ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಡಿಎಆರ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ವಿಶೇಷ ಕಾರ್ಯಪಡೆ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಮಗು ಕಾಣೆಯಾದ ತಕ್ಷಣ ಎಫ್ ಐ ಆರ್ ದಾಖಲಿಸಿಕೊಂಡು ಕಾರ್ಯೋನ್ಮುಖರಾಗಬೇಕು. ವಿಳಂಬ ಆದರೆ ಪತ್ತೆ ಹಚ್ಚುವುದು ಕಷ್ಟ. ಮಗು ಕಾಣೆಯಾದ ತಕ್ಷಣವೇ ಆದ್ಯತೆಯ ಮೇರೆಗೆ ತನಿಖೆ ನಡೆಸಲು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ಪಡೆ ರಚಿಸಬೇಕು ಎಂದು ಸೂಚಿಸಿದರು.
ಕಾಣೆಯಾದ ಮಗುವಿನ ಭಾವಚಿತ್ರ ಮತ್ತು ವಿವರಗಳನ್ನು ರಾಜ್ಯ ಹಾಗೂ ದೇಶದ ಎಲ್ಲಾ ಪೊಲೀಸ್ ಠಾಣೆಗಳಿಗೆ ತಕ್ಷಣವೇ ರವಾನಿಸಬೇಕು. ಮಕ್ಕಳು ಕಾಣೆಯಾದ ಪ್ರಕರಣಗಳಲ್ಲಿ ಮೊದಲ ೨೪ ಗಂಟೆಗಳು ಅತ್ಯಂತ ನಿರ್ಣಾಯಕವಾಗಿದ್ದು, ಅಧಿಕಾರಿಗಳು ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೆ ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.ಜಿಲ್ಲೆಯಲ್ಲಿ 1912 ಠಾಣೆಗಳಿದ್ದು ಪ್ರತಿ ಠಾಣೆಯ ಪೇದೆಗಳು ಹಾಗೂ ಅಧಿಕಾರಿಗಳಿಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಸೂಚಿಸಲಾಗಿದ್ದು, ಪೇದೆಗಳು ಸೇರಿದಂತೆ ಎಲ್ಲ ಪೊಲೀಸ್ ಅಧಿಕಾರಿಗಳು ಈ ಕೆಲಸವನ್ನು ದಕ್ಷತೆಯಿಂದ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕಾಣೆ,ಪತ್ತೆಯಾದ ಮಕ್ಕಳು:
ಪ್ರಸ್ತುತ 11 ಮಕ್ಕಳು ಪತ್ತೆಯಾಗಬೇಕಿದ್ದು, ಕಾರ್ಯಪಡೆಯು ಶೋಧ ಕಾರ್ಯವನ್ನು ಚುರುಕುಗೊಳಿಸಬೇಕು ಮತ್ತು ಬಾಲ್ಯವಿವಾಹ ಹಾಗೂ ಮಕ್ಕಳ ಕಳ್ಳಸಾಗಣೆಯಂತಹ ಅಪರಾಧಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್. ಸಂತೋಷ್ ಮಾತನಾಡಿ, ಕಾಣೆಯಾದ ಮಕ್ಕಳ ಪ್ರಕರಣದಲ್ಲಿ ತಕ್ಷಣ ಎಫ್ ಐ ಆರ್ ಮಾಡಿಕೊಳ್ಳಬೇಕು. ಈ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಪ್ರಾಥಮಿಕ ವಿಚಾರಣೆ ಅಗತ್ಯವಿಲ್ಲ. ಆದ್ದರಿಂದ ತಕ್ಷಣ ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್, ಡಿಡಿಪಿಐ ಮಂಜುನಾಥ್ ಎಸ್ ಆರ್, ಡಿವೈಎಸ್ ಪಿ ಸಂಜೀವ್ ಕುಮಾರ್, ಪೊಲೀಸ್ ಹಾಗೂ ಇತರೆ ಅಧಿಕಾರಿಗಳು, ನೌಕರರು ಹಾಜರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ ಸ್ವಾಗತಿಸಿದರು.
ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ವಿಶೇಷ ಕಾರ್ಯಪಡೆ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಮಾತನಾಡಿದರು.