ಅಮಿತ್‌ ಶಾ ಹೇಳಿಕೆ ಚರಿತ್ರೆಗೆ ಕಳಂಕ

KannadaprabhaNewsNetwork |  
Published : Dec 25, 2024, 12:49 AM IST
24 ಟಿವಿಕೆ 1 – ತುರುವೇಕೆರೆಯ ಹಲವು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಬಾಬಾ ಸಾಹೇಬ್ ಬಿ.ಆರ್.‌ ಅಂಬೇಡ್ಕರ್‌ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡಿಸಿ,   ತಹಶೀಲ್ದಾರ್ ಎನ್.ಎ.ಕುಂಞಅಹಮದ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಡಾ. ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡಿಸಿ ತಾಲೂಕು ದಸಂಸ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭವಾರ್ತೆ ತುರುವೇಕೆರೆ

ಡಾ. ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಖಂಡಿಸಿ ತಾಲೂಕು ದಸಂಸ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿಯವರೆಗೂ ದಸಂಸ ಪದಾಧಿಕಾರಿಗಳು, ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಮತ್ತು ಮಹಿಳೆಯರು ಕೇಂದ್ರದ ಗೃಹ ಸಚಿವ ಅಮಿತ್ ಶಾ ರವರ ಪ್ರತಿಕೃತಿಯನ್ನುಮೆರವಣಿಗೆ ಮಾಡಿ ತದ ನಂತರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಡಿಎಸ್ಎಸ್ ತಾಲೂಕು ಸಂಚಾಲಕ ದಂಡಿನಶಿವರ ಕುಮಾರ್, ದೇಶದ ಗೌರವಯುತ ಸ್ಥಾನದಲ್ಲಿರುವ ಅಮಿತ್ ಶಾರವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ. ಈ ಹೇಳಿಕೆಯು ದಲಿತ, ಹಿಂದುಳಿದ ಹಾಗು ಶ್ರಮಿಕ ವರ್ಗದ ಸಮುದಾಯಗಳನ್ನು ಅವಮಾನಿಸುವ, ನೋಯಿಸುವ ಕೆಲಸವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಂತಹ ಹೇಯ ಕೃತ್ಯಗಳನ್ನು ಮಾಡುತ್ತಾ ಬಂದಿದೆ. ಇದೊಂದು ಭಾರತೀಯ ಸಂಸ್ಕೃತಿ ಮತ್ತು ಚರಿತ್ರೆಗೆ ಅಂಟಿಕೊಂಡಿರುವ ಕಳಂಕವಾಗಿದೆ ಎಂದು ಕಿಡಿಕಾರಿದರು. ಅಮಿತ್ ಶಾ ರವರು ಬಹಿರಂಗವಾಗಿ ಕ್ಷಮಾಪಣೆ ಕೇಳಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವೆ ದೇಶದಿಂದಲೇ ಗಡೀಪಾರು ಮಾಡಬೇಕೆಂದು ದಂಡಿನಶಿವರ ಕುಮಾರ್ ಆಗ್ರಹಿಸಿದರು. ಪ್ರತಿಭಟನಾ ನಿರತರು ನಂತರ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಎನ್.ಎ. ಕುಂಞಅಹಮದ್ ರವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಸತೀಶ್, ಬೀದಿಬದಿ ವ್ಯಾಪಾರಿಗಳ ಸಂಘದ ಮಾರುತಿ, ದಲಿತ ಮುಖಂಡರಾದ ರಾಮು ಹೆಗ್ಗೆರೆ, ಬೋರಪ್ಪ, ತಮ್ಮಯ್ಯ, ಶಿವನಂಜಪ್ಪ, ಲಕ್ಷ್ಮೀಶ್, ಸಂಧ್ಯಾ, ಭಾಗ್ಯಮ್ಮ, ಲಕ್ಷ್ಮೀದೇವಮ್ಮ, ಚಂದ್ರು, ಮಾಚೇನಹಳ್ಳಿ ಪ್ರಸಾದ್, ನಾಗಣ್ಣ ರಾಯಸಂದ್ರ, ಕುಮಾರ್ ಕಡಬಾ, ಹರೀಶ, ಮಹಾಲಿಂಗಯ್ಯ, ಮುನಿಯೂರು ಗಿರಿ, ಸ್ವಾಮಿ ಕಡೇಹಳ್ಳಿ, ಅಲ್ಪಸಂಖ್ಯಾತರ ಘಟಕದ ಮುಖಂಡ ಜಾಬೀರ್, ಸಾಬೀರ್ , ಅಫ್ಜಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ