ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ಫ್ಯಾಷನ್ ಆಗಿದೆ, ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮದಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂಬ ಅವರ ಹೇಳಿಕೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಇದೀಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ಫ್ಯಾಷನ್ ಆಗಿದೆ, ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮದಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂಬ ಅವರ ಹೇಳಿಕೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಸಮಾನತೆ, ದ್ವೇಷ ಹರಡುವ ಬಿಜೆಪಿಗರ ಮನೋಸ್ಥಿತಿಯನ್ನು ಇದು ಸೂಚಿಸುತ್ತದೆ. ಹಾಗೆಯೇ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಕುರಿತಾಗಿ ಗೃಹ ಸಚಿವ ಅಮಿತ್ ಶಾ ಅವರ ಈ ಕೆಟ್ಟ ನಿಲುವಿಗೆ ಅಂಬೇಡ್ಕರ್ ಅವರಿಂದ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಾಂತರ ಜನತೆ ಅವರಿಗೆ ಛೀಮಾರಿ ಹಾಕಲಿದ್ದಾರೆ ಎಂದವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
ಹಾಗೆಯೇ ನಮಗೆಲ್ಲ ಘನತೆ, ಸಮಾನತೆ, ಸಹಬಾಳ್ವೆಯ ಜೀವನ ನಡೆಸಲು ಅವಕಾಶ ಕಲ್ಪಿಸಿದ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನಾವೆಲ್ಲ ಪ್ರತಿನಿತ್ಯ ಸ್ಮರಿಸುವ ಮೂಲಕ ಗೌರವಿಸಬೇಕಾಗಿದೆ ಎಂದು ರಮೇಶ್ ಕಾಂಚನ್ ಅಭಿಪ್ರಾಯಪಟ್ಟಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.