ಪರಿಶ್ರಮದಿಂದ ಮಾಡಿದ ಸಾಧನೆ ಬದುಕಿಗೆ ಮಾದರಿ

KannadaprabhaNewsNetwork |  
Published : Jul 22, 2024, 01:15 AM IST
ಸಿಕೆಬಿ-1 ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದಲ್ಲಿ ಯುಜಿ,ಪಿಜಿಯಲ್ಲಿ ಚಿನ್ನದ ಪದಕ  ಮತ್ತು ಪಿಹೆಚ್ ಡಿ ಪಡೆದವರೊಂದಿಗೆ ಗಣ್ಯರು | Kannada Prabha

ಸಾರಾಂಶ

ಮಾನವೀಯ ಸೇವೆಯ ಮೂಲಕ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯವು ಪರಿವರ್ತನೆಯ ಶಿಕ್ಷಣವನ್ನು ನೀಡಿ ಮನುಕುಲವನ್ನು ಮೇಲೆ ಎತ್ತುವ ಕೆಲಸ ಮಾಡುತ್ತಿದೆ. ವಿಜ್ಞಾನ ವೈದ್ಯಕೀಯ ವಿಜ್ಞಾನ ಹೀಗೆ ಶಿಕ್ಷಣದ ಅನೇಕ ಮಜಲುಗಳಲ್ಲಿ ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಸತತ ಪರಿಶ್ರಮ, ಅರ್ಪಣಾ ಮನೋಭಾವದಿಂದ ಸಾಧಿಸಿದ ಸಾಧನೆಯು ಜೀವನಕ್ಕೆ ಮಾದರಿ. ಅಭ್ಯುದಯ ಸಾಧಿಸುತ್ತಾ ಜಾಗತಿಕ ರಾಯಭಾರಿಗಳಾಗಿ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಹಾಗೂ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

ತಾಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಪ್ರೇಮಾಮೃತಂ ಸಭಾಂಗಣದಲ್ಲಿ ಸಭಾಂಗಣದಲ್ಲಿ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಮತ್ತು ಇತರ ಪದವಿ ಮತ್ತು ಪುರಸ್ಕಾರಗಳನ್ನು ಪ್ರದಾನ ಮಾಡಿ, ಮಾತನಾಡಿದರು.

ರಾಷ್ಟ್ರ ಕಟ್ಟಲು ನಿಸ್ವಾರ್ಥ ಸೇವೆ

ಮಾನವೀಯ ಸೇವೆಯ ಮೂಲಕ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯವು ಪರಿವರ್ತನೆಯ ಶಿಕ್ಷಣವನ್ನು ನೀಡಿ ಮನುಕುಲವನ್ನು ಮೇಲೆ ಎತ್ತುವ ಕೆಲಸ ಮಾಡುತ್ತಿದೆ. ವಿಜ್ಞಾನ ವೈದ್ಯಕೀಯ ವಿಜ್ಞಾನ ಹೀಗೆ ಶಿಕ್ಷಣದ ಅನೇಕ ಮಜಲುಗಳಲ್ಲಿ ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ. ನೆಮ್ಮದಿಯ ಬದುಕಿಗೆ ಎಲ್ಲಾ ರೀತಿಯ ಜ್ಞಾನ ವಿಜ್ಞಾನವನ್ನು ಒದಗಿಸುತ್ತದೆ. ನಿಸ್ವಾರ್ಥ ಸೇವೆಯಿಂದ ರಾಷ್ಟ್ರ ನಿರ್ಮಾಣ ಸಾಧ್ಯ ಎಂಬುದಕ್ಕೆ ಇಲ್ಲಿನ ಆಗು ಹೋಗುಗಳೇ ದೃಷ್ಟಾಂತ. ಇಂದು ನೆರವೇರಿದ

ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂಧನ ಸಾಯಿ ಆಶೀರ್ವಚನ ನೀಡಿ, ವಿದ್ಯಾರ್ಥಿಗಳು ಬೆಳಗಿದರೆ ಅವರಿಗೆ ವಿದ್ಯಾದಾನ ನೀಡುವ ವಿಶ್ವವಿದ್ಯಾಲಯದ ಪ್ರಕಾಶಿಸಿದಂತೆ. ವಿದ್ಯಾರ್ಥಿಗಳು ಸರ್ವರ ಸೇವೆಯನ್ನು ಮಾಡುತ್ತಾ ಜೀವನ ಸಾರ್ಥಕ ಗೊಳಿಸಬೇಕು ಎಂದರು.

ಗೌರವ ಡಾಕ್ಟರೇಟ್‌ ಪ್ರದಾನ

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಹೃದಯ ತಜ್ಞ ಪ್ರೊಫೆಸರ್ ಆಫ್ಕಾಸೆಂಡಿಯೋಸ್, ದರ್ಶನ್ ಶೇಖರ್ ಸೇರಿದಂತೆ ಏಳು ಮಂದಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಸಿ.ಶ್ರೀನಿವಾಸ್, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಬಿ.ಎನ್.ನರಸಿಂಹಮೂರ್ತಿ, ಉಪ ಕುಲಪತಿ ಡಾ. ಶ್ರೀಕಂಠ ಮೂರ್ತಿ, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ಪ್ರೊ. ಜೆ.ಶಶಿಧರ ಪ್ರಸಾದ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಕುಶಾಲ್ ಚೌಕ್ಸೆ, ಮತ್ತಿತರರು ಇದ್ದರು.

PREV

Recommended Stories

ದಸರಾ ಹಬ್ಬ ಅದ್ಧೂರಿ ಆಚರಣೆಗೆ ಎಲ್ಲರೂ ಸಹಕರಿಸಿ: ಏಗಪ್ಪ ಸವದಿ
ಬಿಡಿಸಿಸಿ ಬ್ಯಾಂಕ್‌ ಹಿತರಕ್ಷಣೆಗೆ ನಾವು ಬದ್ಧ