ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ

KannadaprabhaNewsNetwork |  
Published : Jan 08, 2024, 01:45 AM IST
ಬೊಮ್ಮಾಯಿ | Kannada Prabha

ಸಾರಾಂಶ

ಸರ್ಕಾರದ ದಾರ್ಷ್ಟ್ಯ ಹೆಚ್ಚಾಗಿದೆ. ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ನಿಜವಾದ ಕೋಮುವಾದಿ: ಬೊಮ್ಮಾಯಿ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಕೇಸ್ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎನ್ನುವುದಕ್ಕೆ ಶ್ರೀಕಾಂತ್ ಪೂಜಾರಿ ಕೇಸ್ ಸಾಕ್ಷಿ. ಶ್ರೀಕಾಂತ್‌ ವಿರುದ್ಧ ಯಾವುದೇ ಪ್ರಕರಣ ಇರಲಿಲ್ಲ. ಆದರೂ ಅವರನ್ನು ಬಂಧಿಸಿದರು ಎಂದರು.

ಶ್ರೀಕಾಂತ ಬಂಧಿಸಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಿಸುತ್ತಿದ್ದಾರೆ. ಸರ್ಕಾರದ ದಾರ್ಷ್ಟ್ಯ ಹೆಚ್ಚಾಗಿದೆ. ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು.

ಪಕ್ಷದ ಚಿಂತನ ಮಂಥನ ಸಭೆಯೂ ಜ. 8ರಂದು ನಡೆಯಲಿದೆ. ಅಲ್ಲಿ ಪಕ್ಷದ ಎಲ್ಲ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಆಗ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ನವರಿಗೆ ರಾಮ ಮಂದಿರ ಆಗಬಾರದು ಎನ್ನುವ ಆಸೆ ಇತ್ತು. ಆದರೆ, ಭವ್ಯವಾದ ರಾಮಮಂದಿರ ನಿರ್ಮಾಣವಾಗಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಗಲಾಟೆ ನಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ. ಅದೇ ರೀತಿ ಇಂಡಿಯಾ ಒಕ್ಕೂಟದ ನಾಯಕರೂ ರೈಲಿನಲ್ಲಿ ಪ್ರಯಾಣ ಮಾಡಬೇಡಿ ಎಂದು ಜನರಿಗೆ ಹೇಳುತ್ತಿದ್ದಾರೆ ಎಂದರು.

ಬಿ.ಕೆ. ಹರಿಪ್ರಸಾದ್ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸಂದರ್ಭ ಬಂದರೆ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಗಲಭೆಯಾದ ಮೇಲೆ ಮಾಹಿತಿ ಪಡೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು.

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎರಡು ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದವರನ್ನು ಅಮಾಯಕರು ಎಂದು ಬಿಂಬಿಸುತ್ತಿದ್ದಾರೆ. ಈ ಪ್ರಕರಣ ತನಿಖಾ ವರದಿಯನ್ನು ಕಾಂಗ್ರೆಸ್‌ನವರೇ ಒಪ್ಪಿಕೊಂಡಿದ್ದಾರೆ. ಈಗ ಅಮಾಯಕರು ಎಂದು ಹೇಳುತ್ತಿರುವುದೇಕೆ? ಈ ಮೂಲಕ ಅಲ್ಪಸಂಖ್ಯಾತರನ್ನು ಮತ್ತು ರಾಜ್ಯದ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದಲ್ಲಿ ಅಕಸ್ಮಾತ್ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದರು.

ಪುನೀತ್ ಕೆರೆಹಳ್ಳಿ ಬಳಸಿ ಕೋಮುಗಲಭೆಗೆ ಬಿಜೆಪಿ ಫತ್ವಾ ಹೊರಡಿಸಿದೆ ಎಂದು ಆರೋಪಿಸಿರುವ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಪುನೀತ್ ಕೆರೆಹಳ್ಳಿ ಸೇರಿದಂತೆ ಯಾರದೇ ಪ್ರಕರಣದಲ್ಲಿ ಕಾಂಗ್ರೆಸ್ ಜನರಲ್ಲಿ ಕೋಮು ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ನಿಜವಾದಿ ಕೋಮುವಾದಿ ಎಂದು ಆರೋಪಿಸಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ