ಒಳಮೀಸಲಾತಿ ಕಾನೂನಾಗಲು ಸುಗ್ರೀವಾಜ್ಞೆ ಅಗತ್ಯ

KannadaprabhaNewsNetwork |  
Published : Sep 29, 2025, 01:03 AM IST
28 HRR. 02 & 02Aಹರಿಹರ ತಾಲೂಕಿನ ಸಾರಥಿ ಗ್ರಾಮದಲ್ಲಿ ಸಾರಥಿ ಗ್ರಾಮಸ್ಥರ ಹಿತರಕ್ಷಣ ಸಮಿತಿ ಆಯೋಜಿಸಿದ್ದ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮತ್ತು ಒಳಮೀಸಲಾತಿ ವಿಜಯೋತ್ಸವ ಸಮಾರಂಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಶಾಸಕ ಬಿ.ಪಿ. ಹರೀಶ್ ಹಾಗೂ ಇತರರು ಭಾಗವಹಿಸಿದ್ದರು. | Kannada Prabha

ಸಾರಾಂಶ

ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಅಗತ್ಯವಿದೆ. ಒಳಮೀಸಲಾತಿ ಆದೇಶ ಕೇವಲ ಸರ್ಕಾರಿ ಆದೇಶ (ಜಿ.ಒ. ಮಾತ್ರ) ಆಗಿದೆ. ಅದು ಕಾನೂನು ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಅಭಿಮತ ವ್ಯಕ್ತಪಡಿಸಿದ್ದಾರೆ.

- ಸಾರಥಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ಉದ್ಘಾಟಿಸಿ ಮಾಜಿ ಸಚಿವ ಆಂಜನೇಯ

- - -

ಕನ್ನಡಪ್ರಭ ವಾರ್ತೆ ಹರಿಹರ

ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಅಗತ್ಯವಿದೆ. ಒಳಮೀಸಲಾತಿ ಆದೇಶ ಕೇವಲ ಸರ್ಕಾರಿ ಆದೇಶ (ಜಿ.ಒ. ಮಾತ್ರ) ಆಗಿದೆ. ಅದು ಕಾನೂನು ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಅಭಿಮತ ವ್ಯಕ್ತಪಡಿಸಿದರು.

ತಾಲೂಕಿನ ಸಾರಥಿ ಗ್ರಾಮದಲ್ಲಿ ಭಾನುವಾರ ಸಾರಥಿ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮತ್ತು ಒಳಮೀಸಲಾತಿ ವಿಜಯೋತ್ಸವ ಸಮಾರಂಭದಲ್ಲಿ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಬಳಿ ಮಾತನಾಡಿದ್ದು, ಮುಂಬರುವ ಅಧಿವೇಶನಗಳಲ್ಲಿ ಆದೇಶ ಅಂಗೀಕರಿಸುವ ಭರವಸೆ ನೀಡಿದ್ದಾರೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಿ.ಪಿ ಹರೀಶ್ ಮಾತನಾಡಿ, ಶಾಸಕನಾಗಿದ್ದಾಗ ಕರ್ನಾಟಕದ ಅಂಬೇಡ್ಕರ್ ಎಂದೇ ಖ್ಯಾತಿ ಪಡೆದಿರುವ ಪ್ರೊ. ಬಿ.ಕೃಷ್ಣಪ್ಪ ಸ್ಮಾರಕ ಭವನಕ್ಕೆ ಆಗಿನ ಸಮಾಜ ಕಲ್ಯಾಣ ಮಂತ್ರಿ ನಾರಾಯಣ ಸ್ವಾಮಿ ಬಳಿ ಚರ್ಚಿಸಿ, ₹1 ಕೋಟಿ ಅನುದಾನ ಕೊಡಿಸಿದೆ. ಇಂದು ಅಲ್ಲಿ ಹಲವಾರು ಕಾರ್ಯಕ್ರಮ ನಡೆಯುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಎಸ್.ರಾಮಪ್ಪ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಎಚ್.ಸಿ.ಗುಡ್ಡಪ್ಪ, ಚೇತನ್ ಅಹಿಂಸಾ, ನಂದಿಗಾವಿ ಶ್ರೀನಿವಾಸ್, ಚಂದ್ರಶೇಖರ್ ಪೂಜಾರ್, ಇಂದಿರಾ ಕೃಷ್ಣಪ್ಪ, ಹನಗವಾಡಿ ರುದ್ರಪ್ಪ ಮುಂತಾದವರು ಡಾ. ಅಂಬೇಡ್ಕರ್ ಅವರ ಬಗ್ಗೆ ಹಾಗೂ ಇತ್ತೀಚಿನ ದಿನಮಾನಗಳಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮಾತನಾಡಿದರು.

ಗ್ರಾಪಂ ಅಧ್ಯಕ್ಷ ಗೋಣಿಬಸಪ್ಪ ಹಳ್ಳದರ, ಸಮಿತಿಯ ಅಧ್ಯಕ್ಷ ಪಿ.ಹನುಮಂತಪ್ಪ, ಗೌರವಾಧ್ಯಕ್ಷ ಕಂಚಿಕೆರೆ ಹನುಮಂತಪ್ಪ, ಪ್ರೊ. ಡಿ.ಕೃಷ್ಣಪ್ಪ ಟ್ರಸ್ಟ್‌ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ, ನಿವೃತ್ತ ಕೆಎಎಸ್ ಅಧಿಕಾರಿ ಹನಗವಾಡಿ ರುದ್ರಪ್ಪ, ಸಾಮಾಜಿಕ ಹೋರಾಟಗಾರ, ಚಿತ್ರನಟ ಚೇತನ್ ಅಹಿಂಸ, ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್, ಪಾಲಿಕೆಯ ಮಾಜಿ ಸದಸ್ಯ ಎಸ್ ನಿಂಗಪ್ಪ ದೋಣಿ, ಸಮಿತಿ ಪದಾಧಿಕಾರಿಗಳು, ಗ್ರಾಪಂ ಸದಸ್ಯರು, ದಲಿತ ಮುಖಂಡರು, ಅಭಿಮಾನಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.

- - -

-28HRR02 & 02A:

ಸಾರಥಿ ಗ್ರಾಮದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಅನಾವರಣಗೊಳಿಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ