ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಹಕಾರ ಸಚಿವ ಕೆ.ಎನ್.ರಾಜಣ್ಣನವರ 75ನೇ ಜನ್ಮ ದಿನದ ಅಮೃತ ಮಹೋತ್ಸವ ಸಮಾರಂಭ ಉದ್ಘಾಟನೆ ಹಾಗೂ ‘ಸಹಕಾರ ಸಾರ್ವಭೌಮ’ ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದರು.
ದ್ವೇಷ, ಸೇಡಿನಿಂದ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಎಲ್ಲರಲ್ಲೂ ಮನುಷ್ಯತ್ವ ಇರಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ, ಸಾಮಾಜಿಕ ಬದಲಾವಣೆ ಮಾಡಲು ಸಾಧ್ಯವಾಗುತ್ತದೆ. ಸಾಮಾಜಿಕ ವ್ಯವಸ್ಥೆಯಲ್ಲಿ ಅಸಮಾನತೆಯ ಪಿಡುಗನ್ನು ತೊಲಗಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ರಾಜಕಾರಣಿಗಳು ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.ಮನುಷ್ಯನಿಗೆ ಜಾತಿ ಮುಖ್ಯವಲ್ಲ, ಸ್ನೇಹ ಮುಖ್ಯ. ಮನುಷ್ಯ ಸಂಬಂಧ ಮುಖ್ಯ. ಇದನ್ನು ನಾವೆಲ್ಲಾ ಅರಿತು ಬದುಕು ನಡೆಸಬೇಕು. ಹೀಗಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ. ರಾಜಕಾರಣದಲ್ಲಿ ಇರುವವರು ಬದ್ಧತೆ, ನಂಬಿಕೆಯಿಂದ ನಡೆದುಕೊಳ್ಳಬೇಕು. ಇದನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ಆಗ ಮಾತ್ರ ಬದುಕು ಸಾರ್ಥಕವಾಗುತ್ತದೆ. ಹುಟ್ಟು ಸಾವಿನ ನಡುವೆ ಸಾರ್ಥಕ ಬದುಕು ನಡೆಸಬೇಕು. ಈ ನಿಟ್ಟಿನಲ್ಲಿ ಸಹಕಾರ ಸಚಿವ ರಾಜಣ್ಣ ಅವರು ಬದುಕನ್ನು ಸಾರ್ಥಕತೆ ಮಾಡಿಕೊಂಡಿದ್ದಾರೆ ಎಂದರು.
ಸಹಕಾರಿ ಕ್ಷೇತ್ರ ಎಂದರೆ ಜನ ಸೇವೆ ಎಂದು ತಿಳಿದುಕೊಂಡಿರುವ ರಾಜಕಾರಣಿ ರಾಜಣ್ಣ. ಇವರಿಗೆ ಬಡವರ ಬಗ್ಗೆ ಅಪಾರ ಕಾಳಜಿ, ಅನುಕಂಪ ಇದೆ. ಇವರ ಈ ಗುಣ ನನಗೆ ಬಹಳ ಇಷ್ಟವಾಗುತ್ತದೆ. ಹಾಗಾಗಿಯೇ ನಾನು ಅವರ ಮೇಲೆ ಹೆಚ್ಚು ಪ್ರೀತಿ, ವಿಶ್ವಾಸ ಹೊಂದಿದ್ದೇನೆ ಎಂದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಸಹಕಾರಿ ರಂಗದಲ್ಲಿ ಕೆ.ಎನ್.ರಾಜಣ್ಣನವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕಳೆದ 40 ವರ್ಷದಲ್ಲಿ ಸಹಕಾರಿ ರಂಗ, ರಾಜಕೀಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ರಾಜ್ಯಕ್ಕೆ ಮತ್ತು ಜಿಲ್ಲೆಗೆ ಇನ್ನು ದೀರ್ಘಾವಧಿ ಸೇವೆ ಸಲ್ಲಿಸಲು ಇವರಿಗೆ ದೇವರು ಮತ್ತಷ್ಟು ಶಕ್ತಿ ನೀಡಲಿ ಎಂದು ಹೇಳಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ರಾಜಕಾರಣದಲ್ಲಿ ಸಹಜವಾಗಿ ವಯಸ್ಸಾಗುತ್ತಿದ್ದಂತೆ ಜನಪ್ರಿಯತೆ ಕಡಿಮೆಯಾಗುತ್ತದೆ. ಆದರೆ ರಾಜಣ್ಣನವರ ವಿಚಾರದಲ್ಲಿ ಇದು ಸುಳ್ಳಾಗಿದ್ದು, ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಎನ್. ರಾಜಣ್ಣನವರ ಅಭಿನಂದನಾ ಗ್ರಂಥವನ್ನು ಲೋಕಾರ್ಪಣೆ ಮಾಡಿದರು. ತುಮಕೂರಿಗೆ ಮೆಟ್ರೋ, ಇಂಟರ್‌ಸಿಟಿ ರೈಲು: ಡಿಕೆಶಿ
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಮಾತನಾಡಿದರು. ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸುತ್ತಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ. ಧಾರ್ಮಿಕವಾಗಿ, ಶೈಕ್ಷಣಿಕವಾಗಿ ದೊಡ್ಡ ಪರಂಪರೆ ಇದೆ ಎಂದರು.
ತುಳಿತಕ್ಕೆ ಒಳಗಾದ ಸಮಾಜದ ಧೀಮಂತ ನಾಯಕನಿಗೆ ಶುಭ ಹಾರೈಸಲು ನಾವು ಇಲ್ಲಿ ಸೇರಿದ್ದೇವೆ. ನಾನು ಹಾಗೂ ರಾಜಣ್ಣ ಅವರು ಜಪಾನ್ ಹಾಗೂ ದಕ್ಷಿಣ ಕೊರಿಯಾ ಇತರೆ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಹಕಾರ ಸಹಭಾಗಿತ್ವ ಕಾರ‍್ಯಕ್ರಮದಲ್ಲಿ ಭಾಗವಹಿಸಿದ್ದೆವು. ಆ ಮೂಲಕ ಸಹಕಾರ ಕ್ಷೇತ್ರದ ಬಗ್ಗೆ ಹೆಚ್ಚು ಅಧ್ಯಯನ ಮಾಡಿದ್ದೆವು. ಈಗ ನಾವು ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದರು.
ಕೊಟ್ಟ ಮಾತಿನಂತೆ ನಡೆದಿದ್ದೇವೆ:ರೈತರ ಬದುಕು ಬದಲಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಕೊಟ್ಟ ಮಾತಿನಂತೆ ನಡೆದು ಜನರ ಆಶೋತ್ತರ ಈಡೇರಿಸಿದ್ದೇವೆ. 2027ರ ಒಳಗಾಗಿ ಎತ್ತಿನ ಹೊಳೆ ನೀರನ್ನು ತುಮಕೂರು ಮಾರ್ಗವಾಗಿ ಹರಿಸಲು ತೀರ್ಮಾನಿದ್ದೇವೆ ಎಂದ ಅವರು, ಕುಡಿಯುವ ನೀರು ಪೂರೈಸಿದ ನಂತರ ಕೆರೆ ತುಂಬಿಸಲಾಗುವುದು ಎಂದು ಭರವಸೆ ನೀಡಿದರು.
ಬಡವರಿ ಏಳಿಗೆಗಾಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಬೇಕು: ರಾಜಣ್ಣಸಿಎಂ ಸಿದ್ದರಾಮಯ್ಯ ಬಡವರ ಬಗ್ಗೆ ಅಪಾರ ಕಾಳಜಿಯುಳ್ಳವರು. ಬಡವರ ಸೇವೆ ಮಾಡಲು ರಾಜಕೀಯ ಅಧಿಕಾರ ಮುಖ್ಯವಾಗಿದ್ದು, ಹೀಗಾಗಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಾಟಾಗಿದ್ದ ತಮ್ಮ ಅಮೃತ ಮಹೋತ್ಸವ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ನಾನು ರಾಜಕೀಯದಿಂದ ದೂರ ಉಳಿಯುವ ಮನಸ್ಸು ಮಾಡಿದ್ದೇನೆ. ಆದರೆ ಬಡವರ ಏಳಿಗೆಗಾಗಿ ಸದಾ ಶ್ರಮಿಸುತ್ತೇನೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ಇರಬೇಕು. ಅಧಿಕಾರ ಇದ್ದಾಗ ಮಾತ್ರವೇ ಬಡವರಿಗೆ ಅನುಕೂಲ ಮಾಡಲು ಸಾಧ್ಯ. ಬಡವರ ಸೇವೆಗಾಗಿ ಮತ್ತು ಅವರ ಏಳಿಗೆಗಾಗಿ ನೀವು ಅಧಿಕಾರದಲ್ಲಿ ಮುಂದುವರೆಯಬೇಕು ಎಂದು ಮನವಿ ಮಾಡಿದರು.ಮಧುಗಿರಿ ಕ್ಷೇತ್ರ ಮಿಡಿಗೇಶಿಯಲ್ಲಿ ಈ ಹಿಂದೆ ನಡೆದ ಸಮಾರಂಭದಲ್ಲಿ ಮಕ್ಕಳಿಗೆ ಶೂ ಭಾಗ್ಯಕ್ಕಾಗಿ ಮನವಿ ಮಾಡಿದ್ದೆ. ಅದನ್ನು ಜಾರಿಗೆ ತಂದು ಬಡ ಮಕ್ಕಳಿಗ ಅನುಕೂಲ ಕಲ್ಪಿಸಿದರು. ಅನ್ನಭಾಗ್ಯದಂತಹ ಕ್ರಾಂತಿಕಾರಕ ಯೋಜನೆ ರೂಪಿಸಿದರು. ಈ ಯೋಜನೆ ಯಾವುದೇ ಒಂದು ಸಮುದಾಯಕ್ಕೆ ಮತ್ತು ವರ್ಗಕ್ಕೆ ಸೀಮಿತವಲ್ಲ. ಎಲ್ಲ ಬಡವರಿಗೂ ಈ ಯೋಜನೆ ಅನುಕೂಲವಾಗಿದೆ. ಇಷ್ಟಾದರೂ ಟೀಕೆಗಳು ನಿಂತಿಲ್ಲ. ಅದಕ್ಕೆ ತಲೆಕೆಡಿಸಿಕೊಳ್ಳುವುದೂ ಇಲ್ಲ ಎಂದರು.ಮಧ್ಯಮ ಕುಟುಂಬದಿಂದ ಬಂದ ನಾನು ಬಾಲ್ಯದಿಂದಲೂ ಬಡವರ ಪರ ಹೋರಾಡುತ್ತಾ ಬಂದಿದ್ದೇನೆ. ಬಡವರಿಗೆ ದೌರ್ಜನ್ಯ ಆದರೆ ನಾನು ಸಹಿಸುವುದಿಲ್ಲ. 50 ವರ್ಷಗಳಿಂದಲೂ ಅನ್ಯಾಯದ ವಿರುದ್ಧ ಪ್ರತಿಭಟಿಸುತ್ತಲೇ ನಾನೀಗ ಸಚಿವನಾಗಿ ನಿಂತಿದ್ದೇನೆ ಎಂದು ತಮ್ಮ ಹೋರಾಟದ ದಿನಗಳನ್ನು ಸ್ಮರಿಸಿದರು.
ಪತ್ರಿಕೆಯವರು ಕೇಳಿದ್ದಕ್ಕೆ ತುಮಕೂರನ್ನು ಬೆಂ.ಉತ್ತರ ಮಾಡ್ತೀನಿ ಅಂದಿದ್ದೆ: ಪರಂತುಮಕೂರು ಹೆಸರನ್ನು ಬದಲಾಯಿಸುತ್ತೇನೆ ಎಂದು ನಾನು ಹೇಳಿಲ್ಲ. ಪತ್ರಿಕೆಯವರು ಕೇಳಿದ್ದರು. ಅದಕ್ಕೆ ಬೆಂಗಳೂರು ಉತ್ತರ ಮಾಡುತ್ತೇನೆ ಅಂತಷ್ಟೇ ಹೇಳಿದ್ದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸಚಿವ ರಾಜಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಹಿತಿ ಬರಗೂರು ರಾಮಚಂದ್ರ ಅವರು ನಮ್ಮ ಅಚ್ಚುಮೆಚ್ಚಿನ ಮೇಷ್ಟ್ರು. ತುಮಕೂರು ಇತಿಹಾಸ ಹಾಗೂ ಅಸ್ಮಿತೆ ಬಗ್ಗೆ ಅವರು ಮಾತನಾಡಿದರು. ಯಾವುದೇ ಕಾರಣಕ್ಕೂ ತುಮಕೂರು ಹೆಸರು ಬದಲಾಯಿಸುವುದಿಲ್ಲ. ಇದನ್ನು ಬರಗೂರು ಅವರಿಗೆ ತಿಳಿಸಲು ಬಯಸುತ್ತೇನೆ ಎಂದರು.