ಜಾತ್ರೆಯ ಕ್ರೀಡಾ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರಚಾರ ಕಾರ್ಯಗಳು, ಟೆಂಟ್ ಹಾಗೂ ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ವ್ಯವಸ್ಥೆಗಳಿಗೆ ತಗಲುವ ವೆಚ್ಚದ ಕುರಿತು ಸ್ಪಷ್ಟ ಮಾಹಿತಿ ನೀಡಲಾಗುವುದು. ಜಾತ್ರೆಯ ಕಾರ್ಯಕ್ರಮಗಳು ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ, ಸದ್ಯಕ್ಕೆ ಸಂಪೂರ್ಣ ಖರ್ಚಿನ ಲೆಕ್ಕಪತ್ರ ಸಿದ್ಧಪಡಿಸಲು ಸಾಧ್ಯವಿಲ್ಲ. ಎಲ್ಲ ಕಾರ್ಯಕ್ರಮಗಳು ಮುಗಿದ ಬಳಿಕ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಿ, ಯಾರು ಎಷ್ಟು ಹಣ ನೀಡಿದ್ದಾರೆ, ಯಾವ ಉದ್ದೇಶಕ್ಕೆ ಎಷ್ಟು ಖರ್ಚಾಗಿದೆ ಎಂಬುದನ್ನು ವಿವರವಾಗಿ ದಾಖಲಿಸಲಾಗುವುದು ಎಂದರು.
ಹಾಸನ: ಹಾಸನಾಂಬಾ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಖರ್ಚು ಮಾಡುವ ಹಣದ ಬಗ್ಗೆ ಯಾವುದೇ ಮುಚ್ಚುಮರೆ ಇಲ್ಲದೆ ಜಾತ್ರೆ ಮುಗಿದ ನಂತರ ಪ್ರತಿಯೊಂದು ಖರ್ಚಿನ ವಿವರವನ್ನು ಸಂಗ್ರಹಿಸಿ, ಪಾರದರ್ಶಕವಾಗಿ ಸಾರ್ವಜನಿಕರ ಮುಂದೆ ಸಲ್ಲಿಸಲಾಗುವುದುರೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿ, ಜಾತ್ರೆಯ ಕ್ರೀಡಾ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರಚಾರ ಕಾರ್ಯಗಳು, ಟೆಂಟ್ ಹಾಗೂ ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ವ್ಯವಸ್ಥೆಗಳಿಗೆ ತಗಲುವ ವೆಚ್ಚದ ಕುರಿತು ಸ್ಪಷ್ಟ ಮಾಹಿತಿ ನೀಡಲಾಗುವುದು. ಜಾತ್ರೆಯ ಕಾರ್ಯಕ್ರಮಗಳು ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ, ಸದ್ಯಕ್ಕೆ ಸಂಪೂರ್ಣ ಖರ್ಚಿನ ಲೆಕ್ಕಪತ್ರ ಸಿದ್ಧಪಡಿಸಲು ಸಾಧ್ಯವಿಲ್ಲ. ಎಲ್ಲ ಕಾರ್ಯಕ್ರಮಗಳು ಮುಗಿದ ಬಳಿಕ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಿ, ಯಾರು ಎಷ್ಟು ಹಣ ನೀಡಿದ್ದಾರೆ, ಯಾವ ಉದ್ದೇಶಕ್ಕೆ ಎಷ್ಟು ಖರ್ಚಾಗಿದೆ ಎಂಬುದನ್ನು ವಿವರವಾಗಿ ದಾಖಲಿಸಲಾಗುವುದು. ಒಂದು ರುಪಾಯಿಯನ್ನೂ ಬಿಡದೆ ಸಂಪೂರ್ಣ ಲೆಕ್ಕವನ್ನು ಸಾರ್ವಜನಿಕರಿಗೆ ಸಲ್ಲಿಸುತ್ತೇವೆ ಎಂದು ಭರವಸೆ ನೀಡಿದರು.ಸ್ಥಳೀಯ ಭಕ್ತರಿಗೆ ಆದ್ಯತೆ ಕುರಿತು ಪರಿಶೀಲನೆಹಾಸನಾಂಬಾ ದೇವಿಯ ದರ್ಶನಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಸ್ಥಳೀಯ ಭಕ್ತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸ್ಥಳೀಯ ಜನರ ಅನುಕೂಲವನ್ನೂ ಪರಿಗಣಿಸುವುದು ಅಗತ್ಯವಾಗಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಹೊರಜಿಲ್ಲೆ, ಹೊರರಾಜ್ಯ ಹಾಗೂ ವಿದೇಶಗಳಿಂದ ಆಗಮಿಸುವ ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸುವುದರ ಜೊತೆಗೆ ಸ್ಥಳೀಯ ಭಕ್ತರೂ ಸುಲಭವಾಗಿ ದೇವಿಯ ದರ್ಶನ ಪಡೆಯುವಂತಾಗಬೇಕು. ಎಲ್ಲ ಭಕ್ತರಿಗೂ ಗೌರವ ನೀಡುವ ರೀತಿಯಲ್ಲಿ ಸೂಕ್ತ ವ್ಯವಸ್ಥೆ ರೂಪಿಸುವುದು ಮುಖ್ಯವಾಗಿದೆ. ಕಳೆದ ವರ್ಷ ಹೇಗೆ ವ್ಯವಸ್ಥೆ ಮಾಡಲಾಗಿತ್ತು ಅದೇ ರೀತಿ ಈ ವರ್ಷವೂ ಕೂಡ ಮಾಡಲಾಗುವುದು ಎಂದರು.ಜನಪ್ರತಿನಿಧಿಗಳ ನಡುವೆ ಸಮನ್ವಯ ಇರಲಿಜಾತ್ರೆಯ ಸಿದ್ಧತೆ ಹಾಗೂ ಜಿಲ್ಲಾಡಳಿತದ ಸಭೆಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳಿಗೆ ಸೂಕ್ತ ಮಾಹಿತಿ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ನಡುವೆ ಸಮನ್ವಯ ಇರಬೇಕು ಎಂದು ಹೇಳಿದರು. ಸಭೆಗಳಲ್ಲಿ ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ಮಾಹಿತಿ ನೀಡಬೇಕು. ಯಾವುದೇ ವಿಚಾರವನ್ನು ಏಕಪಕ್ಷೀಯವಾಗಿ ನಿರ್ಧರಿಸದೆ ಎಲ್ಲರ ಅಭಿಪ್ರಾಯಗಳನ್ನು ಆಲಿಸಬೇಕು. ದೇವಾಲಯದ ಪ್ರೋಟೋಕಾಲ್ ವ್ಯವಸ್ಥೆಯಲ್ಲಿ ಯಾರಿಗೂ ಅವಮಾನವಾಗದಂತೆ ನೋಡಿಕೊಳ್ಳಬೇಕು. ಅನಗತ್ಯ ವೆಚ್ಚ ಕಂಡುಬಂದರೆ ಅದನ್ನು ಪರಿಶೀಲಿಸಿ ಕಡಿತಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದರು.ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ
ಜಾತ್ರೆಗೆ ಆಗಮಿಸುವ ಭಕ್ತರಿಗೆ ದೇವಿಯ ದರ್ಶನದ ಜೊತೆಗೆ ಮನರಂಜನೆ ಹಾಗೂ ಗ್ರಾಮೀಣ ಕ್ರೀಡೆಗಳನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ನಗರದ ಹಳೆಯ ಎಕ್ಸಿಬಿಷನ್ ಮೈದಾನದಲ್ಲಿ ಕುಸ್ತಿ, ಕಬಡ್ಡಿ ಹಾಗೂ ವಾಲಿಬಾಲ್ ಸ್ಪರ್ಧೆಗಳನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ಕುಸ್ತಿ ಸ್ಪರ್ಧೆಯಲ್ಲಿ ಸುಮಾರು ೪೫೦ ಮಂದಿ ಮಹಿಳಾ ಮತ್ತು ಪುರುಷ ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆಯಿದೆ. ಕಬಡ್ಡಿ ಸ್ಪರ್ಧೆಯಲ್ಲಿ ಸುಮಾರು ೧೫೦ರಿಂದ ೨೦೦ ಮಂದಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಕ್ರೀಡಾ ಇಲಾಖೆಯ ಸಹಕಾರದೊಂದಿಗೆ ಸ್ಪರ್ಧೆಗಳನ್ನು ವ್ಯವಸ್ಥಿತವಾಗಿ ನಡೆಸಲಾಗುವುದು. ಗ್ರಾಮೀಣ ಸಂಸ್ಕೃತಿ ಹಾಗೂ ಜಾನುವಾರು ಸಾಕಾಣಿಕೆಗೆ ಉತ್ತೇಜನ ನೀಡಲು ಹೋರಿ ಪ್ರದರ್ಶನ ಮತ್ತು ಸ್ಪರ್ಧೆಯನ್ನೂ ಆಯೋಜಿಸಿ ವಿಜೇತರಿಗೆ ಬಹುಮಾನ ನೀಡಲು ಉದ್ದೇಶಿಸಲಾಗಿದೆ ಎಂದರು.
ಪಕ್ಷಭೇದ ಮರೆತು ಸಹಕರಿಸಲು ಮನವಿ
ಹಾಸನಾಂಬಾ ಜಾತ್ರೆಯ ಸಿದ್ಧತೆಗಳ ಕುರಿತು ಮಾತನಾಡಿದ ಸಚಿವರು, ಜಾತ್ರೆಯು ಜಿಲ್ಲೆಯ ಧಾರ್ಮಿಕ ಪರಂಪರೆ ಹಾಗೂ ಜನರ ಭಾವನೆಗೆ ಸಂಬಂಧಿಸಿದ ಮಹತ್ವದ ಉತ್ಸವವಾಗಿದೆ. ಆದ್ದರಿಂದ ಜನಪ್ರತಿನಿಧಿಗಳು ಪಕ್ಷಭೇದ ಮರೆತು, ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಕೈಜೋಡಿಸಿ ಜಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಗರದ ಪ್ರಮುಖ ವೃತ್ತಗಳಿಂದ ದೇವಸ್ಥಾನದವರೆಗಿನ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಹಾಗೂ ಅಲಂಕಾರಿಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದ್ದು, ಸಣ್ಣಪುಟ್ಟ ಲೋಪದೋಷಗಳಿದ್ದರೆ ಅವುಗಳನ್ನು ಸರಿಪಡಿಸಿ ನಿಗದಿತ ಸಮಯದಲ್ಲಿ ಸಿದ್ಧತೆ ಪೂರ್ಣಗೊಳಿಸಲಾಗುವುದು. ಭಕ್ತರಿಗೆ ಸುಗಮ ದರ್ಶನ, ಪ್ರಸಾದ ವಿತರಣೆ ಹಾಗೂ ಜನಸಂದಣಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಎಲ್ಲರ ಸಹಕಾರದೊಂದಿಗೆ ಜಾತ್ರೆಯನ್ನು ಅಚ್ಚುಕಟ್ಟಾಗಿ ನಡೆಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.