ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ಸಿಗೆ ಖಾಲಿ ಚೊಂಬು: ಸುರೇಶಕುಮಾರ

KannadaprabhaNewsNetwork |  
Published : Apr 28, 2024, 01:19 AM IST
ಬಳ್ಳಾರಿಯ ಖಾಸಗಿ ಹೋಟೆಲ್ ನಲ್ಲಿ ಜರುಗಿದ ಮೋದಿಗಾಗಿ ವಕೀಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.  | Kannada Prabha

ಸಾರಾಂಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಜನರಿಗೆ ಕಾಂಗ್ರೆಸ್ ಖಾಲಿ ಚೊಂಬು ನೀಡಿದೆ.

ಬಳ್ಳಾರಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್ಸಿಗೆ ಖಾಲಿ ಚೊಂಬು ನೀಡುವುದು ಖಚಿತ ಎಂದು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸುರೇಶಕುಮಾರ್ ಭವಿಷ್ಯ ನುಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಜನರಿಗೆ ಕಾಂಗ್ರೆಸ್ ಖಾಲಿ ಚೊಂಬು ನೀಡಿದೆ ಎಂದರು.

ಅಭಿವೃದ್ಧಿಗೆ ಎಲ್ಲೂ ಹಣ ನೀಡುತ್ತಿಲ್ಲ. ಕಳೆದ 10 ತಿಂಗಳಿನಿಂದ ನಿರುದ್ಯೋಗ ಭತ್ಯೆ ನೀಡದೇ ವಿದ್ಯಾವಂತ ಯುವಕರಿಗೆ ಕಾಂಗ್ರೆಸ್ ಖಾಲಿ ಚೊಂಬು ನೀಡಿದೆ. ಮಹಿಳೆಯರಿಗೆ ಉಚಿತ ಬಸ್ ಎಂದು ಹೇಳಿದರು. ಆದರೆ, ಬಸ್‌ಗಳನ್ನು ಕಡಿಮೆ ಮಾಡಿದರು. ಜೊತೆಗೆ ಬಸ್ ದರ ಏರಿಕೆ ಮಾಡಿದರು. ವಿದ್ಯುತ್ ಉಚಿತ ಎಂದು ಹೇಳಿ, ಅದಕ್ಕೆ ಹತ್ತಾರು ನಿಯಮ ಹಾಕಿದರು. ವಿದ್ಯುತ್‌ ದರ ಪ್ರತಿ ಯೂನಿಟ್‌ಗೆ ಹೆಚ್ಚಳ ಮಾಡಿ ಜನರಿಗೆ ಖಾಲಿ ಚೊಂಬು ನೀಡಿದರು ಎಂದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಹೋರಾಟ ಫಲಪ್ರದವಾಗಲಿದೆ. ಪ್ರತಿ ಕ್ಷೇತ್ರದಲ್ಲೂ ಬಿಜೆಪಿಗೆ ಮುನ್ನಡೆಯಿದೆ. ದೇಶದ ರಕ್ಷಣೆಗಾಗಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಬಯಸುತ್ತಿದ್ದಾರೆ. ಕಾಂಗ್ರೆಸ್‌ ನ ಗ್ಯಾರಂಟಿ ಯೋಜನೆಗಳು ಬಿಜೆಪಿ ಗೆಲುವಿನ ಓಟಕ್ಕೆ ತಡೆಯಾಗುವುದಿಲ್ಲ ಎಂದು ತಿಳಿಸಿದರು.

ಇದಕ್ಕೂ ಮುನ್ನ ಸುರೇಶಕುಮಾರ್ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಜರುಗಿದ ಮೋದಿಗಾಗಿ ವಕೀಲರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು. ವಕೀಲರು ಸೇರಿದಂತೆ ಜಿಲ್ಲೆಯ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಚುನಾಯಿಸಬೇಕು ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೋಕಾ, ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಡಾ.ಮಹಿಪಾಲ್, ಹಿರಿಯ ವಕೀಲ ಎನ್.ಅಯ್ಯಪ್ಪ, ಪಾರ್ವತಿ ಇಂದುಶೇಖರ್, ಸಾಧನಾ ಹಿರೇಮಠ, ಪಾಟೀಲ್ ಸಿದ್ದಾರೆಡ್ಡಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದ ಸಿಹಿ ಸುದ್ದಿ : ಏನೆಲ್ಲಾ ಸಿಗುತ್ತೆ ?
ಶಾಲೆ ಬಾಗಿಲಿಗೆ ಸಿಲುಕಿ ಬಾಲಕಿ ಬೆರಳು ಕಟ್‌ : ಕಸಕ್ಕೆಸೆದ ಶಿಕ್ಷಕರು-ಅಮಾನವೀಯ ವರ್ತನೆ!