ಧಾರವಾಡ:
ನಗರದ ದ.ರಾ. ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ವತಿಯಿಂದ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಶನಿವಾರ ಆಯೋಜಿಸಿದ್ದ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಪಂಪನಿಂದ ಹಿಡಿದು ಬೇಂದ್ರೆ ಅವರ ವರೆಗಿನ ಸಾಹಿತ್ಯವು ಕನ್ನಡ ಸಾಹಿತ್ಯದ ಧೀರ ವ್ಯಕ್ತಿತ್ವವನ್ನು ಕಟ್ಟಿದೆ ಎಂದ ಅವರು, ಕನ್ನಡ ಸಾಹಿತ್ಯ ಲೋಕಕ್ಕೆಬೇಂದ್ರೆ ಅವರ ಕೊಡುಗೆ ಅಪಾರವಾಗಿದೆ ಎಂದರು.
ಕನ್ನಡ ಸಾಹಿತ್ಯವು ಯಾವ ಕಾಲಕ್ಕೂ ಮಂಕಾಗಿಲ್ಲ. ಜೈನ ಕವಿಗಳು, ಶರಣರು, ದಾಸರು ಸೇರಿದಂತೆ ಅನೇಕ ಮಹನೀಯರು ಕನ್ನಡ ಸಾಹಿತ್ಯವನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಯುವಜನರು ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.ಪ್ರಶಸ್ತಿ ಪುರಸ್ಕೃತ ಸತೀಶ ಕುಲಕರ್ಣಿ ಮಾತನಾಡಿ, ಮಾತೃಭಾಷೆ ಮರಾಠಿಯನ್ನು ಬಿಟ್ಟು ಹೃದಯದ ಭಾಷೆಯಾದ ಕನ್ನಡದಲ್ಲಿ ಕವಿತೆಗಳನ್ನು ಬರೆಯುವ ಮೂಲಕ ಕನ್ನಡದ ವರಕವಿ ಎಂದು ಪ್ರಖ್ಯಾತಿ ಗಳಿಸಿದರು. ಬೇಂದ್ರೆ ಅವರ ಹೆಸರಿನಲ್ಲಿ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ ಎಂದರು.
ಟ್ರಸ್ಟ್ ಅಧ್ಯಕ್ಷ ಸರಜೂ ಕಾಟ್ಕರ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಐ.ಜಿ. ಸನದಿ, ಟ್ರಸ್ಟ್ ಸದಸ್ಯರಾದ ಶರಣ್ಣಮ್ಮ ಗೊರೇಬಾಳ, ವೈ.ಎಂ. ಯಾಕೊಳ್ಳಿ, ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ, ಸದಸ್ಯರಾದ ವೈ.ಎಂ. ಯಾಕೊಳ್ಳಿ, ಅಶೋಕ ಶೆಟ್ಟರ, ಶರಣಮ್ಮ ಗೊರೇಬಾಳ, ಪ್ರಭು ಕುಂದರಗಿ, ಇಮಾಮಸಾಬ್ ವಲ್ಲೆಪ್ಪನವರ, ಟ್ರಸ್ಟ್ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಉಪಸ್ಥಿತರಿದ್ದರು.