ಸಮೀಪದ ಅಮ್ಮತ್ತಿಯ ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ. ಫಾ. ಮದಲೈಮುತ್ತು ಅವರು ರೆ. ಫಾ. ರೈಮಂಡ್ ಅವರಿಂದ ಅಧಿಕಾರ ಸ್ವೀಕರಿಸಿದರು.
ವಿರಾಜಪೇಟೆ : ಸಮೀಪದ ಅಮ್ಮತ್ತಿ ಯ ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ. ಫಾ. ಮದಲೈ ಮುತ್ತು ರವರು ರೆ. ಫಾ. ರೈಮಂಡ್ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು. ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಅಧಿಕಾರ ಸ್ವೀಕಾರದ ಧಾರ್ಮಿಕ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು.
ರೆ. ಫಾ. ಮದಲೈ ಮುತ್ತು ರವರು ಕಳೆದ 22 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿಯೇ ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ಜನಾನುರಾಗಿರುತ್ತಾರೆ. ಪ್ರಸ್ತುತ ಅಮ್ಮತ್ತಿ ಧರ್ಮ ಕೇಂದ್ರದ ಗುರುಗಳಾಗಿ ಅದರ ಜೊತೆಗೆ ವಿರಾಜಪೇಟೆ ಸಂತ ಅನ್ನಮ್ಮ ಪಿ. ಯು. ಕಾಲೇಜಿನ ಪ್ರಾಂಶುಪಾಲರಾಗಿ, ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕರಾಗಿಯೂ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಇವರು ಈ ಹಿಂದೆ ಕೊಡಗು ವಲಯದ ಶ್ರೇಷ್ಠ ಗುರುಗಳಾಗಿ, ಎಂಡಿಇಎಸ್ ಶಿಕ್ಷಣ ಸಂಸ್ಥೆಗಳ ಖಜಾಂಚಿ ಆಗಿಯೂ ಸೇವೆಯನ್ನು ಸಲ್ಲಿಸಿರುತ್ತಾರೆ. ಮಾತ್ರವಲ್ಲದೆ ಬಡ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೂ ನೆರವಾಗುತ್ತಿರುವುದು ಗಮನಾರ್ಹವಾಗಿದೆ. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಅಮ್ಮತ್ತಿ ಚರ್ಚ್ ನ ಕನ್ಯಾ ಸ್ತ್ರೀಯರು, ಪಾಲನಾ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.