ಕನ್ನಡಪ್ರಭ ವಾರ್ತೆ ಮಡಿಕೇರಿ
ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದರು, ಮೈಸೂರು-ಕೊಡಗು ಕ್ಷೇತ್ರದ ಸಮಸ್ಯೆಗಳು ಹಾಗೂ ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾದ ಬಗ್ಗೆ ಮನವಿ ಮಾಡಲಾಯಿತು ಎಂದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ಡಿಆರ್‌ಎಫ್ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ತಿಳಿಸಿದರು.ಕೊಡಗು ಜಿಲ್ಲಾದ್ಯಂತ ಈ ಬಾರಿ ಅತಿ ಹೆಚ್ಚು ಮಳೆಯಾಗಿದೆ. ಇದಕ್ಕಾಗಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಬೇಕು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದರೆ, ತಡೆಗೋಡೆಗಳನ್ನು, ರಸ್ತೆಗಳನ್ನು ದುರಸ್ತಿ ಮಾಡಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದೆ. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ಹೇಳಿದರು.
ಕೊಡಗಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಎಚ್ಚರಿಕೆ ಅಗತ್ಯ:
ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಆಲಿಸಿದ ಗೃಹ ಸಚಿವ ಅಮಿತ್ ಶಾ, ಕಾಲಮಿತಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.