ವಿದ್ಯಾರ್ಥಿಗಳ ಸಮಸ್ಯೆ ಪರಿಹಾರಕ್ಕೆ ಸಂಘಟಿತ ಹೋರಾಟ ಅಗತ್ಯ: ಸಿ.ಎಚ್. ನಾರಿನಾಳ್

KannadaprabhaNewsNetwork |  
Published : Sep 23, 2026, 02:30 AM IST
ಗಂಗಾವತಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಗಂಗಾವತಿ ತಾಲೂಕು ಸಮಿತಿಯ 21ನೇ ತಾಲೂಕು ಸಮ್ಮೇಳನ ಜರುಗಿತು. | Kannada Prabha

ಸಾರಾಂಶ

ಗಂಗಾವತಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಗಂಗಾವತಿ ತಾಲೂಕು ಸಮಿತಿಯ 21ನೇ ತಾಲೂಕು ಸಮ್ಮೇಳನ ಜರುಗಿತು.

ಗಂಗಾವತಿ: ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಗಂಗಾವತಿ ತಾಲೂಕು ಸಮಿತಿಯ 21ನೇ ತಾಲೂಕು ಸಮ್ಮೇಳನ ಜರುಗಿತು.

ಸಮ್ಮೇಳನವನ್ನು ಸಿ.ಎಚ್. ನಾರಿನಾಳ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟ ಅಗತ್ಯವಾಗಿದೆ. ಶಿಕ್ಷಣದ ವ್ಯಾಪಾರೀಕರಣ, ಶುಲ್ಕ ಮತ್ತು ಡೊನೇಷನ್ ಹಾವಳಿಯ ವಿರುದ್ಧ ವಿದ್ಯಾರ್ಥಿಗಳು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಸಿಐಟಿಯು ರಾಜ್ಯ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ಶಿಕ್ಷಣದ ಮೇಲಿನ ಸರ್ಕಾರದ ನಿರ್ಲಕ್ಷ್ಯದಿಂದ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಶಾಲೆ–ಕಾಲೇಜುಗಳನ್ನು ಬಲಪಡಿಸಿ, ಎಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಹೋರಾಟವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಹೇಳಿದರು. ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ನಾಗರಾಜ್ ಯು. ಅಧ್ಯಕ್ಷತೆ ವಹಿಸಿದ್ದರು.

ಕೃಷಿ ಕಾರ್ಮಿಕರ ಸಂಘಟನೆ ಮುಖಂಡ ಹುಸೇನಪ್ಪ ಕೆ., ಬಸವರಾಜ್ ಬೆಣಕಲ್ ಹಾಗೂ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.

ಸಮ್ಮೇಳನದಲ್ಲಿ ತಾಲೂಕಿನ ಶೈಕ್ಷಣಿಕ ಪರಿಸ್ಥಿತಿ ಹಾಗೂ ಕಳೆದ ಅವಧಿಯ ಸಂಘಟನಾ ಚಟುವಟಿಕೆ ಕುರಿತು ಪ್ರಾಸ್ತಾವಿಕ ನುಡಿಯನ್ನು ಬಾಲಾಜಿ ಚಳ್ಳಾರಿ ಮಂಡಿಸಿದರು. ಸಮ್ಮೇಳನದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು, ಸರ್ಕಾರಿ ಹಾಸ್ಟೆಲ್‌ಗಳ ಬಲವರ್ಧನೆ, ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು, ಶುಲ್ಕ ಮತ್ತು ಡೊನೇಷನ್ ಹಾವಳಿಗೆ ಕಡಿವಾಣ ಹಾಕುವುದು, ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆ ಪರಿಹರಿಸುವುದು ಹಾಗೂ 371(ಜೆ) ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ತಾಲೂಕಿನ ಪ್ರಮುಖ ಶೈಕ್ಷಣಿಕ ಬೇಡಿಕೆಗಳ ಕುರಿತು ಸಮ್ಮೇಳನದಲ್ಲಿ ಚರ್ಚಿಸಿ, ಮುಂದಿನ ಅವಧಿಯಲ್ಲಿ ಹೋರಾಟಗಳನ್ನು ರೂಪಿಸಲು ನಿರ್ಧರಿಸಲಾಯಿತು. ಸ್ವಾಗತ ಮತ್ತು ನಿರ್ವಹಣೆಯನ್ನು ಶರೀಫ್ ಎಂ. ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ ಬೀದಿಪಾಲು ಮಾಡುವ ಆದೇಶ ಕೈಬಿಡಲು ಒತ್ತಾಯ
ಬಡವರ ಒಕ್ಕಲೆಬ್ಬಿಸಲು ಹುನ್ನಾರ: ತಿಮ್ಮಪ್ಪ ಎಂ.ಕೆ.