ಅಮಿತ್‌ ಶಾ ಹೇಳಿಕೆ ವಾಪಸ್ ಪಡೆಯಬೇಕು

KannadaprabhaNewsNetwork |  
Published : Dec 20, 2024, 12:46 AM IST
19ಎಚ್ಎಸ್ಎನ್7 : ಅಂಬೇಡ್ಕರ್‌ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು. | Kannada Prabha

ಸಾರಾಂಶ

ಅಂಬೇಡ್ಕರ್ ವಿರುದ್ಧವಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಹೇಳಿಕೆ ವಾಪಸ್ ಪಡೆಯಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು. ಕೂಡಲೇ ಗೃಹ ಸಚಿವ ಅಮಿತ್ ಶಾ ಇಂತಹ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಪ್ರಧಾನಿ ಮೋದಿಯವರು ಮತ್ತು ರಾಷ್ಟ್ರಪತಿಗಳು ಅಮಿತ್ ಶಾ ಅವರನ್ನ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಹಾಸನ: ಅಂಬೇಡ್ಕರ್ ವಿರುದ್ಧವಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಹೇಳಿಕೆ ವಾಪಸ್ ಪಡೆಯಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಇದೇ ವೇಳೆ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದೇವಪ್ಪ ಮಲ್ಲಿಗೆವಾಳು ಮಾಧ್ಯಮದೊಂದಿಗೆ ಮಾತನಾಡಿ, ಕೇಂದ್ರ ಗೃಹ ಸಚಿವರಾದಂತಹ ಅಮಿತ್ ಶಾ ಅವರು ಲೋಕಸಭೆಯಲ್ಲಿ ಅಂಬೇಡ್ಕರ್ ಅವರ ವಿರುದ್ಧವಾಗಿ ಹೇಳಿಕೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಅಂತರಂಗದಲ್ಲಿ ಇರುವುದನ್ನು ಬಹಿರಂಗವಾಗಿ ಹೇಳುವ ಮೂಲಕ ನಾವು ಕೋಮುವಾದಿಗಳು, ಮನುವಾದಿಗಳು ಎಂಬುದನ್ನು ಲೋಕಸಭೆಯಲ್ಲಿ ಪ್ರಸ್ತುತ ಪಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೂರು ಪರ್ಸೆಂಟ್‌ ಇರುವಂತಹ ಅಲ್ಪಸಂಖ್ಯಾತರು ೯೭ ಪರ್ಸೆಂಟ್‌ ಇರುವ ಬಹುಸಂಖ್ಯಾತರು ಏನಿದ್ದಾರೆ ಮುಂದಿನ ದಿನಗಳಲ್ಲಿ ಈತರವಾದ ಹೇಳಿಕೆಗಳನ್ನು ಅಮಿತ್ ಶಾ ಆಗಲಿ, ಅವರ ಕೇಂದ್ರದ ಸಂಪುಟದ ಸಚಿವರಾಗಲಿ ಇಂತಹ ಹೇಳಿಕೆ ಕೊಟ್ಟರೇ ಮುಂದೆ ರಕ್ತಪಾತವಾಗುತ್ತದೆ ಎಂದು ಎಚ್ಚರಿಸಿದರು. ಬಹುಸಂಖ್ಯಾತರು ಏನಿದ್ದೀವಿ ನಾವುಗಳೆಲ್ಲಾ ಒಟ್ಟಾಗಿ ಕೋಮುವಾದಿ ಸರಕಾರವನ್ನು, ಮನುವಾದಿ ಸರಕಾರವನ್ನು ತೊಲಗಿಸುವುದಕ್ಕೆ ಕಟಿಬದ್ಧರಾಗಿ ನಿಲ್ಲುತ್ತೇವೆ ಎಂದರು. ಕೂಡಲೇ ಗೃಹ ಸಚಿವ ಅಮಿತ್ ಶಾ ಇಂತಹ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಪ್ರಧಾನಿ ಮೋದಿಯವರು ಮತ್ತು ರಾಷ್ಟ್ರಪತಿಗಳು ಅಮಿತ್ ಶಾ ಅವರನ್ನ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಮಚಂದ್ರ, ಮಂಜುನಾಥ್ ಶರ್ಮ, ಅಶೋಕ್, ಶೇಖರಪ್ಪ, ಕುಮಾರ್, ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌