ಅಂಬಿಕಾ ಸಂಸ್ಥೆಗೆ ೨೫ ವರ್ಷ: ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ

KannadaprabhaNewsNetwork |  
Published : Oct 24, 2025, 01:00 AM IST
ಫೋಟೋ: ೧೭ಪಿಟಿಆರ್-ಅಂಬಿಕಾಬೆಂಗಳೂರಿನಲ್ಲಿ ಅಂಬಿಕಾ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಯಿತು. | Kannada Prabha

ಸಾರಾಂಶ

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ವ್ಯವಸ್ಥೆಯ ಬೆಳ್ಳಿಹಬ್ಬ, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೧೫ನೇ ವರ್ಷಾಚರಣೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಗಳ ಸಭೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ದೇಸೀ ಮಸಾಲಾ ಒಳಾಂಗಣ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.ಈ ಸಂದರ್ಭ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಶೃಂಗೇರಿ ಜಗನ್ಮಾತೆ ಹಾಗೂ ಪರಮಪೂಜ್ಯ ಜಗದ್ಗುರುದ್ವಯರ ಕೃಪೆಯಿಂದ ಮತ್ತು ವಿದ್ಯಾರ್ಥಿಗಳ, ಹೆತ್ತವರ, ಊರವರ, ಹತ್ತೂರ ಅಭಿಮಾನಿಗಳ ವಿಶ್ವಾಸದ ಕಾರಣದಿಂದ ಅಂಬಿಕಾ ಶೈಕ್ಷಣಿಕ ಕ್ಷೇತ್ರದಲ್ಲಿ ೨೫ ವರ್ಷಗಳ ಮೈಲಿಗಲ್ಲನ್ನು ತಲುಪಿದೆ. ಸವಿ ನೆನಪುಗಳನ್ನು ಮೆಲುಕು ಹಾಕಲು ಹಾಗೂ ಬೆಳ್ಳಿ ಹಬ್ಬ ಆಚರಣೆಯ ಬಗೆಗೆ ಯೋಜಿಸುವುದಕ್ಕೆ ಹಿರಿಯ ವಿದ್ಯಾರ್ಥಿಗಳ ಸಹಕಾರ, ಮಾರ್ಗದರ್ಶನ ಅತ್ಯಗತ್ಯ ಎಂದರು.ಪುತ್ತೂರಿನಲ್ಲೂ ಓಲಾ, ಊಬರ್‌ನಂತಹ ಆ್ಯಪ್ ಮೂಲಕ ವ್ಯವಹರಿಸುವ ಸಂಚಾರ ವ್ಯವಸ್ಥೆ ಜಾರಿಗೆ ಬರಬೇಕು. ಅದಕ್ಕಾಗಿ ಅಂಬಿಕಾದ ವಿದ್ಯಾರ್ಥಿಗಳು ಸಾಪ್ಟ್ವೇರ್ ರೂಪಿಸಬೇಕು. ಪುತ್ತೂರಿನ ಅಭಿವೃದ್ಧಿಗೆ ಯುವಸಮುದಾಯ ಕೈಜೋಡಿಸಬೇಕು ಎಂದು ಕರೆನೀಡಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿಶಿರ ರಾಮ್ ಬೋರ್ಕರ್ ಸಂಘದ ಯೋಜನೆಗಳ ರೂಪುರೇಷೆಗಳನ್ನು ತಿಳಿಸಿದರು. ಅಂಬಿಕಾ ವಸತಿಯುತ ವಿದ್ಯಾಲಯದ ಉಪಪ್ರಾಚಾರ್ಯರಾದ ಪ್ರದೀಪ್ ಕೆ.ವೈ. ವೇದಿಕೆಯಲ್ಲಿ ಉಪಸ್ಥಿತರಿದ್ದರು.ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಬಪ್ಪಳಿಗೆ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು. ಸುಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ರಾಮಪ್ರಸಾದ್ ಹಾಗೂ ಕಾರ್ಯಾಲಯ ಮ್ಯಾನೇಜರ್ ರವಿಚಂದ್ರ, ಉಪನ್ಯಾಸಕರು, ಹಿರಿಯ ವಿದ್ಯಾರ್ಥಿಗಳು ಸಭೆಯಲ್ಲಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!