ಕನ್ನಡಪ್ರಭ ವಾರ್ತೆ ಮಂಡ್ಯ
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸಂತೆಕಸಲಗೆರೆಯ ಶ್ರೀಭೂಮಿಸಿದ್ದೇಶ್ವರಸ್ವಾಮಿ ದೇಗುಲದ ಬಳಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಿಜೆಪಿ ಮುಖಂಡ ಎಸ್.ಸಚ್ಚಿದಾನದಂದ ಆಯೋಜಿಸಿದ್ದ ಮಹಿಳೆಯರಿಗೆ ಬಾಗಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಆರ್ಥಿಕ ಸಂಪನ್ಮೂಲ ಖಾಲಿಯಾಗಿದೆ. ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಪ್ರಗತಿದಾಯಕ ಯೋಜನೆಗಳಿಗೆ ಸರ್ಕಾರದ ಬಳಿ ಹಣವಿಲ್ಲ. ಸರ್ಕಾರ ಕೊಡುವ ೨ ಸಾವಿರ ರು. ಗ್ಯಾರಂಟಿ ಹಣದಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಖಾರವಾಗಿ ಹೇಳಿದರು.ಕಾವೇರಿ ನೀರಿನ ಮೇಲಿನ ಹಕ್ಕನ್ನು ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನಮ್ಮ ಕಾವೇರಿ ಭಾಗದ ರೈತರಿಗೆ ಬೆಳೆ ಹಾಕದಂತೆ ಸೂಚಿಸಿ ನೆರೆ ರಾಜ್ಯದ ರೈತರ ಬೆಳೆಗಳಿಗೆ ನೀರುಣಿಸುತ್ತಿರುವ ಸರ್ಕಾರದ ನಿಲುವನ್ನು ನೋಡಿದರೆ ಕಣ್ಣೀರು ಬರುತ್ತದೆ. ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಮಹಿಳೆಯರ ಮಾನ ಉಳಿಸಿದರೆ ಸಾಕಾಗಿದೆ. ಸುಲಿಗೆ, ಭ್ರಷ್ಟಾಚಾರ ಹೆಚ್ಚಿರುವ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಗೆ ಗ್ರಹಣ ಹಿಡಿದಿರುವುದಾಗಿ ಟೀಕಿಸಿದರು.
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಣ ೩ ತಿಂಗಳಿಂದ ಬಂದಿಲ್ಲ, ಪಿಂಚಣಿ ಕೊಟ್ಟು ಐದು ತಿಂಗಳಾಗಿದೆ. ಇದು ಅಭಿವೃದ್ಧಿಯೇ. ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಜನರೆದುರು ಬೂಟಾಟಿಕೆ ಆಡುತ್ತಿದೆ. ಜಾಹೀರಾತುಗಳನ್ನು ಕೊಟ್ಟು ಪ್ರಚಾರ ಪಡೆಯುತ್ತಿದೆ. ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸದೆ ಕೇವಲ ಗ್ಯಾರಂಟಿಗಳನ್ನೇ ಜಪ ಮಾಡುತ್ತಾ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.
ಕಾರ್ಯಕ್ರಮದಲ್ಲಿ ಚಿತ್ರನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧಾ ಅವರಿಗೆ ಬಾಗಿನ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಹತ್ತು ಮಂದಿ ಮಹಿಳೆಯರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಬಾಗಿನ ಸಮರ್ಪಿಸಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಸಂತೆಕಸಲಗೆರೆ ಶ್ರೀ ಭೂಮಿಸಿದ್ದೇಶ್ವರ ದೇವಸ್ಥಾನದ ಬಳಿ ನಡೆದ ಮಹಿಳೆಯರಿಗೆ ಬಾಗಿನ ಸಮರ್ಪಣೆ ಮಾಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಮೋಸ ಹೋಗಬೇಡಿ. ಗೃಹಲಕ್ಷ್ಮಿ ಹಣ ನಿಂತು ಮೂರು ತಿಂಗಳಾಗಿದೆ. ಜನರ ತೆರಿಗೆ ಹಣದಿಂದಲೇ ಗ್ಯಾರಂಟಿಗಳನ್ನು ಕೊಟ್ಟು ಜನರನ್ನೇ ವಂಚಿಸುತ್ತಿದ್ದಾರೆ. ಸರ್ಕಾರದ ಬಳಿ ದೂರದಷ್ಟಿ ಯೋಜನೆಗಳಿಲ್ಲ, ಖಜಾನೆಯಲ್ಲಿ ಹಣವಿಲ್ಲ, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಗ್ಯಾರಂಟಿಗಳನ್ನು ನಿಗದಿತ ಸಮಯಕ್ಕೆ ಜನರಿಗೆ ತಲುಪಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಬಿಜೆಪಿ ಕಾರ್ಯಕರ್ತರೊಂದಿಗೆ ನಾಡು, ನುಡಿ, ನೆಲ, ಜಲಕ್ಕಾಗಿ ಹೋರಾಟ ಮಾಡಿದ್ದೇವೆ. ನಮ್ಮ ಹೋರಾಟದ ಫಲವಾಗಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕಾಯಿತು. ದಲಿತರಿಗೆ ಮೀಸಲಾಗಿದ್ದ ೧೮೭ ಕೋಟಿಗಳನ್ನು ನಾಗೇಂದ್ರ ಮತ್ತು ಅವರ ತಂಡ ಲೂಟಿ ಮಾಡಿದೆ. ಇದೇ ಆರೋಪದಲ್ಲಿ ಅವರು ಜೈಲು ಸೇರಿದ್ದನ್ನು ಯಾರೂ ಮರೆತಿಲ್ಲ. ಇಂತಹ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಜನರು ಬೆಂಬಲಿಸಬಾರದು ಎಂದರು.