ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅಂಬೇಡ್ಕರ್‌ ಯುವಸೇನೆ ಸ್ವಾಗತ

KannadaprabhaNewsNetwork |  
Published : Jun 18, 2025, 12:30 AM IST
17ಯುವಸೇನೆ | Kannada Prabha

ಸಾರಾಂಶ

ಸೋಮವಾರ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಅವರನ್ನು ಸ್ವಾಗತಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲೆಯಲ್ಲಿ ದಲಿತ ದೌರ್ಜನ್ಯ ಹೆಚ್ಚುತ್ತಿದೆ, ದೌರ್ಜನ್ಯ ಮಾಡುವವರ ಕೈಯಲ್ಲಿ ರಾಜಕೀಯ ಅಧಿಕಾರವಿದ್ದು, ಆರೋಪಿಗಳನ್ನು ಬಂಧಿಸದೆ, ಅವರು ಜಾಮೀನು ಪಡೆಯುವಲ್ಲಿ ತನಿಖಾಧಿಕಾರಿಗಳೇ ಸಹಕರಿಸುತ್ತಿದ್ದಾರೆ ಎಂದು ದಲಿತ ಹೋರಾಟಗಾರ ಜಯನ್ ಮಲ್ಪೆ ಆರೋಪಿಸಿದ್ದಾರೆ

ಅವರು ಸೋಮವಾರ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ಅವರನ್ನು ಸ್ವಾಗತಿಸಿದ ಸಂದರ್ಭ ಮಾತನಾಡಿದರು.ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಸುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಜಯನ್ ಮಲ್ಪೆ ಅವರು, ಸಮಾಜದಲ್ಲಿ ದೌರ್ಜನ್ಯಕ್ಕೆ ಒಳಗಾದ ದಲಿತ ಹೆಣ್ಣು ಮಕ್ಕಳ ಹೆಸರನ್ನು ಮಾಧ್ಯಮದಲ್ಲಿ ಪ್ರಕಟಿಸದಂತೆ ಮನವಿ ಮಾಡಿದರು.

ನಿಯೋಗದಲ್ಲಿ ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ, ಕೃಷ್ಣ ಬಂಗೇರ ಪಡುಬಿದ್ರಿ, ಹರೀಶ್ ಸಾಲ್ಯಾನ್, ವಸಂತ ಪಾದೆಬೆಟ್ಟು, ಸಂಜೀವ ಬಳ್ಕೂರ್, ರವಿರಾಜ್ ಲಕ್ಷ್ಮೀನಗರ, ಸುಜೀತ್ ಕಂಚಿನಡ್ಕ, ದಯಾಕರ್ ಮಲ್ಪೆ, ಸುಶೀಲ್ ಕೊಡವೂರು, ಸಾಧು ಚಿಟ್ಪಾಡಿ, ಅರುಣ್ ಸಲ್ಯಾನ್, ಭಗವಾನ್ ಮಲ್ಪೆ, ಸಂತೋಷ್ ಕಪ್ಪೆಟ್ಟು, ದೀಪಕ್ ಕೊಡವೂರು ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌