ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ
ತಿಂಗಳಿಂದ ಸೇವೆ ಸ್ಥಗಿತ: ಬಳಿಕ ಕಳೆದ ವರ್ಷ ಏಪ್ರಿಲ್‌ನಲ್ಲಿ ಕಡಬಕ್ಕೆ ಅತ್ಯಾಧುನಿಕ ವೆಂಟಿಲೇಟರ್ ಇರುವ ಹೊಸ ಆಂಬುಲೆನ್ಸ್ ವಾಹನವನ್ನು ನೀಡಲಾಗಿತ್ತು. ಸುಮಾರು 40 ಸಾವಿರಕ್ಕೂ ಅಧಿಕ ಕಿಲೋಮೀಟರ್ ಓಡಿದ್ದರಿಂದಾಗಿ ಟಯರ್ ಸವೆದು ವಾಹನ ನಿಂತಲ್ಲೇ ನಿಂತಿದೆ. ಟಯರ್ ಬದಲಾವಣೆ ಮಾಡದ ಕಾರಣ ಡಿಸೆಂಬರ್ 6ರಿಂದ ಆಂಬುಲೆನ್ಸನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ನಿಲ್ಲಿಸಲಾಗಿದೆ. ಜನರು ತುರ್ತು ಸಂದರ್ಭದಲ್ಲಿ ಪಕ್ಕದ ಆಲಂಕಾರು, ಬೆಳ್ಳಾರೆ, ಶಿರಾಡಿ, ಸುಬ್ರಹ್ಮಣ್ಯದಿಂದ ಆಂಬುಲೆನ್ಸ್ ಬರುವವರೆಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಾಯಂ ವೈದ್ಯರ ಕೊರತೆ: ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಸುಸಜ್ಜಿತ ಸಮುದಾಯ ಭವನ ಆಸ್ಪತ್ರೆ ನಿರ್ಮಿಸಲಾಗಿದ್ದರೂ, ಕಾಯಂ ವೈದ್ಯರ ಕೊರತೆಯಿಂದ ತುರ್ತು ಸಂದರ್ಭದಲ್ಲಿ ಪುತ್ತೂರು ಅಥವಾ ಮಂಗಳೂರಿನ ಆಸ್ಪತ್ರೆಯನ್ನು ಅವಲಂಬಿಸಬೇಕಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತುರ್ತು ಸಂದರ್ಭಗಳಲ್ಲಿ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಹೊಸ ಟಯರ್‌ಗಳನ್ನು ನೀಡುವ ಮೂಲಕ ಆಂಬುಲೆನ್ಸ್ ಸೇವೆಯನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ. ಇಲ್ಲಿನ 108 ವಾಹನದ ಸಿಬ್ಬಂದಿಯನ್ನು ಪಕ್ಕದ ಸುಳ್ಯ, ಬೆಳ್ಳಾರೆ, ಶಿರಾಡಿ, ಆಲಂಕಾರು, ಕೊಕ್ಕಡದ ಆಂಬುಲೆನ್ಸ್‌ಗಳಿಗೆ ನಿಯೋಜಿಸಲಾಗಿದೆ.ಆಂಬುಲೆನ್ಸ್ ಸ್ಥಗಿತಗೊಂಡಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ. ವಾರದ ಒಳಗೆ ಟಯರ್ ಹಾಕಿಸಿ ಸಮಸ್ಯೆಯನ್ನು ಸರಿಪಡಿಸಲಾಗುವುದು- ಡಾ. ತಿಮ್ಮಯ್ಯ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ