ವಚನಗಳ ಮೂಲಕ ಸನ್ಮಾರ್ಗ ತೋರಿದವರು ಶಿವಶರಣರು: ಎಂ.ಎ ಗಫೂರ್

KannadaprabhaNewsNetwork |  
Published : Jan 22, 2026, 03:15 AM IST
ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. | Kannada Prabha

ಸಾರಾಂಶ

ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಶ್ರೀ ಮಹಾಯೋಗಿ ವೇಮನ ಹಾಗೂ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಕಾರ್ಯಕ್ರಮ

ಉಡುಪಿ: ಹನ್ನೆರಡನೆಯ ಶತಮಾನ ವಚನಗಳ ಕ್ರಾಂತಿಯುಗ, ಅಂದಿನ ಕಾಲಘಟ್ಟದಲ್ಲಿ ಶಿವಶರಣೆಯರು ಸಮಾಜದಲ್ಲಿ ಬೇರೂರಿದ್ದ ಅಸ್ಪೃಷ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ವಚನಗಳನ್ನು ರಚಿಸುವ ಮೂಲಕ ಜನಸಾಮಾನ್ಯರ ಜೀವನಕ್ಕೆ ಸನ್ಮಾರ್ಗ ತೋರಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.ಬುಧವಾರ ನಗರದ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಶ್ರೀ ಮಹಾಯೋಗಿ ವೇಮನ ಹಾಗೂ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಸಮಾಜದ ಮೌಢ್ಯಗಳ ವಿರುದ್ಧ ತಮ್ಮ ವಚನಗಳ ಮೂಲಕ ಧ್ವನಿ ಎತ್ತಿದ ಅಂಬಿಗರ ಚೌಡಯ್ಯ ಮತ್ತು ಮಹಾಯೋಗಿ ವೇಮನರಂತಹ ಮಹನೀಯರ ಆದರ್ಶಗಳು ಇಂದೂ ಪ್ರತಿಯೊಬ್ಬರಿಗೂ ದಾರಿದೀಪವಾಗಿದೆ ಎಂದರು.

ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್. ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಿದ್ದಬಸಯ್ಯಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವರ್ಷಾ ಬಿ ಕೋಟ್ಯಾನ್ ನಿರೂಪಿಸಿ, ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಕೆ. ಪೂರ್ಣಿಮಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕಗಳಲ್ಲಿ ಬೆಂಗಳೂರು ನಗರಕ್ಕೆ ಬರೋಬ್ಬರಿ ₹38 ಕೋಟಿ ಡ್ರಗ್ಸ್‌ ಸಾಗಾಟ
ಸರ್ಕಾರದಿಂದ ಗೋಬ್ಯಾಕ್‌ ಗೌರ್ನರ್‌ ಅಭಿಯಾನ ಚಿಂತನೆ