀಠಿಕೆ ಬೋಧಿಸಿದರು. ಗ್ರೇಡ್-2 ತಹಸೀಲ್ದಾರ್ ಶಿವಕುಮಾರ್, ಶಿರಸ್ತೇದಾರ್ ಜಗದೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಯಪ್ರಕಾಶ್, ಸಾಮಾಜಿಕ ಭದ್ರತಾ ಯೋಜನೆ ಸಿರಸ್ತೇದಾರ್ ವಸಂತ, ಉಪ ತಹಸೀಲ್ದಾರ್ ಪ್ರವೀಣ್, ಪ್ರಗತಿಪರ ಸಂಘಟನೆ ಕುಮಾರಸ್ವಾಮಿ, ಕನ್ನಡ ಭಾಸ್ಕರ್, ಗಿರೀಶ್, ಪ್ರಶಾಂತ್ ಹೊಸದುರ್ಗ, ವೆಂಕಟೇಶ್, ಗೋಪಿ, ಹಲವು ಸಂಘ ಸಂಸ್ಥೆ ಮುಖಂಡರು ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ 01:

ಕನಕಪುರ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಸಂಘ ಸಂಸ್ಥೆ ಮುಖಂಡರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ