ಯುವಜನರಿಗೆ ದಾರ್ಶನಿಕರ ಆದರ್ಶ ಪರಿಚಯ ಜಯಂತಿಗಳ ಉದ್ದೇಶ

KannadaprabhaNewsNetwork |  
Published : Dec 02, 2023, 12:45 AM IST
ಚಿತ್ರ : ಡಿ೩೦-ಬಿಡಿವಿಟಿ೧(ಎ)ಭದ್ರಾವತಿ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕನಕ ಜಯಂತಿ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. | Kannada Prabha

ಸಾರಾಂಶ

ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಮತ್ತು ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ಕನಕದಾಸ ಕುರಿತು ಉಪನ್ಯಾಸ ನೀಡಿದರು. ನಗರಸಭೆ ಸದಸ್ಯರಾದ ಕಾಂತರಾಜು, ಮಂಜುಳಾ ಸುಬ್ಬಣ್ಣ, ಶಶಿಕಲಾ ನಾರಾಯಣಪ್ಪ, ಅನಿತಾ ಮಲ್ಲೇಶ್, ಆರ್. ಶ್ರೇಯಸ್, ಚನ್ನಪ್ಪ, ಮಣಿ ಎಎನ್‌ಎಸ್, ಜಾರ್ಜ್, ಬಸವರಾಜ ಬಿ. ಆನೇಕೊಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಿವಿಧ ಸಮುದಾಯಗಳ ಪ್ರಮುಖರಾದ ಕೆ. ಚಂದ್ರಶೇಖರ್, ಸೆಲ್ವರಾಜ್, ಜುಂಜ್ಯಾನಾಯ್ಕ, ಸಿ.ಜಯಪ್ಪ, ವೈ.ರೇಣುಕಮ್ಮ, ಗಿರೀಶ್, ಎಚ್.ರವಿಕುಮಾರ್, ಅಭಿಲಾಷ್, ಕುಮಾರ್, ಶ್ರೀನಿವಾಸ್, ಬಿ.ಕೆ. ಜಗನ್ನಾಥ್, ಬಿ.ಕೆ. ಶಿವಕುಮಾರ್, ಸುಕನ್ಯ, ಶೋಭ ರವಿಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ, ಭದ್ರಾವತಿ

ಯುವಸಮುದಾಯಕ್ಕೆ ದಾರ್ಶನಿಕರ ಆದರ್ಶಗಳನ್ನು ಪರಿಚಯಿಸುವ ಜೊತೆಗೆ ಮಾರ್ಗದರ್ಶನ ನೀಡುವುದು ಜಯಂತಿ ಆಚರಣೆಗಳ ಉದ್ದೇಶವಾಗಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.

ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕನಕ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನೀಯರ ಜಯಂತಿ ಕಾರ್ಯಕ್ರಮಗಳಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಜಯಂತಿ ಆಚರಣೆಗಳ ಆಶಯ ಅರ್ಥ ಮಾಡಿಕೊಳ್ಳುವ ಜೊತೆಗೆ ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್ ಮಾತನಾಡಿ, ಕುಲ ಕುಲ ಕುಲವೆಂದು ಹೊಡೆದಾಡದಿರಿ ಎನ್ನುವ ಸಂದೇಶದ ಮೂಲಕ ಇಡೀ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಶ್ರೇಷ್ಠರು ಕನಕದಾಸರು. ದಾಸವಾಣಿಯ ಮೂಲಕ ಸಮಾನತೆ ಬೋಧಿಸಿದ ಇವರು ವಿಶ್ವಮಾನ್ಯರು ಎಂದರು.

ತಹಸೀಲ್ದಾರ್ ಗ್ರೇಡ್-2 ರಂಗಮ್ಮ ಮತ್ತು ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ಕನಕದಾಸ ಕುರಿತು ಉಪನ್ಯಾಸ ನೀಡಿದರು. ನಗರಸಭೆ ಸದಸ್ಯರಾದ ಕಾಂತರಾಜು, ಮಂಜುಳಾ ಸುಬ್ಬಣ್ಣ, ಶಶಿಕಲಾ ನಾರಾಯಣಪ್ಪ, ಅನಿತಾ ಮಲ್ಲೇಶ್, ಆರ್. ಶ್ರೇಯಸ್, ಚನ್ನಪ್ಪ, ಮಣಿ ಎಎನ್‌ಎಸ್, ಜಾರ್ಜ್, ಬಸವರಾಜ ಬಿ. ಆನೇಕೊಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ವಿವಿಧ ಸಮುದಾಯಗಳ ಪ್ರಮುಖರಾದ ಕೆ. ಚಂದ್ರಶೇಖರ್, ಸೆಲ್ವರಾಜ್, ಜುಂಜ್ಯಾನಾಯ್ಕ, ಸಿ.ಜಯಪ್ಪ, ವೈ.ರೇಣುಕಮ್ಮ, ಗಿರೀಶ್, ಎಚ್.ರವಿಕುಮಾರ್, ಅಭಿಲಾಷ್, ಕುಮಾರ್, ಶ್ರೀನಿವಾಸ್, ಬಿ.ಕೆ. ಜಗನ್ನಾಥ್, ಬಿ.ಕೆ. ಶಿವಕುಮಾರ್, ಸುಕನ್ಯ, ಶೋಭ ರವಿಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ನಗರಸಭೆ ಕಂದಾಯಾಧಿಕಾರಿ ರಾಜ್‌ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಥ್ಲೆಟಿಕ್ ವಿಕಲಚೇತನ ಕ್ರೀಡಾಪಟು ಜ್ಯೋತಿ ಸೇರಿದಂತೆ ಸಾಧಕರು, ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಸ್ವಾಗತಿಸಿದರು. ಸುಮತಿ ಕಾರಂತ್ ತಂಡ ನಾಡಗೀತೆ ಹಾಡಿದರೆ, ಉಪ ತಹಸೀಲ್ದಾರ್ ಮಂಜಾನಾಯ್ಕ ನಿರೂಪಿಸಿದರು.

- - - -30ಬಿಡಿವಿಟಿ1(ಎ):

ಭದ್ರಾವತಿ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕನಕ ಜಯಂತಿ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ