ನೆಲ್ಯಾಡಿ ಸರ್ಕಾರಿ ಶಾಲೆ ಬಗ್ಗೆ ಅಪಪ್ರಚಾರ ಮಾಡಿ ಕಳಂಕ ತರುವ ಯತ್ನ: ಎಸ್‌ಡಿಎಂಸಿ ಆರೋಪ

KannadaprabhaNewsNetwork |  
Published : Oct 13, 2024, 01:00 AM IST
ಫೋಟೋ: ೧೨ಪಿಟಿಆರ್-ಪ್ರೆಸ್ನೆಲ್ಯಾಡಿ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ವತಿಯಿಂದ ಸುದ್ದಿಗೋಷ್ಠಿ ನಡೆಯಿತು. | Kannada Prabha

ಸಾರಾಂಶ

ಇದೀಗ ನಮ್ಮ ಶಾಲೆಯ ಶಿಕ್ಷಕರೊಬ್ಬರ ಮೇಲೆ ಯಾವುದೋ ವ್ಯಕ್ತಿಯೊಬ್ಬ ಹೇಳಿದ ಮಾತುಗಳನ್ನು ಕೇಳಿಸಿಕೊಂಡು ಶಾಲೆಯ ಘನತೆಗೆ ಕುಂದುಂಟು ಮಾಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ನೆಲ್ಯಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಲ್ಲಿನ ಕರ್ತವ್ಯ ನಿರತ ಶಿಕ್ಷಕರೊಬ್ಬರ ಕುರಿತು ಖಾಸಗಿ ವಾಹಿನಿಯೊಂದರಲ್ಲಿ ಇಲ್ಲ-ಸಲ್ಲದ ಆರೋಪ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ., ಇದರಿಂದಾಗಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಈ ಶಾಲೆಯ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಲಾಗಿದೆ ಎಂದು ನೆಲ್ಯಾಡಿ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಮತ್ತು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಬಿನೋಜ್ ವಿ.ವಿ. ಆರೋಪಿಸಿದ್ದಾರೆ.

ಅವರು ಶನಿವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಇಂದಿನ ದಿನಗಳಲ್ಲಿ ಮಕ್ಕಳು ಬರುವುದೇ ಕಷ್ಟವಾಗಿದೆ. ಅಂತಹ ಸಂದರ್ಭದಲ್ಲಿಯೂ ನಮ್ಮ ಶಾಲೆಯಲ್ಲಿ ೪೨೫ ಮಕ್ಕಳು ಕಲಿಯುತ್ತಿದ್ದಾರೆ. ನೆಲ್ಯಾಡಿಯಲ್ಲಿ ಮೂರು ಖಾಸಗಿ ಶಾಲೆಗಳಿದ್ದರೂ ನಮ್ಮ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಮಕ್ಕಳಿದ್ದಾರೆ.ಇದೀಗ ನಮ್ಮ ಶಾಲೆಯ ಶಿಕ್ಷಕರೊಬ್ಬರ ಮೇಲೆ ಯಾವುದೋ ವ್ಯಕ್ತಿಯೊಬ್ಬ ಹೇಳಿದ ಮಾತುಗಳನ್ನು ಕೇಳಿಸಿಕೊಂಡು ಶಾಲೆಯ ಘನತೆಗೆ ಕುಂದುಂಟು ಮಾಡುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಎನ್., ಎಸ್‌ಡಿಎಂಸಿ ಸದಸ್ಯ ಕೆ.ಪಿ. ಪ್ರಸಾದ್, ನಿವೃತ್ತ ದೈಹಿಕ ಶಿಕ್ಷಕ ಜನಾರ್ದನ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ, ಬಾಗಲಕೋಟೆ ಕ್ಷೇತ್ರ ನಮ್ದೆ : ಡಿ.ಕೆ.ಶಿವಕುಮಾರ್‌
ಟಿಬಿ ಡ್ಯಾಂ ಹಿನ್ನೀರಿನ ಕೈಗಾರಿಕೆ ಲೈಸೆನ್ಸ್‌ ರದ್ದತಿಗಾಗಿ ಹೋರಾಟ