ಕೆಎಲ್‌ಇಗೆ ಅಮಿತ ಕೋರೆ ನೂತನ ಕಾರ್ಯಾಧ್ಯಕ್ಷ

KannadaprabhaNewsNetwork |  
Published : Feb 21, 2026, 04:15 AM IST
ಕೆಎಲ್‌ಇ ಸಂಸ್ಥೆಯ ನೂತನ ಪದಾಧಿಕಾರಿಗಳು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಜಾಗತಿಕ ವಿಖ್ಯಾತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆಯಾಗಿದ್ದಾರೆ. ನಗರದ ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ ಕೋರೆ ಅವರಿಗೆ ಕೆಎಲ್‌ಇ ಸಂಸ್ಥೆಯ ಸಾರಥ್ಯವನ್ನು ನೀಡಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಾಗತಿಕ ವಿಖ್ಯಾತ ಶಿಕ್ಷಣ ಸಂಸ್ಥೆಯಾದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆಯಾಗಿದ್ದಾರೆ. ನಗರದ ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಅಮಿತ ಕೋರೆ ಅವರಿಗೆ ಕೆಎಲ್‌ಇ ಸಂಸ್ಥೆಯ ಸಾರಥ್ಯವನ್ನು ನೀಡಲಾಯಿತು. ಡಾ.ಪ್ರಭಾಕರ ಕೋರೆ ಅವರು ಸುದೀರ್ಘ 42 ವರ್ಷಗಳ ಚೇರಮನ್‌ರಾಗಿ ಸಂಸ್ಥೆಯನ್ನು ಜಾಗತಿಕವಾಗಿ ವಿಸ್ತರಿಸಿದ್ದರು. ಇಂದು ಆ ಸ್ಥಾನವನ್ನು ಅಮಿತ ಕೋರೆ ಅವರಿಗೆ ಆಡಳಿತ ಮಂಡಳಿ ನೀಡಿ ಶುಭ ಕೋರಿತು.

1916ರಲ್ಲಿ ಸ್ಥಾಪನೆಗೊಂಡ ಕೆಎಲ್‌ಇ ಸೊಸೈಟಿ ದೇಶದ ಪ್ರಮುಖ ಶಿಕ್ಷಣ ಮತ್ತು ಆರೋಗ್ಯ ಸೇವಾ ಸಂಸ್ಥೆಗಳಲ್ಲಿ ಒಂದಾಗಿದೆ. ಶಾಲೆಗಳು, ಮಹಾವಿದ್ಯಾಲಯಗಳು, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ 317ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಈ ಸಂಸ್ಥೆ ಶತಮಾನಗಳ ಕಾಲ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಇಂತಹ ಬೃಹತ್‌ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 46ರ ಯುವ ನಾಯಕ ಅಮಿತ್ ಕೋರೆ ಆಯ್ಕೆಯಾಗಿರುವುದು ವಿಶೇಷ.

ಗೌರವ ಕಾರ್ಯಾಧ್ಯಕ್ಷರಾಗಿ ಪ್ರಭಾಕರ ಕೋರೆ ಆಯ್ಕೆ:

1984ರಿಂದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 42 ವರ್ಷಗಳ ಸುದೀರ್ಘ ಸೇವೆ ನೀಡಿ ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಡಾ.ಪ್ರಭಾಕರ ಕೋರೆ ಅವರ ಮಾರ್ಗದರ್ಶನವನ್ನು ಸಂಸ್ಥೆಯ ಶ್ರೇಯೋಭಿವೃದ್ಧಿಗೋಸ್ಕರ ಕಳೆದ ಫೆ.2ರಂದು ಜರುಗಿದ ಕೆಎಲ್‌ಇ ಸರ್ವ ಸಾಧಾರಣ ಸಭೆಯಲ್ಲಿ ಅವರನ್ನು ಗೌರವ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿ ಮಹಾಂತೇಶ ಕೌಜಲಗಿ, ಉಪಾಧ್ಯಕ್ಷರಾಗಿ ಬಸವರಾಜ ತಟವಟಿ, ಗೌರವಾನ್ವಿತ ಕಾರ್ಯಾಧ್ಯಕ್ಷರಾಗಿ ಡಾ.ಪ್ರಭಾಕರ ಕೋರೆ, ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅದರಂತೆ ನೂತನ ಆಡಳಿತ ಮಂಡಳಿಯ ಸದಸ್ಯರಾಗಿ ಬಾಗೇವಾಡಿ ಪ್ರವೀಣ ಅಶೋಕ, ಡಾ.ಪ್ರೀತಿ ಕರಣ ದೊಡವಾಡ, ಮಹಾಂತೇಶ ಕವಟಗಿಮಠ, ಕೊಳ್ಳಿ ಮಲ್ಲಿಕಾರ್ಜುನ ಚನಬಸಪ್ಪ, ಮೆಟಗುಡ್‌ ವಿಜಯ ಶ್ರೀಶೈಲಪ್ಪ, ಮುನವಳ್ಳಿ ಮಂಜುನಾಥ ಶಂಕರಪ್ಪ, ಪಾಟೀಲ ಬಸವರಾಜ ರುದ್ರಗೌಡ, ಡಾ.ಪಾಟೀಲ ವಿಶ್ವನಾಥ ಈರನಗೌಡ, ಪಾಟೀಲ ಯಲ್ಲನಗೌಡ ಶಿವಮೊಗ್ಗೆಪ್ಪ, ಪಟ್ಟೇದ ಅನಿಲ ವಿಜಯಬಸಪ್ಪ, ಜಯಾನಂದ ಮುನವಳ್ಳಿ ಆಯ್ಕೆಯಾಗಿದ್ದಾರೆ. ಈ ಸಭೆಯಲ್ಲಿ ಎಲ್ಲ ಪದಾಧಿಕಾರಿಗಳು, ಕಾರ್ಯದರ್ಶಿ ಡಾ.ಬಿ.ಜಿ.ದೇಸಾಯಿ, ಜಂಟಿ ಕಾರ್ಯದರ್ಶಿಗಳಾದ ಡಾ.ಎಸ್.ಎಸ್.ಜಲಾಲಪುರೆ, ಡಾ.ಪಿ.ಆರ್.ಕಡಕೋಳ ಅವರು ಉಪಸ್ಥಿತರಿದ್ದರು.

--------

ಬಾಕ್ಸ್

ಅಮಿತ್‌ ಕೋರೆ ಹಿನ್ನೆಲೆ ಏನು..?

ಅಮಿತ ಕೋರೆ ಅವರು ಕೆಎಲ್‌ಇ ಸೊಸೈಟಿಯ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್ ಸದಸ್ಯರಾಗಿ 2010ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆಡಳಿತಾತ್ಮಕ ನಿರ್ಧಾರಗಳು, ವಿಸ್ತರಣೆ ಯೋಜನೆಗಳು ಮತ್ತು ಸಂಸ್ಥೆಯ ದೀರ್ಘಕಾಲಿಕ ದೃಷ್ಟಿಕೋನ ರೂಪಿಸುವಲ್ಲಿ ಅವರು ಸಕ್ರಿಯರಾಗಿ, ಮೌಲಿಕ ಕೊಡುಗೆ ನೀಡಿದ್ದಾರೆ. ಶಿಕ್ಷಣ ಕ್ಷೇತ್ರದೊಂದಿಗೆ ಸಹಕಾರ ಹಾಗೂ ಕೈಗಾರಿಕಾ ವಲಯದಲ್ಲಿಯೂ ಅನುಭವ ಹೊಂದಿರುವ ಅಮಿತ ಸರಳತೆ ಸೌಜನ್ಯತೆಗೆ ಹೆಸರಾಗಿದ್ದಾರೆ. ಅಮಿತ್‌ ಕೋರೆ ಅವರು ಚಿದಾನಂದ ಬಸಪ್ರಭು ಕೋರೆ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಪ್ರಸ್ತುತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನವದೆಹಲಿಯ ನ್ಯಾಷನಲ್‌ ಫೆಡರೇಶನ್‌ ಆಫ್‌ ಕೋ-ಆಪರೇಟಿವ್‌ ಶುಗರ್‌ ಫ್ಯಾಕ್ಟರಿ ಉಪಾಧ್ಯಕ್ಷರಾಗಿ, ಶಿವಶಕ್ತಿ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿ, ಹರ್ಮ್ಸ್‌ ಡಿಸ್ಟಿಲರಿ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕರಾಗಿ, ಮರಕುಂಬಿಯ ಇನಾಂದಾರ ಶುಗರ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಚ್ಛೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ
ಬೇಗೂರು ಡಂಪಿಂಗ್‌ ಯಾರ್ಡ್‌ನಲ್ಲಿಬೆಂಕಿ ಅವಘಡ- ಲಾರಿ, ಆಟೋ ಭಸ್ಮ