ಕಡೂರು, ಬೀರೂರು ಸಾರ್ವಜನಿಕ ಆಸ್ಪತ್ರೆಗೆ 2 ಅಂಬುಲೆನ್ಸ್: ಕೆ.ಎಸ್. ಆನಂದ್

KannadaprabhaNewsNetwork |  
Published : Sep 12, 2024, 01:58 AM IST
11ಕೆಕೆಿಯು2. | Kannada Prabha

ಸಾರಾಂಶ

ಕಡೂರು, ಶೀಘ್ರದಲ್ಲೇ ಕಡೂರು ಮತ್ತು ಬೀರೂರು ಸಾರ್ವಜನಿಕ ಆಸ್ಪತ್ರೆಗಳಿಗೆ ಎರಡು ಹೊಸ ಅಂಬ್ಯುಲೆನ್ಸ್ ಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.

- ಪಂಚನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹36 ಲಕ್ಷ ವೆಚ್ಚದಲ್ಲಿ ಅಂಬ್ಯುಲೆನ್ಸ್ ಹಸ್ತಾಂತರ

ಕನ್ನಡಪ್ರಭ ವಾರ್ತೆ ಕಡೂರು

ಶೀಘ್ರದಲ್ಲೇ ಕಡೂರು ಮತ್ತು ಬೀರೂರು ಸಾರ್ವಜನಿಕ ಆಸ್ಪತ್ರೆಗಳಿಗೆ ಎರಡು ಹೊಸ ಅಂಬ್ಯುಲೆನ್ಸ್ ಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.

ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ತಾಲೂಕಿನ ಪಂಚನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಅಂಬ್ಯುಲೆನ್ಸ್ ಹಸ್ತಾಂತರಿಸಿ ಮಾತನಾಡಿದರು.

ಗಡಿ ಗ್ರಾಮವಾದ ಪಂಚನಹಳ್ಳಿಯ ಆರೋಗ್ಯ ಕೇಂದ್ರದಲ್ಲಿ ಆಂಬ್ಯುಲೆನ್ಸ್ ಕೊರತೆ ಇರುವ ಕುರಿತು ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಗಮನಕ್ಕೆ ತರಲಾಗಿತ್ತು. ಸಚಿವರು ತಮ್ಮ ಸಿಆರ್ ಎಫ್ ಫಂಡಿನಲ್ಲಿ ಅಂಬ್ಯುಲೆನ್ಸ್ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಸುಮಾರು ₹36 ಲಕ್ಷ ವೆಚ್ಚದಲ್ಲಿ ಅಂಬ್ಯುಲೆನ್ಸ್ ನ್ನು ಆಸ್ಪತ್ರೆಗೆ ಒದಗಿಸಲಾಗಿದೆ. ಜನತೆ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಯಗಟಿ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಕಟ್ಟಡ ಮತ್ತಿತರ ವ್ಯವಸ್ಥೆಗಳು ಪೂರ್ಣಗೊಂಡಿವೆ. ಚೌಳ ಹಿರಿ ಯೂರು ಆರೋಗ್ಯ ಸಮುದಾಯ ಕೇಂದ್ರವನ್ನೂ ಮೇಲ್ದರ್ಜೆಗೇರಿಸಲು ಚಿಂತನೆ ನಡೆಸಿದ್ದು, ಈ ಬಗ್ಗೆ ಆರೋಗ್ಯ ಸಚಿವರ ಬಳಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‍ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸಿ. ರವಿಕುಮಾರ್, ಪಂಚನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಗದೀಶ್, ತಾಪಂ ಮಾಜಿ ಉಪಾಧ್ಯಕ್ಷ ಪಿ.ಸಿ. ಪ್ರಸನ್ನ, ಗ್ರಾಪಂ ಸದಸ್ಯ ದಿನೇಶ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವಸಂತ, ಸುನಿತಾ, ಲಕ್ಷ್ಮೀಶ ನಾಯ್ಕ, ಪಿ.ಜಿ. ಸಿದ್ದರಾಮಪ್ಪ, ಭೀಮಣ್ಣ, ಮುಖಂಡರಾದ ಅಬಿದ್‍ಪಾಷ, ಉಮೇಶ್, ಕೃಷ್ಣಪ್ಪ, ಭೋಗಪ್ಪ ಮತ್ತಿತರಿದ್ದರು.

----

11ಕೆಕೆಡಿಯು2.ಕಡೂರು ಪಟ್ಟಣದ ಶಾಸಕರ ಕಚೇರಿ ಆವರಣದಲ್ಲಿ ತಾಲೂಕಿನ ಪಂಚನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ಅಂಬ್ಯುಲೆನ್ಸ್ ನ್ನು ಶಾಸಕ ಕೆ.ಎಸ್. ಆನಂದ್ ವೈದ್ಯಾಧಿಕಾರಿ ಡಾ. ಜಗದೀಶ್ ಅವರಿಗೆ ಹಸ್ತಾಂತರಿಸಿದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ