ಕನ್ನಡಪ್ರಭ ವಾರ್ತೆ ಶಿರಹಟ್ಟಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕನಕವಾಡ ಗ್ರಾಪಂ ಸಹಯೋಗದಲ್ಲಿ ತಾಲೂಕಿನ ಕನಕವಾಡ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧಿ ವಿತರಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಧುಮೇಹ ಮತ್ತು ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳದಿದ್ದರೆ ದೇಹದ ಪ್ರಮುಖ ಅಂಗಾಂಗಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ. ಸಮತೋಲಿತ ಆಹಾರ, ನಿಯಮಿತ ದೈಹಿಕ ವ್ಯಾಯಾಮ, ಧೂಮಪಾನ ಹಾಗೂ ಮದ್ಯಪಾನ ತ್ಯಜಿಸುವುದು, ಯೋಗ ಧ್ಯಾನದ ಮೂಲಕ ಒತ್ತಡ ಮುಕ್ತ ಜೀವನ ನಡೆಸಿದರೆ ಇಂತಹ ಕಾಯಿಲೆಗಳಿಂದ ದೂರವಿರಬಹುದು. ಗರ್ಭಿಣಿಯರು ಕನಿಷ್ಠ ನಾಲ್ಕು ಬಾರಿ ಕಡ್ಡಾಯ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಮಕ್ಕಳಿಗೆ ತಪ್ಪದೇ ಲಸಿಕೆಗಳನ್ನು ಹಾಕಿಸಬೇಕು ಎಂದರು.ಶಿಬಿರದಲ್ಲಿ ಎನ್ ಸಿಡಿ ವೈದ್ಯಾಧಿಕಾರಿ ಡಾ. ಅರ್ಪಿತಾ ಬಿರಾದಾರ, ಹೆಬ್ಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಬ್ದುಲ್ ಮಾಳಗಿ, ಎನ್ ಸಿಡಿ ವಿಭಾಗದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ರವಿ ಕಡಗಾವಿ ಹಾಗೂ ನೇತ್ರ ಸಹಾಯಕ ಶಾಂತಪ್ಪ ಪಾಲ್ಗೊಂಡು ರೋಗಿಗಳನ್ನು ತಪಾಸಣೆ ಮಾಡಿ ಉಚಿತ ಔಷಧಿ ವಿತರಿಸಿದರು.