ಆಮಿಷಕ್ಕೆ ಒಳಗಾಗದೆ ಹಕ್ಕು ಚಲಾಯಿಸಲು ಮನವಿ

KannadaprabhaNewsNetwork |  
Published : Jan 26, 2024, 01:49 AM IST
ಬಳ್ಳಾರಿಯಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್‌.ಎಚ್.ಪುಷ್ಪಾಂಜಲಿ ದೇವಿ ಮಾತನಾಡಿದರು.  | Kannada Prabha

ಸಾರಾಂಶ

ಯುವಕರು ಹಕ್ಕು ಬಾಧ್ಯತೆಗಳನ್ನು ಅಳವಡಿಸಿಕೊಂಡು, ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಿ ಮತ ಚಲಾಯಿಸಬೇಕು

ಬಳ್ಳಾರಿ: ಮತದಾನವು ಭಾರತ ಸಂವಿಧಾನ ನೀಡಿರುವ ಹಕ್ಕಾಗಿದ್ದು, ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಚ್. ಪುಷ್ಪಾಂಜಲಿ ದೇವಿ ತಿಳಿಸಿದರು.

ಭಾರತ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಆಶ್ರಯದಲ್ಲಿ “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದಡಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮತದಾನವು ನಮ್ಮ ನಾಗರಿಕ ಜವಾಬ್ದಾರಿಯಾಗಿದೆ. ಗಣರಾಜ್ಯದ ಭವಿಷ್ಯ ಯುವ ಮತದಾರರ ಕೈಯಲ್ಲಿದೆ. ಯುವಕರು ಹಕ್ಕು ಬಾಧ್ಯತೆಗಳನ್ನು ಅಳವಡಿಸಿಕೊಂಡು, ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ ಯೋಗ್ಯ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಿ ಮತ ಚಲಾಯಿಸಬೇಕು ಎಂದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಲು, ಯಾರು ಕೂಡ ಮತದಾನದಿಂದ ವಿಮುಖರಾಗದೇ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನಿ ಮಾತನಾಡಿ, 2011ರ ಜ. 25 ರಂದು ಮೊದಲ ಬಾರಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು. ಹೆಚ್ಚು ಹೆಚ್ಚು ಯುವ ಮತದಾರರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಮತದಾನ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಎಡಿಸಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್, ಪಾಲಿಕೆ ಆಯುಕ್ತ ಜಿ. ಖಲೀಲ್ ಸಾಬ್, ತಹಸೀಲ್ದಾರ್‌ ಗುರುರಾಜ ಸೇರಿದಂತೆ ಚುನಾವಣಾ ತಹಸೀಲ್ದಾರರು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಸಿಬ್ಬಂದಿ ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ