ಉತ್ತಮ ವಾತಾವರಣ ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯ

KannadaprabhaNewsNetwork |  
Published : Jan 13, 2024, 01:36 AM IST
12 ಜಿಕೆಕೆ-4 | Kannada Prabha

ಸಾರಾಂಶ

ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಗೋಕಾಕ

ಮಕ್ಕಳಿಗೆ ರಾಜ್ಯದ ನೆಲ, ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣ ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ ಎಂದರು.

ಮಕ್ಕಳಲ್ಲಿ ಐತಿಹಾಸಿಕ ಪ್ರಜ್ಞೆ ಮೂಡಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಜೊತೆಗೆ ಭೌಗೋಳಿಕತೆಗೆ ಪ್ರವಾಸಗಳು ಮಕ್ಕಳಿಗೆ ಸಹಕಾರಿಯಾಗುತ್ತದೆ. ಮಕ್ಕಳ ಉಜ್ವಲ ಭವಿಷ್ಯವನ್ನು ಮನಗಂಡು ಶಿಕ್ಷಣ ಇಲಾಖೆಯು ಪ್ರತಿ ವರ್ಷ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳ ಜ್ಞಾನಾಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಸರ್ವೋತ್ತಮ ಜಾರಕಿಹೊಳಿ ಅವರು ಸಾರಿಗೆಯ ಬಸ್‌ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ ಕೋರಿದರು.

ಮೂಡಲಗಿ ಬಿಇಒ ಅಜೀತ ಮನ್ನಿಕೇರಿ, ಅರಭಾವಿ ಶಾಸಕರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ, ಮೂಡಲಗಿ ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಸಾರಿಗೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!