ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಪರಿಶೀಲನೆ
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಅರ್ಜಿ ಸಮಿತಿ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪ್ರಕರಣಗಳನ್ನು ಪರಿಶೀಲಿಸಿ ಮಾತನಾಡಿದರು. ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರನ್ನು ಕೈಬೀಸಿ ಸೆಳೆಯುವ ನಿಸರ್ಗ ಸೌಂದರ್ಯದ ತಾಣವಾಗಿದೆ. ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಿಯಾ ಯೋಜನೆ ರೂಪಿಸಿ ಸಮಿತಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಇದನ್ನು ಸರ್ಕಾರಕ್ಕೆ ಸಮಿತಿಯಿಂದ ಶಿಫಾರಸ್ಸು ಮಾಡಲಾಗುವುದು ಎಂದರು.ಅಯ್ಯನಕೆರೆ, ದೇವನೂರು ದೊಡ್ಡಕೆರೆ, ಬ್ರಹ್ಮಸಮುದ್ರ ಕೆರೆ, ಮದಗದ ಕೆರೆ ಹಾಗೂ ವಿಷ್ಣುಸಮುದ್ರ ಕೆರೆಗಳನ್ನು ಅಭಿವೃದ್ಧಿ ಪಡಿಸುವ ಸಂಬಂಧ ಸಲ್ಲಿಸಲಾದ ಅರ್ಜಿ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಪಷ್ಟೀಕರಣ ನೀಡಿ, 2021-22 ರಲ್ಲಿ ₹250 ಲಕ್ಷ ದಲ್ಲಿ ಕೆರೆಗಳ ಅಭಿವೃದ್ಧಿಪಡಿಸಲಾಗಿದೆ.
17 ಕೆಸಿಕೆಎಂ 1ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಪ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಅಧ್ಯಕ್ಷತೆಯಲ್ಲಿ ವಿಧಾನಪರಿಷತ್ ಅರ್ಜಿ ಸಮಿತಿ ಸಭೆ ನಡೆಯಿತು.