ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಸಂದರ್ಭದಲ್ಲಿ ನಗರದ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶ್ರುತಿಶ್ರೀ ಡಿ. ಅವರು ವಾಚಿಸಿದರು.
12 ನೇ ಶತಮಾನದಲ್ಲಿ ಬಸವಣ್ಣ ಅವರು ಸೇರಿದಂತೆ ಎಲ್ಲಾ ವಚನಕಾರರ ಬಗ್ಗೆ ಮಾಹಿತಿ ತಿಳಿದುಕೊಳ್ಳುವಂತಾಗಬೇಕು. ಅಂಬಿಗರ ಚೌಡಯ್ಯ ಅವರು ಸಮಾಜಕ್ಕೆ ನೀಡಿರುವ ಸುಧಾರಣೆ ಮತ್ತು ಸಂದೇಶಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು.ತಹಶೀಲ್ದಾರರಾದ ಶ್ರೀಧರ್ ಅವರು ಮಾತನಾಡಿ ಜಗತ್ತಿನಲ್ಲಿ ಮೊದಲ ಬಾರಿಗೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶರಣರ ಕೊಡುಗೆ ಅಪಾರ ಎಂದು ಬಣ್ಣಿಸಿದರು.
ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು, ನಂಬಿದರೆ ಒಂದೆ ಹುಟ್ಟಲಿ ಕಡೆಯ ಹಾಯಿಸುವನಂಬಿಗರ ಚೌಡಯ್ಯ ಎಂದು ಹೇಳುತ್ತಾರೆ ಎಂದು ನುಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಮಾತನಾಡಿ, ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಮೋಳಿಗೆ ಮಾರಯ್ಯ, ಮಡಿವಾಳ ಮಾಚಯ್ಯ, ಕುಂಬಾರ ಗುಂಡಯ್ಯ, ಮಾದಾರ ಚೆನ್ನಯ್ಯ, ಸೂಳೆ ಸಂಕವ್ವೆಯವರೆಗೂ ತಮ್ಮ ವೃತ್ತಿಗಳನ್ನು ಹೇಳಿಕೊಳ್ಳುವ ಈ ಪರಂಪರೆ ಎಷ್ಟೊಂದು ಅದ್ಭುತ ಎಂದರು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪದ್ಮಾವತಿ ಇತರರು ಇದ್ದರು. ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು, ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.