ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸುವ ಸುದಿನ!

KannadaprabhaNewsNetwork |  
Published : Aug 16, 2026, 03:15 AM IST
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಸಚಿವ ಸಂತೋಷ ಲಾಡ್‌ ಹಾಗೂ ಇತರೆ ಗಣ್ಯರು ಧ್ವಜಕ್ಕೆ ಗೌರವ ಸಲ್ಲಿಸಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಜನರ ಸಮಸ್ಯೆಗೆ ಪರಿಹಾರ ನೀಡಲು ಪ್ರಜಾ ಸೇವಾ ಇಲಾಖೆ ಸ್ಥಾಪಿಸಿದೆ. ರೈತ ಮಿತ್ರ, ಬಡವರ ಬಂಧು-ಅತಿ ಸಣ್ಣ ರೈತರಿಗೆ ಕೃಷಿ ಯಂತ್ರೋಪಕರಣ ಬಾಡಿಗೆ ಮೊತ್ತದಲ್ಲಿ ಶೇ. 50ರಷ್ಟು ಸಹಾಯ ಧನ ನೀಡಲಾಗುವುದು.

ಧಾರವಾಡ:

ಸ್ವಾತಂತ್ರ್ಯೋತ್ಸದ ದಿನವನ್ನು ಕೇವಲ ರಜಾದಿನವಾಗಿ ನೋಡದೇ, ಹೋರಾಟಗಾರರ ಮೌಲ್ಯ ನೆನಪಿಸಿಕೊಳ್ಳಲು ಒಂದು ಅವಕಾಶ ಎಂದು ತಿಳಿಯಬೇಕೆಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.

ಜಿಲ್ಲಾಡಳಿತವು ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವರು, ಸ್ವಾತಂತ್ರ್ಯದ ಚಳವಳಿ ರೂಪಿಸಿದ ಮಹನೀಯರನ್ನು ನೆನಪಿಸಿಕೊಳ್ಳಬೇಕು ಎಂದರು.

ಹೊಸ ಹೊಸ ಯೋಜನೆ:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಜನರ ಸಮಸ್ಯೆಗೆ ಪರಿಹಾರ ನೀಡಲು ಪ್ರಜಾ ಸೇವಾ ಇಲಾಖೆ ಸ್ಥಾಪಿಸಿದೆ. ರೈತ ಮಿತ್ರ, ಬಡವರ ಬಂಧು-ಅತಿ ಸಣ್ಣ ರೈತರಿಗೆ ಕೃಷಿ ಯಂತ್ರೋಪಕರಣ ಬಾಡಿಗೆ ಮೊತ್ತದಲ್ಲಿ ಶೇ. 50ರಷ್ಟು ಸಹಾಯ ಧನ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಅನುಭವಕ್ಕಾಗಿ ಗ್ರಾಮ ವಾಸ್ತವ್ಯ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

ವಿಪ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಒ ಭುವನೇಶ ಪಾಟೀಲ, ಎಸ್ಪಿ ಗುಂಜನ್ ಆರ್ಯ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಗರಿಮಾ ಪವಾರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ ಇದ್ದರು.

ಧ್ವಜಾರೋಹಣ ನಂತರ ವಿವಿಧ ದಳಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಈ ವೇಳೆ ಸಾಧಕರಿಗೆ ಸನ್ಮಾನ, ಕಾರ್ಮಿಕ ಇಲಾಖೆಯಿಂದ ಮಾತೃತ್ವ ಪ್ರಯೋಜನ ಕಾಯ್ದೆಯಲ್ಲಿ ಇಬ್ಬರು ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆ ಚೆಕ್‌ ವಿತರಣೆ, ಚಿತ್ರಕಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಾತಂತ್ರ ಹೋರಾಟದ ಕುರಿತಾಗಿ ಚಿತ್ರಗಳ ಪ್ರದರ್ಶನ, ಸ್ತಬ್ಧಚಿತ್ರಗಳ ಪ್ರದರ್ಶನ, ಮಲ್ಲಕಂಬ, ಮಾರ್ಷಲ್ ಆರ್ಟ್, ಯುವ ಜೋಡೋ ನೃತ್ಯ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.ರೈತರು, ಕಾರ್ಮಿಕರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲರಿಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ. ಸರ್ಕಾರ ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವ ಗುರಿ ಹೊಂದಿದ್ದು ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಸಹಕಾರ ಮತ್ತು ಬದ್ಧತೆ ಬೇಕು.

ಸಂತೋಷ ಲಾಡ್‌ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಪ್ಪಳ ಪ್ರಾಧಿಕಾರದಲ್ಲಿ ಕೋಟಿ ಕೋಟಿ ಲೂಟಿ!
ಜಿಲ್ಲೆಯಲ್ಲಿ 215 ಭಾರತ ಜೋಡೋ ಯುವ ಸಂಘ ಸ್ಥಾಪನೆ