ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ: ಮಾಡಾಳು ವಿರೂಪಾಕ್ಷಪ್ಪ

KannadaprabhaNewsNetwork |  
Published : Jan 21, 2025, 12:31 AM IST
ಚನ್ನಗಿರಿ ಮಂಡಲದ ನೂತನ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಮಲಹಾಳ್ ಕುಮಾರಸ್ವಾಮಿ ಇವರಿಗೆ ಬಿಜೆಪಿ ಪಕ್ಷದ ಭಾವುಟವನ್ನು ನೀಡುವುದರ ಮೂಲಕ ಅಧಿಕಾರವನ್ನು ಹಸ್ತಾಂತರಿಸಲಾಯಿತು, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿದಂತೆ ಮೊದಲಾದವರು ಇದ್ದಾರೆ | Kannada Prabha

ಸಾರಾಂಶ

ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ಸಾಮಾನ್ಯ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಉನ್ನತ ಸ್ಥಾನ ಮಾನಗಳನ್ನು ಹೊಂದಬಲ್ಲರು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಇಲ್ಲಿ ಸಾಮಾನ್ಯ ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಉನ್ನತ ಸ್ಥಾನ ಮಾನಗಳನ್ನು ಹೊಂದಬಲ್ಲರು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.

ಸೋಮವಾರ ಸಂಜೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಚನ್ನಗಿರಿ ಮಂಡಲದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಮುಂದೆ ಕಾರ್ಯಕರ್ತರ ಚುನಾವಣೆಗಳು ಬರಲಿದ್ದು, ತಾಲೂಕಿನ ಎಲ್ಲ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷವೇ ಅಧಿಕಾರ ಹಿಡಿಯಲಿದೆ. ಜೆ.ಎಚ್.ಪಟೇಲ್ ಮುಖ್ಯಮಂತ್ರಿ ಆದಾಗಿನಿಂದಲೂ ಚನ್ನಗಿರಿ ತಾಲೂಕು ಪಂಚಾಯಿತಿ ನಮ್ಮ ವಶದಲ್ಲಿಯೇ ಇದೆ. ಮುಂದೆಯೂ ಬಿಜೆಪಿ ವಶದಲ್ಲೇ ಇರಲಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲ ಬೂತ್‌ಗಳಿಗೆ ತೆರಳಿ, ಬಿಜೆಪಿ ಬೇರುಮಟ್ಟದಿಂದ ಸಂಘಟನೆ ಮಾಡಲಾಗುವುದು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನಾಗಪ್ಪ ಮಾತನಾಡಿ, ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸದೃಢವಾಗಿದೆ. ಈ ಕ್ಷೇತ್ರದಲ್ಲಿ 2 ಬಾರಿ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಮಾಡಿರುವ ಅಭಿವೃದ್ಧಿ ಕೆಲಸಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಜ್ವಲಿಸುತ್ತಿದೆ. ನೂತನ ಅಧ್ಯಕ್ಷ ಮಲಹಾಳ್ ಕುಮಾರಸ್ವಾಮಿ ಅವರ ಮೇಲೆ ಬಹಳಷ್ಟು ಜವಾಬ್ದಾರಿಗಳಿವೆ. ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲ್ಲಿಸಬೇಕಿದೆ ಎಂದರು.

ನೂತನ ಅಧ್ಯಕ್ಷ ಮಲಹಾಳ್ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಕ್ಷೇತ್ರದ ಮಾಜಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ ಮತ್ತು ಮಾಡಾಳು ಮಲ್ಲಿಕಾರ್ಜುನ್ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡಲಿದ್ದೇನೆ. ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು, ಚುನಾವಣೆಯಲ್ಲಿ ಬಿಜೆಪಿ ಗೆಲುವು ನನ್ನ ಗುರಿ ಎಂದರು.

ಚನ್ನಗಿರಿ ಮಂಡಲದ ನೂತನ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಮಲಹಾಳ್ ಕುಮಾರ್ ಅವರಿಗೆ ಬಿಜೆಪಿ ಬಾವುಟವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನಾಗಪ್ಪ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಲಾಯಿತು.

ಜಿಲ್ಲಾ ಉಪಾಧ್ಯಕ್ಷ ಕಡ್ಲೆಬಾಳು ಧನಂಜಯ, ಜಯಪ್ಪ, ಚುನಾವಣೆ ಉಸ್ತುವಾರಿಗಳಾದ ದತ್ತಾತ್ರೇಯ, ಮಂಜುನಾಥ್, ಶ್ರೀನಿವಾಸ್, ತಾಲೂಕು ಬಿಜೆಪಿ ಮುಖಂಡರಾದ ಮಾಡಾಳು ಮಲ್ಲಿಕಾರ್ಜುನ್, ಎಂ.ಬಿ. ರಾಜಪ್ಪ, ಪಿ.ಲೋಹಿತ್ ಕುಮಾರ್, ಸಿ.ಎಂ. ಗುರುಸಿದ್ದಯ್ಯ, ಕೆಂಚಪ್ಪ, ಸಂತೆಬೆನ್ನೂರು ಬಸವರಾಜ್, ತಾಪಂ ಮಾಜಿ ಅಧ್ಯಕ್ಷ ಎ.ಎಸ್. ಬಸವರಾಜಪ್ಪ, ಕೆ.ಪಿ.ಎಂ. ಲತಾ, ಪಿ.ಬಿ. ನಾಯಕ, ಪಕ್ಷದ ಕಾರ್ಯಕರ್ತರು ಹಾಜರಿದ್ದರು.

- - - -20ಕೆಸಿಎನ್‌ಜಿ1:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ