ಸಂತೆಕಸಲಗೆರೆಯಲ್ಲಿ ವಿಜೃಂಭಣೆಯ ಅಟ್ಟುಣ್ಣುವ ಜಾತ್ರೆ

KannadaprabhaNewsNetwork |  
Published : Apr 12, 2024, 01:03 AM IST
೧೧ಕೆಎಂಎನ್‌ಡಿ-೫ ಮತ್ತು ೬ಮಂಡ್ಯ ತಾಲೂಕಿನ ಸಂತೆಕಸಲಗೆರೆಯ ಶ್ರೀ ಭೂಮಿ ಸಿದ್ದೇಶ್ವರ ಸ್ವಾಮಿ ಜಾತ್ರೆ ಅಂಗವಾಗಿ ಸಹಸ್ರಾರು ಜನರು ದೇವಾಲಯದ ಆವರಣದಲ್ಲಿ ಸೇರಿರುವುದು. ಮಹಿಳೆಯರು ಅಡುಗೆ ತಯಾರಿಯಲ್ಲಿ ತೊಡಗಿರುವ ದೃಶ್ಯ. | Kannada Prabha

ಸಾರಾಂಶ

ಹುತಾತ್ಮ ವೀರ ಮಕ್ಕಳ ಆತ್ಮಕ್ಕೆ ಶಾಂತಿ ಕೋರುವ ಧ್ಯೋತಕವಾಗಿ ನಡೆಯುವ ಶ್ರೀ ಭೂಮಿ ಸಿದ್ದೇಶ್ವರ ಸ್ವಾಮಿ ಅಟ್ಟುಣ್ಣುವ ಜಾತ್ರೆ ಗುರುವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಂತೆಕಸಲಗೆರೆ, ಹನಿಯಂಬಾಡಿ, ಕಾರಸವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಮಂಗಲ, ಕೊತ್ತತ್ತಿ, ಬೇವಿನಹಳ್ಳಿ, ಮೊತ್ತಹಳ್ಳಿ, ಹುಲ್ಕೆರೆ ಸೇರಿದಂತೆ ಸುತ್ತಮುತ್ತಲ ೩೦ ಗ್ರಾಮದ ಜನರು ಈ ಜಾತ್ರೆಯಲ್ಲಿ ಭಾಗವಹಿಸಿದ್ದರು.

ಮಂಡ್ಯ: ಹುತಾತ್ಮ ವೀರ ಮಕ್ಕಳ ಆತ್ಮಕ್ಕೆ ಶಾಂತಿ ಕೋರುವ ಧ್ಯೋತಕವಾಗಿ ನಡೆಯುವ ಶ್ರೀ ಭೂಮಿ ಸಿದ್ದೇಶ್ವರ ಸ್ವಾಮಿ ಅಟ್ಟುಣ್ಣುವ ಜಾತ್ರೆ ಗುರುವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಂತೆಕಸಲಗೆರೆ, ಹನಿಯಂಬಾಡಿ, ಕಾರಸವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಮಂಗಲ, ಕೊತ್ತತ್ತಿ, ಬೇವಿನಹಳ್ಳಿ, ಮೊತ್ತಹಳ್ಳಿ, ಹುಲ್ಕೆರೆ ಸೇರಿದಂತೆ ಸುತ್ತಮುತ್ತಲ ೩೦ ಗ್ರಾಮದ ಜನರು ಈ ಜಾತ್ರೆಯಲ್ಲಿ ಭಾಗವಹಿಸಿದ್ದರು. ಯುಗಾದಿ ಹಬ್ಬದ ನಂತರ ನಡೆಯುವ ಈ ಜಾತ್ರೆಯಲ್ಲಿ ಸುತ್ತಮುತ್ತಲಿನ 30 ಸಾವಿರಕ್ಕೂ ಹೆಚ್ಚು ಜನರು ಬಂದು ಸೇರಿದ್ದರು. ಬುಧವಾರ ಸಂಜೆಯೇ ಬಾಯಿ ಬೀಗ ಆಚರಣೆ ನಡೆಯಿತು. ಗುರುವಾರ ಬೆಳಗ್ಗೆಯಿಂದ ದೇವಾಲಯ ಆವರಣದಲ್ಲಿ ಸಾವಿರಾರು ಜನರು ದೇವರ ದರ್ಶನ ಪದರು. ಬಳಿಕ ಭಕ್ತರು ಪಾನಕ, ಮಜ್ಜಿಗೆ ಹಾಗೂ ರಸಾಯನ ವಿತರಣೆ ಮಾಡಿ ಸಂಭ್ರಮಿಸಿ ಜಾತ್ರೆ ಆಚರಿಸಿದರು.

ಜಾತ್ರೆಗೆ ಬಂದ ಮಹಿಳೆಯರು ಅಡುಗೆ ಸಾಮಗ್ರಿಗಳನ್ನು ಬುಟ್ಟಿಯಲ್ಲಿ ತಂದು ದೇವರ ಮುಂದಿಟ್ಟು ಪೂಜೆ ಸಲ್ಲಿಸಿದರು. ನಂತರ ದೇವಾಲಯದ ಆವರಣಕ್ಕೆ ತೆರಳಿ ಅಡುಗೆ ಮಾಡಿದರು. ಸಸ್ಯಹಾರದ ಜೊತೆಗೆ ಮಾಂಸಹಾರವನ್ನೂ ಮಾಡಲಾಗಿತ್ತು, ಮಾಂಸಹಾರವನ್ನು ದೇವರಿಗೆ ಅರ್ಪಿಸದೆ ದೇವಾಲಯದ ಆವರಣದಲ್ಲಿಯೇ ಪೂಜೆ ಮಾಡಿ ಸಂಪ್ರದಾಯ ಆಚರಣೆ ಮಾಡಿದರು. ಜಾತ್ರೆಗೆ ಬಂದ ಸಹಸ್ರಾರು ಸಂಖ್ಯೆಯ ಜನರು ಮಾಂಸಾಹಾರ ಊಟ ಮಾಡಿದರು. ಊಟ ಮಾಡಿದ ನಂತರ ಎಲೆಗಳನ್ನು ತೆರವುಗೊಳಿಸದೆ ಉಂಡ ಸ್ಥಳದಲ್ಲಿಯೇ ಬಿಡುವುದು ಆಚರಣೆಯಾಗಿದೆ. ಜಾತ್ರೆ ಮುಗಿದ ಬಳಿಕ ರಾತ್ರಿ ವೇಳೆ ದೇವರ ಸನ್ನಿಧಿಯ ಅಂಗಳದಲ್ಲಿ ಯಾರೊಬ್ಬರೂ ಸುಳಿಯುವುದಿಲ್ಲ. ಬೆಳಗ್ಗೆ ವೇಳೆಗೆ ಜನರು ಉಂಡ ಎಲೆಗಳು ಒಂದೆಡೆ ಸೇರಿರುತ್ತವೆ ಎಂಬ ಪ್ರತೀತಿ ಇದೆ. ಪ್ರತಿ ಗುರುವಾರ ಮತ್ತು ಭಾನುವಾರ ದೇವರಿಗೆ ವಿಶೇಷ ಪೂಜೆ ಇರುತ್ತದೆ. ಮಕ್ಕಳಿಲ್ಲದವರು, ಮದುವೆಯಾಗದವರು ದೇವರಿಗೆ ಸೇವೆ ಮಾಡುವ ಮೂಲಕ ದೇವರಿಗೆ ಹರಕೆ ತೀರಿಸುವರು. ಜಾತ್ರೆ ಸಂದರ್ಭದಲ್ಲಿ ಬಾಯಿಬೀಗ ಮತ್ತಿತರ ಧಾರ್ಮಿಕ ಕಾರ‌್ಯಕ್ರಮಗಳು ನಡೆಯುವುವು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ